LatestLeading NewsMain PostNational

ಹರ್ ಘರ್ ತಿರಂಗಾ ಅಭಿಯಾನ: ರಾಷ್ಟ್ರಧ್ವಜ ಕೊಳ್ಳುವಂತೆ ಸ್ಥಳೀಯ ಆಡಳಿತದಿಂದಲೇ ಜನರಿಗೆ ಒತ್ತಾಯ

- ಜಮ್ಮು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಕಿಡಿ

ಶ್ರೀನಗರ: ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಾಡಲೇಬೇಕೆಂಬ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಅಲ್ಲಿನ ಆಡಳಿತವೇ ಜನರನ್ನು ಒತ್ತಾಯಿಸುತ್ತಿದೆ ಎಂದು ಜಮ್ಮು ಕಾಶ್ಮೀರದ ಮಾಜಿ ಸಿಎಂ ಹಾಗೂ ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ.

75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರದಿಂದ ಹರ್ ಘರ್ ತಿರಂಗಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಅದಕ್ಕಾಗಿ ಆಗಸ್ಟ್ 13 ರಿಂದ ಆಗಸ್ಟ್ 15ರ ನಡುವೆ ದೇಶದ ನಾಗರಿಕರು ತಮ್ಮ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಾಡುವಂತೆ ಪ್ರೇರೇಪಿಸುತ್ತಿದೆ. ಆದರೆ ಕಾಶ್ಮೀರ ಆಡಳಿತ ತ್ರಿವರ್ಣ ಧ್ವಜವನ್ನು ಕೊಂಡುಕೊಳ್ಳುವಂತೆ ಜನತೆಗೆ ಒತ್ತಾಯ ಮಾಡುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

ಧ್ವಜಕ್ಕೆ 20 ರೂ. ನೀಡಿ ಎಂದು ಘೋಷಣೆ..?
ಈ ಕುರಿತು ಪ್ರಚಾರದ ವೀಡಿಯೋ ಒಂದನ್ನು ಹಂಚಿಕೊಂಡಿರುವ ಮುಫ್ತಿ ಅವರು, ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಬಿಜ್‌ಬೆಹಾರಾದಲ್ಲಿ ನಗರಪಾಲಿಕೆಯೇ ತ್ರಿವರ್ಣ ಧ್ವಜ ಕೊಂಡುಕೊಳ್ಳುವಂತೆ ಒತ್ತಾಯಿಸುತ್ತಿದೆ. ಪ್ರತಿ ಅಂಗಡಿಯವರೂ ಅಭಿಯಾನಕ್ಕಾಗಿ ಒಂದು ಧ್ವಜವನ್ನಾದರೂ ಕೊಂಡುಕೊಳ್ಳಿ. ಅದಕ್ಕಾಗಿ 20 ರೂ. ಡೆಪಾಸಿಟ್ ಮಾಡಿ ಎಂದು ಸಾರ್ವಜನಿಕವಾಗಿ ವಾಹನವೊಂದರ ಮೇಲೆ ಲೌಡ್‌ಸ್ಪೀಕರ್ ಮೂಲಕ ಸಾರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿಎಎ ಬೆಂಬಲಿಸಿ ಗದಗದಲ್ಲಿ ಬೃಹತ್ ತಿರಂಗಾ ರ‍್ಯಾಲಿ

ವಿದ್ಯಾರ್ಥಿಗಳು, ಅಂಗಡಿಯವರಿಗೆ ಹಾಗೂ ಸಿಬ್ಬಂದಿಗೆ ರಾಷ್ಟ್ರಧ್ವಜ ಹಾರಿಸುವಂತೆ ಜಮ್ಮು ಕಾಶ್ಮೀರ ಆಡಳಿತ ಒತ್ತಾಯಿಸುತ್ತಿರುವ ರೀತಿ ಹೇಗಿದೆ ಎಂದರೆ, ಕಾಶ್ಮೀರ ವಶಪಡಿಸಿಕೊಳ್ಳಬೇಕಾದ ಶತ್ರು ಪ್ರದೇಶ ಎನ್ನುವಂತಿದೆ ಎಂದು ಮುಫ್ತಿ ಟ್ವೀಟ್‌ನಲ್ಲಿ ಕಿಡಿಕಾರಿದ್ದಾರೆ.

ಸಿಪಿಐಎಂ ನಾಯಕ ಎಂ.ವೈ.ತಾರಿಗಾಮಿ ಸಹ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವ್ಯಾಪಾರಿಗಳು ಧ್ವಜ ಕೊಂಡುಕೊಳ್ಳಲು 20 ರೂ. ಹಣ ಡೆಪಾಸಿಟ್ ಮಾಡಿ ಎಂದು ಆಡಳಿತ ಘೋಷಣೆ ಮಾಡುತ್ತಿದೆ. ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದಡಿ ಧ್ವಜ ಹಾರಾಡಿಸುವಂತೆ ಒತ್ತಾಯಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button