– ನೋಟಿಸ್ ನೀಡಿದರೂ ಪ್ರತಿಭಟನೆಗೆ ಮುಂದಾದ ಬಿಜೆಪಿಗರು
– ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ
ಬೆಂಗಳೂರು: ಮಂಡ್ಯದ (Mandya) ಕೆರಗೋಡಿನಲ್ಲಿ (Keragodu) ಹನುಮ ಧ್ವಜ ತೆರವುಗೊಳಿಸಿದ ಪ್ರಕರಣ ಖಂಡಿಸಿ ಇಂದು (ಸೋಮವಾರ) ರಾಜ್ಯಾದ್ಯಂತ ಬಿಜೆಪಿಯಿಂದ (BJP) ಪ್ರತಿಭಟನೆ ನಡೆಯುತ್ತಿದೆ. ಈ ಹಿನ್ನೆಲೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲೂ (Mysuru Bank Circle) ಪ್ರತಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆ ವೇಳೆ ಭಾರೀ ಹೈಡ್ರಾಮಾ ಕಂಡುಬಂದಿತು. ಇದನ್ನೂ ಓದಿ: ಇನ್ನೊಂದೇ ವಾರದಲ್ಲಿ ದೇಶದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ - ಬಿಜೆಪಿ ಸಚಿವರ ಗ್ಯಾರಂಟಿ
Advertisement
ರಾಷ್ಟ್ರಧ್ವಜಕ್ಕೆ ಸರ್ಕಾರದಿಂದ ಅಪಮಾನ ಹಾಗೂ ಹನುಮ ಧ್ವಜ ತೆರವುಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆ ಹಿನ್ನೆಲೆಯಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಐವರು ಇನ್ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಬಿಗಿ ಭದ್ರತೆ ಆಯೋಜಿಸಲಾಗಿದೆ. ಪ್ರತಿಭಟನೆಗೆ ಅವಕಾಶ ನಿರಾಕರಿಸಿ ನೊಟೀಸ್ ಜಾರಿ ಮಾಡಲಾಗಿದೆ. ಆದರೂ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು, ಶಾಸಕರು ಪ್ರತಿಭಟನೆಗೆ ಧುಮುಕಿದ್ದಾರೆ. ಇದನ್ನೂ ಓದಿ: ಶೋಷಿತರ ಸಮಾವೇಶದಲ್ಲಿ ಕ್ಷಿಂಟಾಲ್‌ಗಟ್ಟಲೇ ಚಿಕನ್ ಬಿರಿಯಾನಿ ನೆಲದ ಪಾಲು
Advertisement
Advertisement
ಬ್ಯಾರಿಕೇಡ್ ಮತ್ತು ಪೊಲೀಸ್ ದಿಗ್ಬಂಧನದ ನಡುವೆ ಪ್ರತಿಭಟನೆ ಮಾಡಲಾಗಿದೆ. ಈ ವೇಳೆ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಲ್ಲದೇ ಜೈ ಶ್ರೀರಾಮ್ ಘೋಷಣೆ ಮೊಳಗಿಸುತ್ತಾ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ತಳ್ಳಾಟ, ನೂಕಾಟವೂ ನಡೆದಿದ್ದು, ನಂತರ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ – ತಕ್ಕ ಉತ್ತರ ಕೊಡುತ್ತೇವೆ: ಬೈಡನ್ ಎಚ್ಚರಿಕೆ
Advertisement
ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅಶೋಕ್ ಆಗಮಿಸುವ ಮೊದಲೇ ಪ್ರತಿಭಟನೆ ಮುಗಿದುಹೋಗಿದೆ. ಅಶೋಕ್ ಆಗಮನದ ಮೊದಲೇ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿರುವ ಪ್ರಸಂಗವೂ ನಡೆದಿದೆ. ಇದನ್ನೂ ಓದಿ: ಗಣರಾಜ್ಯೋತ್ಸವ ನೃತ್ಯದಲ್ಲಿ ಕಮಲದ ಹೂವನ್ನು ಎದ್ದು ಕಾಣುವಂತೆ ತೋರಿಸಿದ್ದರು – ಶಿವಲಿಂಗೇಗೌಡ
ಇನ್ನು ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಸಿ.ಕೆ ರಾಮಮೂರ್ತಿ, ಕೆರಗೋಡಿನಲ್ಲಿ ಹನುಮ ಧ್ವಜಕ್ಕೆ ಅಪಮಾನ ಆಗಿದೆ. ಅದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಶಾಸಕ ರವಿ ಗಣಿಗರು ಪೊಲೀಸರನ್ನು ಬಿಟ್ಟು ಲಾಠಿ ಚಾರ್ಜ್ ಮಾಡಿಸಿದ್ದಾರೆ. ಕರ್ನಾಟಕದ ಎಲ್ಲಾ ಜಿಲ್ಲೆಗಳಲ್ಲೂ ಪ್ರತಿಭಟನೆ ಮಾಡುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರದಿಂದ ಹಿಂದೂಗಳಿಗೆ ರಕ್ಷಣೆ ಇಲ್ಲ. ಹೋರಾಟ ಮಾಡುವವರ ಮೇಲೆ ಎಫ್‌ಐಆರ್ ಹಾಕುವ ಕೆಲಸ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಬಾಂಗ್ಲಾದೇಶದ ಮುಖ್ಯಮಂತ್ರಿನಾ? ಪಾಕಿಸ್ತಾನದ ಮುಖ್ಯಮಂತ್ರಿನಾ? ಡಿಸಿ ಕಚೇರಿಗೆ ಮನವಿ ಕೊಡಲು ಪೊಲೀಸರು ಬಿಡುತ್ತಿಲ್ಲ. ನಮ್ಮ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ. ಮಂಡ್ಯ ಶಾಸಕ ರವಿ ಗಣಿಗರನ್ನು ಜೈಲಿಗೆ ಹಾಕಿ, ನಮ್ಮನ್ನಲ್ಲ. ನಾವೇ ರವಿ ಗಣಿಗ ವಿರುದ್ಧ ದೂರು ಕೊಡುತ್ತೇವೆ. ಎಫ್‌ಐಆರ್ ಹಾಕಲಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ