ಭೋಪಾಲ್: ಅನುಮತಿಯಿಲ್ಲದೇ ಭೋಪಾಲ್‌ನ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾರ್ಥಿಗಳ ಗುಂಪೊಂದು ಹನುಮಾನ್ ಚಾಲೀಸಾ ಪಠಿಸಿದ್ದಕ್ಕಾಗಿ ಆಡಳಿತ ಮಂಡಳಿ ದಂಡ ವಿಧಿಸಿತ್ತು. ಆದರೆ ಇದಕ್ಕೆ ಮಧ್ಯಪ್ರದೇಶ ಸರ್ಕಾರ ಆಕ್ಷೇಪ ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ದಂಡ ವಿಧಿಸದಂತೆ ಖಡಕ್ ಸೂಚನೆ ನೀಡಿದೆ.
ಹಿಂದೂಸ್ತಾನದಲ್ಲಿ ಅಲ್ಲದೇ ಬೇರೆಲ್ಲಿ ವಿದ್ಯಾರ್ಥಿಗಳು ಹನುಮಾನ್ ಚಾಲೀಸಾ ಪಠಿಸಬೇಕು ಎಂದು ಮಧ್ಯಪ್ರದೇಶ ಸರ್ಕಾರದ ಗೃಹ ಸಚಿವ ನರೋತ್ತಮ್ ಮಿಶ್ರಾ ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್‌ಗೆ ಜಾಮೀನು
Advertisement
Advertisement
ಭೋಪಾಲ್‌ನಿಂದ ಸುಮಾರು 60 ಕಿಮೀ ದೂರದಲ್ಲಿರುವ ಕೊತ್ರಿ ಕಲಾನ್‌ನಲ್ಲಿರುವ ವೆಲ್ಲೂರ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಮ್ಯಾನೇಜ್‌ಮೆಂಟ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.
Advertisement
ಅನುಮತಿಯಿಲ್ಲದೇ ವಿದ್ಯಾರ್ಥಿಗಳು ಗುಂಪುಗೂಡಿ ಹನುಮಾನ್ ಚಾಲೀಸಾ ಪಠಿಸಿದ್ದರು. ಹೀಗಾಗಿ ಆಡಳಿತ ಮಂಡಳಿ ವಿದ್ಯಾರ್ಥಿಗಳಿಗೆ ದಂಡ ವಿಧಿಸಿತ್ತು. ಸುಮಾರು 20 ವಿದ್ಯಾರ್ಥಿಗಳು ಜಮಾಯಿಸಿದ್ದರು. ಕಾಲೇಜು ಅವರ ಪೈಕಿ ಏಳು ಮಂದಿಗೆ ತಲಾ 5,000 ರೂ. ದಂಡ ವಿಧಿಸಿತ್ತು. ಇದನ್ನೂ ಓದಿ: 11 ಪ್ರಯಾಣಿಕರಿದ್ದ ಕಾರು ನದಿಗೆ – 9 ಮಂದಿ ದುರ್ಮರಣ
Advertisement
ವಿದ್ಯಾರ್ಥಿಗಳಿಗೆ ದಂಡ ವಿಧಿಸದಂತೆ ಕಾಲೇಜಿಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಲೇಜಿನಲ್ಲಿ ವಿಚಾರಣೆ ನಡೆಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.