ಬೆಂಗಳೂರು: ನಗರದ ಮೈಸೂರು ರಸ್ತೆಯಲ್ಲಿರೋ ಗಾಳಿ ಆಂಜನೇಯ ದೇವಸ್ಥಾನದ ಬಳಿ ಹನುಮಂತನ ವಿಗ್ರಹವೊಂದು ಪತ್ತೆಯಾಗಿದ್ದು, ಇದೀಗ ಆ ಮೂರ್ತಿಯನ್ನು ನೋಡಲು ಜನ ಮುಗಿಬಿದ್ದಿದ್ದಾರೆ.
ರಾಜಕಾಲುವೆ ಸ್ವಚ್ಛತೆಯ ವೇಳೆ ಈ ಮೂರ್ತಿ ಪತ್ತೆಯಾಗಿದೆ. ಬೆಳಗ್ಗೆ 11 ಗಂಟೆ ಸುಮಾರಿಗೆ ವಿಗ್ರಹ ಕಾಣಿಸಿಕೊಂಡಿದ್ದು, ಕೂಡಲೇ ರಾಜಕಾಲುವೆ ಸ್ವಚ್ಛತೆ ಸಿಬ್ಬಂದಿ ಅದನ್ನು ರಸ್ತೆಬದಿಯಿಟ್ಟಿದ್ದಾರೆ. ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆಯೇ ಸ್ಥಳದಲ್ಲಿ ಸ್ಥಳೀಯರು ಜಮಾಯಿಸಿ ಪೂಜೆ ಸಲ್ಲಿಸಿದ್ದಾರೆ.
Advertisement
ಬಿಬಿಎಂಪಿಯವರು ಮೋರಿ ಕ್ಲೀನ್ ಮಾಡುತ್ತಿದ್ದ ಸಂದರ್ಭದಲ್ಲಿ ವಿಗ್ರಹ ಸಿಕ್ಕಿದೆ. ಬಳಿಕ ಅವರು ಆ ಮೂರ್ತಿಯನ್ನು ತೊಳೆದು ರಸ್ತೆ ಬದಿಯಲ್ಲಿಟ್ಟಿದ್ದಾರೆ. ನಂತರ ನಾವು ಅದಕ್ಕೆ ಪೂಜೆ ಸಲ್ಲಿಸಿದ್ದೇವೆ. ಹೀಗಾಗಿ ಇಲ್ಲಿ ದೇವಸ್ಥಾನ ಕಟ್ಟಬೇಕು. ಇಲ್ಲವೆಂದಲ್ಲಿ ನಾವೆಲ್ಲಾ ಸೇರಿ ಚಿಕ್ಕದಾದ ಒಂದು ದೇವಸ್ಥಾನವನ್ನು ಕಟ್ಟಿಯೇ ಕಟ್ಟುತ್ತೇವೆ ಅಂತ ಸ್ಥಳೀಯ ನಿವಾಸಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡುತ್ತಾ ತಿಳಿಸಿದ್ದಾರೆ.
Advertisement
Advertisement
ಶನಿವಾರವೇ ಮೂರ್ತಿ ಸಿಕ್ಕಿದ ಕಾರಣ ಇಲ್ಲಿ ದೇವಸ್ಥಾನವನ್ನು ಕಟ್ಟಬೇಕು. ಯಾಕಂದ್ರೆ ಈ ಪ್ರದೇಶದಲ್ಲಿ ಯಾವುದೇ ದೇವಸ್ಥಾನವಿಲ್ಲ. ಹೀಗಾಗಿ ಇಲ್ಲೊಂದು ದೇವಸ್ಥಾನವನ್ನು ಕಟ್ಟಿದ್ರೆ ಎಲ್ಲರಿಗೂ ಅನುಕೂಲವಾಗುತ್ತದೆ ಅಂತ ಮಹಿಳೆಯೊಬ್ಬರು ಶಾಸಕರು ಹಾಗೂ ಸ್ಥಳೀಯ ರಾಜಕೀಯ ಮುಖಂಡರಲ್ಲಿ ಆಗ್ರಹಿಸಿದ್ದಾರೆ. ಶನಿವಾರ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದ್ರೆ ಶನಿ ಗ್ರಹದ ದೋಷಗಳು ಕಡಿಮೆಯಾಗುತ್ತದೆ ಎಂಬ ನಂಬಿಕೆ ಇದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv