ಚಾಮರಾಜನಗರ: ಹನೂರು ವನ್ಯಜೀವಿ ವಲಯದಲ್ಲಿ ಅರಣ್ಯ ಇಲಾಖೆ (Forest Department) ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ಗೆ (Hanuru Shootout) ಮೂವರು ಬಲಿಯಾಗಿದ್ದು, ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಮಲೆ ಮಹದೇಶ್ವರ ವನ್ಯಜೀವಿಧಾಮದ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ್ದಾರೆ. ಇದರಿಂದ 10 ಎಕರೆ ಅರಣ್ಯ ಪ್ರದೇಶಕ್ಕೆ ಹಾನಿಯಾಗಿದೆ.
ಎನ್‌ಕೌಂಟರ್ ನಂತರ ಕಳ್ಳಬೇಟೆಗಾರರು ಅರಣ್ಯ ಇಲಾಖೆಯ ಬೇಟೆ ತಡೆ ಶಿಬಿರವನ್ನು ಗುರಿಯಾಗಿಸಿಕೊಂಡು ಸರಣಿ ಕೃತ್ಯಗಳನ್ನು ಎಸಗುತ್ತಿದ್ದಾರೆ. ಕಾವೇರಿ ಹಾಗೂ ಮಲೆ ಮಹದೇಶ್ವರ ವನ್ಯಜೀವಿಧಾಮಗಳಲ್ಲಿ ಅರಣ್ಯ ಸಿಬ್ಬಂದಿಯನ್ನು ದುಷ್ಕರ್ಮಿಗಳು ಟಾರ್ಗೇಟ್ ಮಾಡಿ ದಾಳಿ ನಡೆಸುತ್ತಿದ್ದಾರೆ. ಇದು ತೀವ್ರ ಆತಂಕಕ್ಕೆ ಕಾರಣವಾಗಿದೆ.
ಶಿಲುಬೆಪುರ ಅರಣ್ಯ ಪ್ರದೇಶದಲ್ಲಿ ಜಿಲೇಟಿನ್ ಕಡ್ಡಿ ಇಟ್ಟು ಕಳ್ಳಬೇಟೆ ತಡೆ ಶಿಬಿರಗಳನ್ನು ಸ್ಫೋಟಿಸಿದ್ದರು. ಇದಾದ ಬಳಿಕ ಈಗ ದುಷ್ಕರ್ಮಿಗಳು ಕಾಡಿಗೆ ಬೆಂಕಿ ಹಚ್ಚಿದ್ದು, ಸುಮಾರು 10 ಎಕರೆ ಅರಣ್ಯ ಸಂಪೂರ್ಣವಾಗಿ ಭಸ್ಮವಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಹನೂರು ಎನ್‌ಕೌಂಟರ್ ಕೇಸ್ – ಮೃತ ಮೂವರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ವಿತರಣೆ
ಕೊತ್ತನೂರು ವಲಯದಲ್ಲಿರುವ ಮಿಂಚಿನರೆಹಳ್ಳ ಅಕ್ರಮ ಬೇಟೆ ತಡೆ ಶಿಬಿರವನ್ನು ಡೈನಮೆಟ್ ಹಾಗೂ ಜಿಲೆಟಿನ್ ಕಡ್ಡಿಗಳನ್ನು ಬಳಸಿ ಸ್ಫೋಟಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಸ್ಫೋಟದ ತೀವ್ರತೆಗೆ ಶಿಬಿರದ ಗೋಡೆಗಳು ಹಾನಿಗೊಂಡಿದ್ದು, ಒಳಗೆ ಇರಿಸಲಾಗಿದ್ದ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.
ಸ್ಫೋಟಕ ಬಳಕೆ ಮಾಡಿದ್ದರಿಂದ ನಕ್ಸಲ್ ನಿಗ್ರಹ ಪಡೆ ಭೇಟಿ ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಹನೂರು ಶೂಟೌಟ್ | ನನ್ನ ಪತಿಗೆ ರಕ್ಷಣೆ ಕೊಡಿ, ಬದುಕಿದ್ದಾರಾ ಇಲ್ವಾ ಅಂತ ಆತಂಕವಾಗ್ತಿದೆ: ಮಹಿಮಾ ದಾಸ್ ಪತ್ನಿ

