ಸ್ವಾತಂತ್ರ್ಯದ ಅಮೃತ ಮೋತ್ಸವಕ್ಕೆ ‘ಹರ್ ಘರ್ ತಿರಂಗಾ’ ಅಭಿಯಾನ – ದೇಶಾದ್ಯಂತ 20 ಕೋಟಿ ಮನೆಗಳಲ್ಲಿ ಹಾರಲಿದೆ ತ್ರಿವರ್ಣ ಧ್ವಜ

Public TV
2 Min Read
maxresdefault 2

ನವದೆಹಲಿ: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಹರ್ ಘರ್ ತಿರಂಗಾ(ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ) ಅಭಿಯಾನವನ್ನು ಪ್ರಾರಂಭಿಸುವ ಯೋಜನೆಯನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದ್ದು, ದೇಶಾದ್ಯಂತ ಬರೋಬ್ಬರಿ 20 ಕೋಟಿ ಮನೆಗಳ ಮೇಲೆ ಧ್ವಜವನ್ನು ಹಾರಿಸಲು ಸಿದ್ಧತೆ ನಡೆಸಲಾಗುತ್ತಿದೆ.

ಕೇಂದ್ರ ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನದ ಅಡಿಯಲ್ಲಿ ಮುಂದಿನ ತಿಂಗಳು 3 ದಿನಗಳ ಕಾಲ ದೇಶಾದ್ಯಂತ 20 ಕೋಟಿಗೂ ಹೆಚ್ಚು ಮನೆಗಳ ಮೇಲೆ ತ್ವಿವರ್ಣ ಧ್ವಜವನ್ನು ಹಾರಿಸಲಾಗುತ್ತದೆ ಎಂದು ವರದಿಗಳು ತಿಳಿಸಿವೆ.

indian flag

ಈ ಅಭಿಯಾನವನ್ನು ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರಾರಂಭಿಸಲಾಗುತ್ತಿದ್ದು, ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ರಾಜ್ಯಗಳ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್‌ಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಆಡಳಿತಗಾರರೊಂದಿಗೆ ಸಿದ್ಧತೆಗಳು ನಡೆಯುತ್ತಿವೆ.

ಕಾರ್ಯಕ್ರಮದ ಭಾಗವಾಗಿ ಸಾರ್ವಜನಿಕ ಸಹಭಾಗಿತ್ವದ ಮೂಲಕ ಆಗಸ್ಟ್ 13 ರಿಂದ 15 ರವರೆಗೆ ಮನೆಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲಾಗುವುದು. ಈ ಅಭಿಯಾನದಲ್ಲಿ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳೂ ಭಾಗಿಯಾಗಲಿವೆ ಎಂದು ಕೇಂದ್ರದ ಅಧಿಕೃತ ವರದಿ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ- ಮತ ಚಲಾಯಿಸಿದ ಪ್ರಧಾನಿ ಮೋದಿ

National Flag A

2022ರ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆ ಜುಲೈ 22 ರಿಂದ ಎಲ್ಲಾ ರಾಜ್ಯ ಸರ್ಕಾರದ ವೆಬ್‌ಸೈಟ್ ಮುಖಪುಟಗಳಲ್ಲಿ ರಾಷ್ಟ್ರಧ್ವಜ ಕಾಣಿಸಿಕೊಳ್ಳಬೇಕು. ನಾಗರಿಕರೂ ತಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಟ್ವಿಟ್ಟರ್ ಹಾಗೂ ಇತರ ಸಾಮಾಜಿಕ ಮಾಧ್ಯಮಗಳ ಖಾತೆಗಳಲ್ಲಿ ತ್ರಿವರ್ಣ ಧ್ವಜಗಳನ್ನು ಪ್ರದರ್ಶಿಸುವ ಮೂಲಕ ಪ್ರೋತ್ಸಾಹ ನೀಡಬೇಕು ಎಂದು ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.

ತ್ರಿವರ್ಣ ಧ್ವಜದೊಂದಿಗಿನ ಫೋಟೋಗಳನ್ನು ತೆಗೆದುಕೊಂಡು ಸಂಸ್ಕೃತಿ ಸಚಿವಾಲಯದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಲು ಜನರನ್ನು ಪ್ರೋತ್ಸಾಹಿಸಲಾಗುತ್ತಿದೆ. ಈ ಮೂಲಕ ಪ್ರಧಾನಿ ನರೇಂದ್ರ ಮೋದಿಯವರು ಈ ವರ್ಷದ ಸ್ವಾತಂತ್ರ್ಯದ ಅಮೃತ ಮೋತ್ಸವವನ್ನು ಹೊಸ ರೀತಿಯಲ್ಲಿ ಆಚರಿಸಲು ನಿರ್ಧರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ಇದನ್ನೂ ಓದಿ: ಮದರಸಾಗಳಲ್ಲೂ ತ್ರಿವರ್ಣಧ್ವಜ ಹಾರಲೇಬೇಕು – ರಾಜ್ಯ ಸರ್ಕಾರದಿಂದ ಖಡಕ್ ಆದೇಶ

Amith

ಹರ್ ಘರ್ ತಿರಂಗಾ ಅಭಿಯಾನದ ಉದ್ದೇಶ ದೇಶಭಕ್ತಿಯ ಮನೋಭಾವವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವುದು. ಜನರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದ ಮೂಲಕ ಅಭಿಯಾನವನ್ನು ಯಶಸ್ಸಿನತ್ತ ಕೊಂಡೊಯ್ಯಲಾಗುವುದು ಎಂದು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *