ನಟ ವಿಜಯ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಪಾರ್ಥಿವ ಶರೀರವನ್ನ ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಬ್ಯಾಂಕಾಕ್‌ನಿಂದ ಕಾರ್ಗೋ ವಿಮಾನದಲ್ಲಿ ತಂದ ಮೃತದೇಹವನ್ನ ಸುಮಾರು 30 ನಿಮಿಷಗಳ ಕಸ್ಟಮ್ಸ್ ಕ್ಲಿಯರೆನ್ಸ್ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು.
ಬ್ಯಾಂಕಾಕ್‌ನಿಂದ ಪಾರ್ಥಿವ ಶರೀರ ಹೊತ್ತ ವಿಮಾನ ಬಂದಿಳಿಯುತ್ತಿದ್ದಂತೆ ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಕಾರ್ಯ ನಡೆಸಿದರು. ಸುಮಾರು 30 ನಿಮಿಷಗಳ ಕಾಲ ಬಾಕ್ಸ್‌ನಲ್ಲಿ ತಂದಿದ್ದ ಮೃಹದೇಹವನ್ನ ಸ್ಕ್ಯಾನಿಂಗ್ ಮಾಡಿ ತಪಾಸಣೆ ಮಾಡಿದ ಬಳಿಕ ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ನಂತರ ಸ್ಪಂದನಾ ಮೃತದೇಹ ಹೊತ್ತ ಅಂಬುಲೆನ್ಸ್ ಏರ್ಪೋರ್ಟ್‌ನಿಂದ ಮಲ್ಲೇಶ್ವರಂ ಮನೆಕಡೆಗೆ ಹೊರಟಿತು.
ನಟ ವಿಜಯರಾಘವೇಂದ್ರ, ಶ್ರೀಮುರಳಿ, ಚಿಕ್ಕಪ್ಪ ಬಿ.ಕೆ ಹರಿಪ್ರಸಾದ್, ಶಾಸಕ ಮುನಿರತ್ನ, ಮಾವ ಚಿನ್ನೇಗೌಡ ಹಲವು ಪ್ರಮುಖರು ಏರ್ಪೋರ್ಟ್‌ನಲ್ಲೇ ಇದ್ದು ಮೃತದೇಹವನ್ನ ಸ್ವೀಕರಿಸಿದ್ದಾರೆ. ಮೃತದೇಹ ಹಸ್ತಾಂತರಿಸುತ್ತಿದ್ದಂತೆ ಮಲ್ಲೇಶ್ವರಂ ಮನೆಗೆ ತೆರಳಿದ ವಿಜಯ ರಾಘವೇಂದ್ರ ಪುತ್ರ ಶೌರ್ಯನನ್ನ ಕೈ ಹಿಡಿದೆ ಕರೆತಂದಿದ್ದಾರೆ. ಮಲ್ಲೇಶ್ವರಂನ ಮನೆಗೆ ಪಾರ್ಥಿವ ಶರೀರ ತರಲಾಗುತ್ತಿದ್ದು, ಪಾರ್ಥಿವ ಶರೀರಕ್ಕೆ ಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಪೂಜಾ ವಿಧಿವಿಧಾನ ನೇರವೇರಿದ ಬಳಿಕ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ಸ್ನೇಹಿತರು, ಆಪ್ತರು ಈಗಾಗಲೇ ಮಲ್ಲೇಶ್ವರಂನ ಮನೆಯ ಮುಂದೆ ಜಮಾಯಿಸಿದ್ದಾರೆ.
ಸ್ಪಂದನಾ ಅವರ ಅಂತಿಮ ದರ್ಶನಕ್ಕೆ ಮಲ್ಲೇಶ್ವರಂ ಸ್ಪಂದನಾ ನಿವಾಸದ ಮುಂಭಾಗ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸ್ಪಂದನಾ ಸಹೋದರ ರಕ್ಷಿತ್ ಶಿವರಾಂ, ಮಾವ ಚಿನ್ನೇಗೌಡ ನೇತೃತ್ವದಲ್ಲಿ ಅಂತಿಮ ದರ್ಶನಕ್ಕೆ ತಯಾರಿ ಮಾಡಿಕೊಳ್ಳಲಾಗಿದೆ. ವಿಜಯ ರಾಘವೇಂದ್ರ ಕುಟುಂಬ ಕೂಡ ಸ್ಪಂದನಾ ಅವರ ತವರು ಮನೆಗೆ ಆಗಮಿಸಿದೆ. ಇದನ್ನೂ ಓದಿ: Breaking: ಸ್ಪಂದನಾ ಪಾರ್ಥಿವ ಶರೀರ ಹೊತ್ತ ವಿಮಾನ, ಬೆಂಗಳೂರಿಗೆ ಆಗಮನ
ಬುಧವಾರ (ಆ.9) ಮಧ್ಯಾಹ್ನ 1 ಗಂಟೆಯವರೆಗೂ ಸ್ಪಂದನಾ ಅವರ ಪಾರ್ಥಿವ ಶರೀರವನ್ನ ಸಾರ್ವಜನಿಕರ ದರ್ಶನಕ್ಕೆ ಇಟ್ಟು, ನಂತರ ಬೆಂಗಳೂರಿನ ಹರಿಶ್ಚಂದ್ರ ಘಾಟ್ ನಲ್ಲಿ ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನಗಳು ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಕೆಲವೇ ಗಂಟೆಗಳಲ್ಲಿ ಸ್ಪಂದನಾ ಮೃತದೇಹ ಬೆಂಗಳೂರಿಗೆ: ಅಂತಿಮ ದರ್ಶನಕ್ಕೆ ಸಿದ್ಧತೆ
Web Stories