BollywoodCinemaLatestMain PostSouth cinema

ಪ್ರೀ ವೆಡ್ಡಿಂಗ್ ಸಂಭ್ರಮದಲ್ಲಿ ಹನ್ಸಿಕಾ ಮೋಟ್ವಾನಿ ಜೋಡಿ

ಕ್ಷಿಣ ಭಾರತದ ಸ್ಟಾರ್ ನಟಿಯರಲ್ಲಿ ಒಬ್ಬರಾಗಿರುವ ಹನ್ಸಿಕಾ ಮೋಟ್ವಾನಿ(Hansika Motwani) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಬ್ಯುಸಿನೆಸ್‌ಮ್ಯಾನ್ ಸೊಹೈಲ್ (Sohail) ಜೊತೆ ಹಸೆಮಣೆ ಏರಲು ರೆಡಿಯಾಗಿದ್ದಾರೆ. ಸದ್ಯ ಈ ಜೋಡಿ ಪ್ರೀ ವೆಡ್ಡಿಂಗ್ (Pre-wedding) ಸಂಭ್ರಮದಲ್ಲಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತ ಫೋಟೋಗಳು ಸದ್ದು ಮಾಡುತ್ತಿದೆ.

ಬಾಲನಟಿಯಾಗಿ ಎಂಟ್ರಿ ಕೊಟ್ಟು, ಬಹುಭಾಷೆಗಳಲ್ಲಿ ನಾಯಕಿಯಾಗಿ ಮಿಂಚಿದ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕಥುರಿಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಪ್ರೀ ವೆಡ್ಡಿಂಗ್ ಶೂಟ್ ಸಂಭ್ರಮದಲ್ಲಿ ಈ ಜೋಡಿ ಮಿಂಚಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲಿ ಮದುವೆ ನಡೆಯಲಿದೆ. ಇದನ್ನೂ ಓದಿ:EXCLUSIVE:ಆಗಿದ್ದು ಎಂಗೇಜ್‌ಮೆಂಟ್ ಅಲ್ಲ, ನಾನಿನ್ನೂ ಒಪ್ಪಿಲ್ಲ: ವೈಷ್ಣವಿ

ನಟಿ ರೆಡ್ ಕಲರ್ ಸ್ಯಾರಿಯಲ್ಲಿ ಕಾಣಿಸಿಕೊಂಡರೆ, ಸೊಹೈಲ್ ರೆಡ್ ಕಲರ್ ಕುರ್ತಾದಲ್ಲಿ ಕ್ಯಾಮೆರಾ ಕಣ್ಣಿಗೆ ಪೋಸ್ ನೋಡಿದ್ದಾರೆ. ಇತ್ತೀಚೆಗೆ ಉದ್ಯಮಿ ಸೊಹೈಲ್ ಪ್ಯಾರಿಸ್‌ನಲ್ಲಿ ನಟಿಗೆ ಪ್ರಪೋಸ್ ಮಾಡಿದ್ದರು. ಈ ಕುರಿತು ಹನ್ಸಿಕಾ ಅಧಿಕೃತವಾಗಿ ಮದುವೆಯ ಬಗ್ಗೆ ಸಾಮಾಜಿಕ ಜಾಲತಾಣದ ಮೂಲಕ ತಿಳಿಸಿದ್ದರು.

ಜೈಪುರದ 450 ವರ್ಷದ ಹಳೆಯ ಕಟ್ಟಡದಲ್ಲಿ ಈ ಜೋಡಿ ಹಸೆಮನೆ ಏರಲಿದೆ. ಡಿಸೆಂಬರ್ 2ರಿಂದ ಮದುವೆ ಶಾಸ್ತçಗಳು ಪ್ರಾರಂಭವಾಗಲಿದೆ. ಡಿಸೆಂಬರ್ 4ರಂದು ಆಪ್ತರ ಸಮ್ಮುಖದಲ್ಲಿ ಈ ಮದುವೆ ಜರುಗಲಿದೆ.

Live Tv

Back to top button