ಬೆಂಗಳೂರು: ಇಲ್ಲಿನ ಸಂಪೀಗೆಹಳ್ಳಿ (Sampigehalli) ಠಾಣೆ ವ್ಯಾಪ್ತಿಯಲ್ಲಿ ಹ್ಯಾಂಡ್ ಗ್ರೆನೇಡ್ (Hand Grenade) ಪತ್ತೆಯಾಗಿದ್ದು ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಸಂಪಿಗೆಹಳ್ಳಿ ಬಳಿಯ ಬೆಳ್ಳಳ್ಳಿಯ ಅಬ್ದುಲ್ ರೆಹಮಾನ್ ಮನೆಯಲ್ಲಿ ಹ್ಯಾಂಡ್ ಗ್ರನೇಡ್ ಪತ್ತೆಯಾಗಿದೆ. ಸ್ಫೋಟಕಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಂಬ್ ಮಾದರಿಯ ಸ್ಫೋಟಕವನ್ನು ವಶಕ್ಕೆ ಪಡೆದ ಪೊಲೀಸರು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (FSL) ರವಾನಿಸಿದ್ದಾರೆ. ಇದನ್ನೂ ಓದಿ: ‘ಡ್ರ್ಯಾಗನ್’ ಚಿತ್ರದ ಬಳಿಕ ಹೆಚ್ಚಿದ ಬೇಡಿಕೆ- ‘ಮುಗಿಲ್‌ಪೇಟೆ’ ನಟಿಗೆ ಬಂಪರ್ ಆಫರ್
ಅಬ್ದುಲ್ ರೆಹಮಾನ್ ವಿಚಾರಣೆ ವೇಳೆ, ಎಲ್ಲಿಯೋ ಸಿಕ್ಕಿತ್ತು. ಬಾಂಬ್ ಮಾದರಿಯ ವಸ್ತು ರಸ್ತೆಯಲ್ಲಿ ಸಿಕ್ಕಿತ್ತು ಎಂದು ಹೇಳಿದ್ದಾನೆ. ಇದನ್ನೂ ಓದಿ: ಮನಿ ಕ್ರೈಸಿಸ್ ಇತ್ತು ಈಗ ಹನಿ ಕ್ರೈಸಿಸ್ ಶುರುವಾಗಿದೆ: ಬೊಮ್ಮಾಯಿ