ಡೆಹ್ರಾಡೂನ್: ರಾಜ್ಯ ಅರಣ್ಯ ಸಚಿವ ಹರಕ್ ಸಿಂಗ್ ರಾವತ್ ಅವರನ್ನು ಸಂಪುಟದಿಂದ ವಜಾಗೊಳಿಸಲಾಗಿದೆ. ಈ ಕುರಿತಾಗಿ ಮಾತನಾಡಿದ ರಾವತ್ ಬಿಜೆಪಿ ಕುರಿತಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಮುನ್ನ, ಕ್ಯಾಬಿನೆಟ್ ಸಚಿವ ಹರಕ್ ಸಿಂಗ್ ರಾವತ್ ಅವರು ರಾಜ್ಯ ಸಂಪುಟದಿಂದ ಮತ್ತು ಆರು ವರ್ಷಗಳ ಕಾಲ ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಹೊರಹಾಕಲ್ಪಟ್ಟಿರುವ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಇದೀಗ ಕಾಂಗ್ರೆಸ್ ಪರ ಕೆಲಸ ಮಾಡಲಿದ್ದು, ಉತ್ತರಾಖಂಡದಲ್ಲಿ ಮುಂದಿನ ಸರ್ಕಾರವನ್ನು ಪಕ್ಷ ರಚಿಸಲಿದೆ ಎಂದು ಹೇಳಿದ್ದಾರೆ.
Advertisement
#WATCH | Former Uttarakhand BJP Minister Harak Singh Rawat breaks down after speaking about his expulsion from the Uttarakhand BJP Cabinet https://t.co/7xjIENtki6 pic.twitter.com/L8rEADPsBs
— ANI (@ANI) January 17, 2022
Advertisement
ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲಿದೆ. ನಾನು ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ. ಜನಸಾಮಾನ್ಯರ ಸಮಸ್ಯೆ ಬಿಜೆಪಿಗೆ ಅರ್ಥವಾಗುವುದಿಲ್ಲ. ಆ ಪಕ್ಷ ನನಗೆ ಚೆನ್ನಾಗಿ ಗೊತ್ತು. ನಾನು ಅರ್ಥಮಾಡಿಕೊಂಡಿದ್ದೇನೆ. ಮುಂದೆಯೂ ಜನರ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾ ಕಣ್ಣಂಚಲಿ ನೀರು ತಂಬಿಕೊಂಡಿರುವುದನ್ನು ನಾವು ವೀಡಿಯೋದಲ್ಲಿ ನೋಡ ಬಹುದಾಗಿದೆ.ಇದನ್ನೂ ಓದಿ: ಪಕ್ಷದಿಂದ ಸಚಿವನ ಉಚ್ಛಾಟಿಸಿದ ಬಿಜೆಪಿ – ಮತ್ತೆ ‘ಕೈ’ ಹಿಡೀತಾರಾ ಹರಕ್ ಸಿಂಗ್ ರಾವತ್?
Advertisement
They (BJP) didn’t talk to me once before taking such a big decision. If I hadn’t left Congress to join BJP, I would have resigned from BJP 4 years ago. I don’t have much interest in being a minister, I just wanted to work: Expelled Uttarakhand BJP Minister Harak Singh Rawat pic.twitter.com/a7Mrr38uUY
— ANI (@ANI) January 17, 2022
Advertisement
ಮುಂಬರುವ ವಿಧಾನಸಭೆ ಚುನಾವಣೆಗೆ ಮುನ್ನವೇ ಕಾಂಗ್ರೆಸ್‍ನ ಕೆಲ ನಾಯಕರನ್ನು ಭೇಟಿ ಮಾಡಿದ ಹಿನ್ನೆಲೆ ಹರಕ್ ಸಿಂಗ್ ರಾವತ್ ಅವರನ್ನು ಸಂಪುಟದಿಂದ ಮತ್ತು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸುವಂತೆ ಶಿಫಾರಸ್ಸು ಮಾಡಿ ಪುಷ್ಕರ್ ಸಿಂಗ್ ದಾಮಿ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದರು ಎಂದು ಹೇಳಲಾಗುತ್ತಿದೆ. ಉತ್ತರಾಖಂಡ ವಿಧಾನಸಭೆ ಚುನಾವಣೆಯನ್ನು 2022ರ ಫೆಬ್ರವರಿ 14ರಂದು ಮೊದಲನೇ ಹಂತದಲ್ಲಿ ನಡೆಸಲು ನಿರ್ಧರಿಸಲಾಗಿದ್ದು, ಮಾರ್ಚ್ 10ರಂದು ಮತಗಳ ಎಣಿಕೆ ನಡೆಸಲಾಗುತ್ತದೆ. ಇದನ್ನೂ ಓದಿ: ಒಬಿಸಿ ನಾಯಕರಿಂದ ಬಿಜೆಪಿಗೆ ರಾಜೀನಾಮೆ – ದಲಿತರ ಮನೆಯಲ್ಲಿ ಊಟ ಮಾಡಿದ ಯೋಗಿ