ಬೆಂಗಳೂರು: ನಾಗಮಂಗಲದ ಕೋಮುಗಲಭೆ, ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಾರಿಸಿದ ಘಟನೆ ಹಾಗೂ ಮಂಗಳೂರಿನ ಕೋಮುಗಲಭೆ (Communal Violence) ಪ್ರಕರಣವನ್ನು ಎನ್‌ಐಎ (NIA) ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ (Bengaluru) ಮಾತನಾಡಿದ ಅವರು, ಇಷ್ಟು ಮುಸ್ಲಿಮರು ಪೆಟ್ರೋಲ್ ಬಾಂಬ್ ಎಲ್ಲಿಂದ ತಂದಿದ್ದಾರೆ? ಅದು ಮಸೀದಿಗಳಿಂದ ಬಂದಿದೆಯೇ ಎಂಬುದೂ ಸೇರಿದಂತೆ ಎಲ್ಲಾ ಸಂಗತಿಗಳನ್ನು ತನಿಖೆ ಮಾಡಬೇಕಿದೆ. ಇದಕ್ಕಾಗಿ ಈ ಎಲ್ಲಾ ಪ್ರಕರಣಗಳನ್ನು ಎನ್‌ಐಎಗೆ ವಹಿಸಬೇಕು. ನಾಗಮಂಗಲದ ಕೋಮುಗಲಭೆ (Nagamangala Violence) ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್‌ನ (Congress) ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ಓಡಾಡಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮುಸ್ಲಿಂ ಸಂಘಟನೆಗಳಿಗೆ ಹಾಗೂ ಭಯೋತ್ಪಾದಕರಿಗೆ ಯಾವುದೇ ಭಯವಿಲ್ಲ. ನಮ್ಮನ್ನು ಕಾಂಗ್ರೆಸ್ ಬೆಂಬಲಿಸುತ್ತದೆ ಎಂಬ ಧೈರ್ಯದಿಂದ ಅವರು ಹೀಗೆ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: ನನ್ನ ಆಡಿಯೋ ಅಲ್ಲ, ಮುಡಾ, ನಾಗಮಂಗಲ ಗಲಭೆ ಕೇಸ್ ಡೈವರ್ಟ್ ಮಾಡಲು ಅರೆಸ್ಟ್: ಮುನಿರತ್ನ
Advertisement
Advertisement
ರಾಹುಲ್ ಗಾಂಧಿ ವಿದೇಶಕ್ಕೆ ಹೋಗಿ ದೇಶ ವಿರೋಧಿ ಶಕ್ತಿಗಳ ಜೊತೆ ಟೀ ಪಾರ್ಟಿ ಮಾಡುತ್ತಿದ್ದಾರೆ. ದೇಶ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಮತ್ತೆ ದೇಶ ವಿರೋಧಿ ಶಕ್ತಿಗಳು ತಲೆ ಎತ್ತಲು ಸಹಕಾರ ನೀಡುತ್ತಿದೆ. ಪ್ರಗತಿಪರರ ಮುಖವಾಡ ಹಾಕಿಕೊಂಡ ಸಾಹಿತಿಗಳು ಹಾಗೂ ನಗರ ನಕ್ಸಲರು ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ಇರ‍್ಯಾರೂ ಈ ಘಟನೆಗಳನ್ನು ಖಂಡಿಸುತ್ತಿಲ್ಲ. ಪ್ರತಿ ದಿನ ಹಿಂದೂಗಳ ಮೇಲೆ ಹಲ್ಲೆಗಳು ನಡೆಯುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಂ ಆವಾಸ್ ಯೋಜನೆಯಡಿ ಔರಾದ್ ಕ್ಷೇತ್ರಕ್ಕೆ 3,923 ಮನೆಗಳು ಮಂಜೂರು: ಪ್ರಭು ಚವ್ಹಾಣ್
Advertisement
ಮುನಿರತ್ನರನ್ನು ತಕ್ಷಣ ಬಂಧನ ಮಾಡಿದ್ದೇಕೆ?
ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಾಗ ಈ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಆದರೆ ಶಾಸಕ ಮುನಿರತ್ನ (Muniratna) ವಿಚಾರದಲ್ಲಿ ತಕ್ಷಣ ಬಂಧಿಸಲಾಗಿದೆ. ಶಾಸಕರು ನಿಂದಿಸಿದ್ದರೆ ಕಾನೂನು ಕ್ರಮ ಕೈಗೊಳ್ಳಲಿ. ಫೋರೆನ್ಸಿಕ್ ಲ್ಯಾಬ್‌ಗೆ ಧ್ವನಿಮುದ್ರಣ ಕಳುಹಿಸದೇ ಎಲ್ಲಾ ತೀರ್ಮಾನ ಮಾಡುವುದಾದರೆ ಆ ಲ್ಯಾಬ್‌ಗಳನ್ನು ಮೊದಲು ಮುಚ್ಚಿಸಲಿ. ಶಾಸಕರ ವಿವರಣೆ ಕೂಡ ಕೇಳದೆ ಕೂಡಲೇ ಕ್ರಮ ವಹಿಸಲಾಗಿದೆ. ಕಾನೂನು ಪ್ರಕಾರ ಸರ್ಕಾರ ನಡೆದುಕೊಳ್ಳದೇ ದ್ವೇಷದ ರಾಜಕಾರಣ ಮಾಡಿದೆ ಎಂದು ದೂರಿದರು. ಇದನ್ನೂ ಓದಿ: ಮುನಿರತ್ನ ಬೈದಿದ್ದು ಇನ್ನೂ ಸಾಬೀತಾಗಿಲ್ಲ, ಇದು ಸಿಡಿ ಶಿವು ಕೆಲಸ: ರಮೇಶ್ ಜಾರಕಿಹೊಳಿ
Advertisement
ನಾಗಮಂಗಲದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿರುವುದರ ಕುರಿತು ಬಿಜೆಪಿ (BJP) ಸತ್ಯಶೋಧನಾ ಸಮಿತಿ ಪರಿಶೀಲನೆ ಮಾಡಲಿದೆ. ಅದು ನಿಜವಾಗಿದ್ದರೆ ಬಿಜೆಪಿ ಹೋರಾಟ ಮಾಡಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ವಂದೇ ಮೆಟ್ರೋ ಈಗ ‘ನಮೋ ಭಾರತ್ ರೈಲು’ – ಚಾಲನೆ ನೀಡಿದ ಮೋದಿ