ಚಾಮರಾಜನಗರ: ಹನೂರು ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿ(Hanur Shoot Out) ಘಟನೆಯ ಬೆನ್ನಲ್ಲೇ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕರ್ತವ್ಯ ಸ್ಥಳದಿಂದ ನಾಪತ್ತೆಯಾಗಿದ್ದಾರೆ ಎಂದು ಹನೂರು ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕ ಎಂ.ಆರ್. ಮಂಜುನಾಥ್(M. R. Manjunath) ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಭಟನೆ ನಡೆಸುತ್ತಿರುವ ಸ್ಥಳೀಯರೊಂದಿಗೆ ಮಾತನಾಡಿದ ಅವರು, ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 15 ಲಕ್ಷ ರೂ. ಪರಿಹಾರ ಒದಗಿಸುವ ಭರವಸೆ ನೀಡಿದರು. ಇದನ್ನೂ ಓದಿ: ಅರಣ್ಯಕ್ಕೆ ಅಕ್ರಮ ಪ್ರವೇಶ ಮಾಡಿದ್ರು, 4 ಬ್ಯಾಗ್‌ನಲ್ಲಿ ಜಿಂಕೆ ಮಾಂಸ ವಶಕ್ಕೆ: ಬೇಟೆಗಾರರ ಎನ್‌ಕೌಂಟರ್ ಬಗ್ಗೆ ರಾಮಲಿಂಗಾರೆಡ್ಡಿ ರಿಯಾಕ್ಷನ್
ಸರ್ಕಾರದ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ವೈಯಕ್ತಿಕವಾಗಿ ನಾನು ತಲಾ 10 ಲಕ್ಷ ರೂ. ನೆರವು ನೀಡಲಿದ್ದೇನೆ. ಈ ಮೂಲಕ ಮೃತರ ಕುಟುಂಬಕ್ಕೆ ತಲಾ 15 ಲಕ್ಷ ರೂ. ಪರಿಹಾರ ತಲುಪುವ ಸಂಪೂರ್ಣ ಜವಾಬ್ದಾರಿಯನ್ನು ನಾನೇ ವಹಿಸಿಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಅರಣ್ಯ ಸಿಬ್ಬಂದಿ ಗುಂಡೇಟಿಗೆ ಮೂವರು ಬಲಿ – ಮ್ಯಾಜಿಸ್ಟ್ರೇಟ್ ತನಿಖೆಗೆ ಡಿಸಿ ಆದೇಶ
ಇದೇ ವೇಳೆ, ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಮತ್ತು ಪ್ರತಿಭಟನೆಯನ್ನು ಕೈಬಿಡುವಂತೆ ಸ್ಥಳೀಯರ ಮನವೊಲಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದರು.
