ಮುಂಬೈ: ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ, ಮನೆಯಲ್ಲಿ ಆಚರಿಸಿದರೆ ಸಾಕು ಎಂದು ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿಕಾರ ಕಳೆದುಕೊಂಡು ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ. ಅದಕ್ಕಾಗಿ ಈ ರೀತಿ ವಿವಾದವನ್ನು ಸೃಷ್ಟಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ವಿಪಕ್ಷ ಬಿಜೆಪಿಯನ್ನು ವ್ಯಂಗ್ಯ ಮಾಡಿದರು. ಪ್ರತಿಯೊಬ್ಬ ವ್ಯಕ್ತಿಗೂ ಅವರ ಧರ್ಮದ ಬಗ್ಗೆ ಗೌರವ ಇರುತ್ತದೆ. ಆದರೆ ಆ ಗೌರವವನ್ನು ವ್ಯಕ್ತಿಯು ತನ್ನ ಮನೆಯಲ್ಲಿ ಇಟ್ಟುಕೊಂಡರೆ ಒಳ್ಳೆಯದು. ಅದನ್ನು ಸಾರ್ವಜನಿಕವಾಗಿ ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಸಮುದಾಯಗಳ ವಿರುದ್ಧ ದ್ವೇಷ ಹರಡುವ ಪ್ರಯತ್ನಗಳನ್ನು ಮಾಡಿದರೆ ಸಮಾಜದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಮಹಾರಾಷ್ಟ್ರವು ಇಂತಹ ಪರಿಸ್ಥಿತಿಯನ್ನು ಎಂದಿಗೂ ಅನುಭವಿಸಲಿಲ್ಲ. ಆದರೆ ಇಂತಹ ವಿವಾದಗಳು ನಡೆಯುತ್ತಿರುವುದು ನನಗೆ ಆಶ್ಚರ್ಯವಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು. ಇದನ್ನೂ ಓದಿ: 2025ರವರೆಗೂ ನಿತೀಶ್ ಕುಮಾರ್ ಸಿಎಂ ಆಗಿರುತ್ತಾರೆ: ಸುಶೀಲ್ ಕುಮಾರ್ ಮೋದಿ
ಯಾರಾದರೂ ಧಾರ್ಮಿಕ ಕಾರ್ಯಕ್ರಮವನ್ನು ನಡೆಸಲು ಬಯಸಿದರೆ, ಅವರು ಅದನ್ನು ತಮ್ಮ ಮನೆಯಲ್ಲಿ ನಡೆಸಬಹುದು. ಆದರೆ, ನೀವು ಆ ಧಾರ್ಮಿಕ ಕಾರ್ಯಕ್ರಮವನ್ನು ನನ್ನ ಮನೆ ಬಾಗಿಲಲ್ಲಿ ನಡೆಸಲು ನಿರ್ಧರಿಸಿದರೆ, ನನ್ನ ಮೇಲೆ ನಂಬಿಕೆಯಿರುವ ಜನರು ಆತಂಕಕ್ಕೊಳಗಾಗಬಹುದು. ಕೆಲವರು ಅಂತಹ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಈ ರೀತಿ ನಡೆಯುವುದಿಲ್ಲ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು