ಮುಂಬೈ: ಹನುಮಾನ್ ಚಾಲೀಸಾ ಪಠಿಸುವ ವಿಚಾರಕ್ಕಾಗಿ ಮುಂಬೈನಲ್ಲಿರುವ ಸಂಸದ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಅವರ ನಿವಾಸದ ಹೊರಗೆ ಗದ್ದಲ ಸೃಷ್ಟಿಸಿದ ಆರೋಪದ ಮೇಲೆ 6 ಮಂದಿ ಶಿವಸೇನಾ ಕಾರ್ಯಕರ್ತರನ್ನು ಬಂಧಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇನ್ನಷ್ಟು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಮುಂಬೈ ಪೊಲೀಸರು ಮಾಹಿತಿ ನೀಡಿದ್ದಾರೆ.
Advertisement
ಮುಂಬೈನಲ್ಲಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸದ ಹೊರಗೆ ಹನುಮಾನ್ ಚಾಲೀಸಾ ಪಠಿಸುವುದಾಗಿ ಘೋಷಿಸಿದ ನಂತರ ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸಂಸದ ನವನೀತ್ ರಾಣಾ ಮತ್ತು ಶಾಸಕ ರವಿ ರಾಣಾ ಅವರ ನಿವಾಸದ ಹೊರಗೆ ಶಿವಸೇನೆಯ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದರು. ಇದನ್ನೂ ಓದಿ: ಉದ್ಧವ್ ಠಾಕ್ರೆ ಎಂಟ್ರಿ – 14 ದಿನಗಳ ಕಸ್ಟಡಿಗೆ ಒಳಗಾದ ಸಂಸದೆ, ಶಾಸಕ ದಂಪತಿ
Advertisement
ನವನೀತ್ ಹಾಗೂ ರವಿ ರಾಣಾ ಅವರ ನಿವಾಸದ ಹೊರಗೆ ಗಲಾಟೆ ಸೃಷ್ಟಿಸಿದ ಪಕ್ಷದ ಕಾರ್ಯಕರ್ತರ ವಿರುದ್ಧ ಪೊಲೀಸರು ನಿನ್ನೆ (ಏಪ್ರಿಲ್ 23) ಪ್ರಕರಣ ದಾಖಲಿಸಿದ ನಂತರ, ಇಲ್ಲಿನ ಖಾರ್ ಪೊಲೀಸರು 6 ಶಿವಸೇನಾ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಇತರ ಆರೋಪಿಗಳ ಪತ್ತೆಗೆ ಶೋಧ ನಡೆಯುತ್ತಿದೆ ಎಂದು ಸುದ್ದಿಸಂಸ್ಥೆಯೊಂದು ವರದಿಮಾಡಿದೆ.