ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನೀತಿ ಮತ್ತು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ ಘಟನೆ ಖಂಡಿಸಿ ನಾಳೆ (ಜನವರಿ 29) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಸಲು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಸೂಚಿಸಿದ್ದಾರೆ.
ನಾಳೆ ಬೆಳಗ್ಗೆ 10 ಗಂಟೆಗೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಮಂಡ್ಯ ಜಿಲ್ಲೆ ಕೆರಗೋಡಿನಲ್ಲಿ ಹನುಮಧ್ವಜವನ್ನು ಕೆಳಗಿಳಿಸಿ ಹರಿದಿರುವುದನ್ನು ಖಂಡಿಸಲಾಗುವುದು. ರಾಷ್ಟ್ರಧ್ವಜವನ್ನು ಮಧ್ಯಾಹ್ನ 3 ಗಂಟೆಗೆ ಹಾರಿಸುವ ಮೂಲಕ ಅವಮಾನ ಮಾಡಿದ್ದಾರೆ.
Advertisement
Advertisement
ರಾಷ್ಟ್ರಧ್ವಜವನ್ನು ಬೆಳಗ್ಗೆ 9 ಗಂಟೆಗೆ ಹಾರಿಸಿ ಸಂಜೆ ವೇಳೆಗೆ ಅದನ್ನು ಕೆಳಕ್ಕಿಳಿಸಬೇಕೆಂಬ ನಿಯಮವನ್ನು ಉಲ್ಲಂಘಿಸಿ ಅವಮಾನ ಮಾಡಿದ್ದನ್ನು ಖಂಡಿಸಲಾಗುತ್ತದೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
Advertisement
Advertisement
ಏನಿದು ಪ್ರಕರಣ?
ರಾತ್ರೋರಾತ್ರಿ ಹನುಮ ಧ್ವಜ (Hanuma Flag) ತೆರವಿಗೆ ಅಧಿಕಾರಿಗಳು ಆಗಮಿಸಿದ ಸಂದರ್ಭ ರೊಚ್ಚಿಗೆದ್ದ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧವೇ ತಿರುಗಿಬಿದ್ದ ಘಟನೆ ಮಂಡ್ಯ (Mandya) ಜಿಲ್ಲೆಯಲ್ಲಿ ನಡೆದಿದೆ. ಅಧಿಕಾರಿಗಳು ಭಾನುವಾರ (ಜ.28) ಮುಂಜಾನೆ 3 ಗಂಟೆ ವೇಳೆಗೆ ಗ್ರಾಮಕ್ಕೆ ಆಗಮಿಸಿ ಧ್ವಜ ತೆರವಿಗೆ ಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಿಂದ ಮಂಡ್ಯ ತಾಲೂಕಿನ ಕೆರೆಗೋಡು (Keregodu) ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ಹನುಮಧ್ವಜ ತೆರವು ಮಾಡದಂತೆ ನೂರಾರು ಜನ ಗ್ರಾಮಸ್ಥರು ಆಗ್ರಹಿಸಿದ್ದರು. ಪ್ರಕರಣ ವಿಚಾರವಾಗಿ ರಾಜ್ಯ ಸರ್ಕಾರವನ್ನು ಬಿಜೆಪಿ ನಾಯಕರು ಟೀಕಿಸಿದ್ದಾರೆ. ಅಲ್ಲದೇ ನಾಳೆ (ಸೋಮವಾರ) ಪ್ರತಿಭಟನೆಗೆ ಕರೆ ನೀಡಿದ್ದಾರೆ.