ಮುಂಬೈ: ಹನುಮಾನ್ ಚಾಲೀಸಾ ಪಠಣ ಮಾಡಿದವರನ್ನು ಬಂಧಿಸಿರುವುದು ಬಾಳಾ ಠಾಕ್ರೆ ಅವರ ಆತ್ಮವನ್ನು ನೋಯಿಸಿದ ಹಾಗೆ ಆಗಿದೆ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಅಶ್ವಿನಿ ಕುಮಾರ್ ಚೌಬೆ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗೆ ಹನುಮಾನ್ ಚಾಲೀಸಾವನ್ನು ಪಠಿಸುವುದಕ್ಕಾಗಿ ಅಥವಾ ಶ್ರೀರಾಮನ ಹೆಸರನ್ನು ತೆಗೆದುಕೊಂಡಿದ್ದಕ್ಕಾಗಿ ಬಂಧಿಸುತ್ತಿದ್ದಾರೆ. ಇದನ್ನೆಲ್ಲಾ ನೋಡಿ ಬಾಳಾ ಸಾಹೇಬರ ಆತ್ಮ ನೊಂದುಕೊಳ್ಳುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.
Advertisement
Advertisement
ಅಮರಾವತಿ ಸಂಸದೆ ನವನೀತ್ ರಾಣಾ ಮತ್ತು ಅವರ ಪತಿ, ಶಾಸಕರಾದ ರವಿ ರಾಣಾ ಅವರು ಮುಂಬೈನಲ್ಲಿರುವ ಉದ್ಧವ್ ಠಾಕ್ರೆ ನಿವಾಸದ ಮುಂದೆ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ರಾಣಾ ದಂಪತಿಯನ್ನು ಬಂಧಿಸಲಾಯಿತು. ಇದನ್ನೂ ಓದಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯನ್ನು ಭೇಟಿಯಾದ ಶರದ್ ಪವಾರ್
Advertisement
Advertisement
ಇದೇ ವೇಳೆ ಧ್ವನಿವರ್ಧಕ ತೆರವುಗೊಳಿಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ಶಬ್ದ ಮಾಲಿನ್ಯದಿಂದ ಜನರು ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಗಳನ್ನು ಪರಿಹರಿಸಲು ಹಲವು ನಿಯಮಗಳಿವೆ. ಅದರಂತೆ ತಡರಾತ್ರಿ ಹಾಗೂ ಮುಂಜಾನೆ ಧ್ವನಿವರ್ಧಕಗಳನ್ನು ಬಳಸಬಾರದು ಎಂದರು.
ಉತ್ತರ ಪ್ರದೇಶ ಸರ್ಕಾರವು ಧಾರ್ಮಿಕ ಸ್ಥಳಗಳಿಂದ ಸುಮಾರು 11,000 ಸಾವಿರ ಧ್ವನಿವರ್ಧಕಗಳನ್ನು ತೆಗೆದುಹಾಕಲಾಗಿದೆ. ಹಾಗೂ 35,221 ವಾಲ್ಯೂಮ್ ಅನ್ನು ಕಡಿಮೆ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಊಟ ನಿರಾಕರಣೆ, ಎಸಿ ಇಲ್ದೆ ನಿದ್ರೆ ಇಲ್ಲ – PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ