ಉದ್ಯಮಿ ಸೋಹೈಲ್ ಕೈಹಿಡಿದ `ಬಿಂದಾಸ್’ ನಟಿ ಹನ್ಸಿಕಾ ಮೋಟ್ವಾನಿ

Public TV
1 Min Read
hansika

`ಬಿಂದಾಸ್’ (Bindas Kannada) ನಟಿ ಹನ್ಸಿಕಾ ಮೋಟ್ವಾನಿ (Hansika Motwani)  ತನ್ನ ಬಹುಕಾಲದ ಗೆಳೆಯ ಸೋಹೈಲ್ ಕಥುರಿಯಾ(Sohael Kathuriya) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಜೈಪುರದ ಮುಂಡೋಟಾ ಕೋಟೆಯಲ್ಲಿ ಈ ಜೋಡಿ ಹೊಸ ಬಾಳಿಗೆ ಕಾಲಿಟ್ಟಿದ್ದಾರೆ.

hansika 1

ಕನ್ನಡದ `ಬಿಂದಾಸ್’ ಸಿನಿಮಾ ಮೂಲಕ ಕನ್ನಡಿಗರಿಗೆ ಪರಿಚಿತರಾದ ಬಹುಭಾಷಾ ನಟಿ ಹನ್ಸಿಕಾ ಮೋಟ್ವಾನಿ, ಸೋಹೈಲ್ ಕಥುರಿಯಾ ಜೊತೆ ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರಾದಯದ ಪ್ರಕಾರ ಮದುವೆ ಆಗಿದ್ದಾರೆ. ಗುರುಹಿರಿಯರ ಸಮ್ಮುಖದಲ್ಲಿ ಅದ್ದೂರಿಯಾಗಿ ಜೈಪುರದಲ್ಲಿ ಮದುವೆ (Wedding) ನಡೆದಿದೆ. ಇದನ್ನೂ ಓದಿ: ಸ್ಯಾಂಡಲ್ ವುಡ್ ನಲ್ಲಿ ಎರಡು ದಿನ ಟೆಲಿವಿಷನ್ ಕ್ರಿಕೆಟ್ ಲೀಗ್

ಇನ್ನೂ ಕೆಲ ದಿನಗಳ ಹಿಂದೆ ಪ್ಯಾರೀಸ್‌ನಲ್ಲಿ ಹನ್ಸಿಕಾಗೆ ಸೋಹೈಲ್ ಪ್ರಪೋಸ್ ಮಾಡಿದ್ದರು. ಈ ಕುರಿತ ಫೋಟೋಗಳನ್ನ ಶೇರ್ ತನ್ನ ಜೀವನ ಸಂಗಾತಿಯನ್ನ ಸೋಷಿಯಲ್ ಮೀಡಿಯಾ ಮೂಲಕ ನಟಿ ಪರಿಚಯಿಸಿದ್ದರು.

ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಅಭಿಮಾನಿಗಳು, ಸಿನಿಮಾರಂಗದ ಸ್ನೇಹಿತರು ಶುಭಹಾರೈಸುತ್ತಿದ್ದಾರೆ. ಸದ್ಯ ತಮ್ಮ ಮದುವೆಯ ಫೋಟೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *