ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

Public TV
2 Min Read
S Jaishankar

ನವದೆಹಲಿ: ಅಮಾನತಿನಲ್ಲಿಟ್ಟಿರುವ ಸಿಂಧೂ ನದಿ ಒಪ್ಪಂದವನ್ನು (Indus Treaty) ಪುನರ್‌ ಪರಿಶೀಲಿಸುವಂತೆ ಪಾಕಿಸ್ತಾನ (Pakistan) ಬೇಡಿಕೊಂಡಿದೆ ಎಂದು ವಿದೇಶಾಂಗ ಸಚಿವ ಜೈಶಂಕರ್‌ (Jaishankar) ಹೇಳಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಾಕಿಸ್ತಾನದ ಜೊತೆ ಕೇವಲ ಭಯೋತ್ಪಾದನೆ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರ (POK) ಕುರಿತ ಚರ್ಚೆ ಮಾತ್ರ ಇರಲಿದೆ. ಹಸ್ತಾಂತರಿಸಬೇಕಾದ ಭಯೋತ್ಪಾದಕರ ಪಟ್ಟಿಯನ್ನು ಪಾಕಿಸ್ತಾನ ಬಳಿಯಿದೆ. ಗಡಿ ಭಯೋತ್ಪಾದನೆ ನಿಲ್ಲಿಸುವವರೆಗೂ ಸಿಂಧೂ ನದಿ ಒಪ್ಪಂದ ರದ್ದು ಮುಂದುವರಿಯಲಿದೆ ಎಂದು ಪಟ್ಟು ಹಿಡಿದಿದ್ದಾರೆ.

ಉಗ್ರ ನೆಲೆಗಳನ್ನು ಧ್ವಂಸಗೊಳಿಸುವ ಗುರಿಯಲ್ಲಿ ನಾವು ಯಶಸ್ಸು ಸಾಧಿಸಿದ್ದೇವೆ. ಉಗ್ರ ನೆಲೆಗಳ ಮೇಲೆ ನಾವು ದಾಳಿ ಮಾಡುತ್ತಿದ್ದೇವೆ ಎಂಬ ಸಂದೇಶವನ್ನು ಕಳುಹಿಸಿದ್ದೆವು. ನಾವು ಸೇನೆಯನ್ನು ಗುರಿಯಾಗಿಸಿ ದಾಳಿ ಮಾಡಿರಲಿಲ್ಲ. ಅವರು ಈ ಉತ್ತಮ ಸಲಹೆಯನ್ನು ಸ್ವೀಕರಿಸಲಿಲ್ಲ. ಒಮ್ಮೆ ಕೆಟ್ಟ ಹೊಡೆತ ಬಿದ್ದಮೇಲೆ ಕದನ ವಿರಾಮಕ್ಕೆ ಗೋಗರೆಯಿತು ಎಂದು ಹೇಳಿದರು. ಇದನ್ನೂ ಓದಿ: ರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಸುರಕ್ಷಿತವೇ? – ರಾಜನಾಥ್ ಸಿಂಗ್

baglihar dam India Pakistan sindhu river

ನಾವು ಎಷ್ಟು ಹಾನಿ ಮಾಡಿದ್ದೇವೆ ಎಂಬುದನ್ನು ಉಪಗ್ರಹ ಚಿತ್ರಗಳು ಹೇಳುತ್ತಿವೆ. ನಮ್ಮ ಮತ್ತು ಪಾಕಿಸ್ತಾನ ಮಧ್ಯೆ ಮಾತುಕತೆ ದ್ವಿಪಕ್ಷೀಯಯವಾಗಿರುತ್ತದೆ. ಈ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಒಪ್ಪಂದವನ್ನು ಅಮಾನತಿನಲ್ಲಿಟ್ಟ ಕಾರಣ ಭಾರತ ಸಿಂಧೂ ನದಿಯ ಉಪನದಿಗಳಿಗೆ ಅಡ್ಡಲಾಗಿ ಕಟ್ಟಲಾಗಿದ್ದ ಜಲಾಶಯದಿಂದ ಯಾವಾಗ ಬೇಕಾದರೂ ನೀರು ಬಿಡಬಹುದು ಮತ್ತು ಯಾವಾಗ ಬೇಕಾದರೂ ನೀರನ್ನು ತಡೆದು ಹಿಡಿಯಬಹುದು. ಒಪ್ಪಂದ ಜಾರಿಯಲ್ಲಿದ್ದಾಗ ಜಲಾಶಯದಿಂದ ನೀರನ್ನು ಹೊರಗೆ ಹರಿಸುವಾಗ ಭಾರತ ಪಾಕಿಸ್ತಾನಕ್ಕೆ ತಿಳಿಸಬೇಕಿತ್ತು. ಆದರೆ ಈಗ ಭಾರತ ತನಗೆ ಇಷ್ಟ ಬಂದ ಸಮಯದಲ್ಲಿ ನೀರನ್ನು ಜಲಾಶಯದಿಂದ ಹರಿಸುತ್ತಿದೆ.

ರಕ್ತ ಮತ್ತು ನೀರು ಜೊತೆಯಾಗಿ ಹರಿಯಲು ಸಾಧ್ಯವಿಲ್ಲ. ಭಯೋತ್ಪಾದಕತೆ ಮತ್ತು ಮಾತುಕತೆ ಎರಡು ಜೊತೆಯಾಗಿ ಸಾಗುವುದಿಲ್ಲ. ಉಗ್ರರ ವಿರುದ್ಧ ಪಾಕ್‌ ಕಠಿಣ ಕ್ರಮ ಕೈಗೊಳ್ಳುವವರೆಗೂ ಈ ಒಪ್ಪಂದ ಅಮಾನತಿನಲ್ಲಿ ಇರಲಿದೆ ಎಂದು ಭಾರತ ಹೇಳಿತ್ತು. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

ಬೇಸಿಗೆಯಲ್ಲಿ ಭಾರತ ಕೆಲ ದಿನಗಳ ಕಾಲ ನೀರನ್ನು ಹಿಡಿದಿಟ್ಟುಕೊಳ್ಳಬಹುದು. ಆದರೆ ದೀರ್ಘ ಸಮಯದವರೆಗೆ ನೀರನ್ನು ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಪಾಕಿಸ್ತಾನಕ್ಕೆ ಹರಿಯುವ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲು ಭಾರತ ಈಗ ಮತ್ತೆ ಎರಡು ಜಲಾಶಯ ನಿರ್ಮಾಣಕ್ಕೆ ಮುಂದಾಗಿದೆ.

Share This Article