ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಎರಡೆತ್ತಿನಹಳ್ಳಿ ಗ್ರಾಮದಲ್ಲಿ ಆಸ್ತಿಗಾಗಿ ತಮ್ಮನೋರ್ವ ಅಣ್ಣನನ್ನೇ ಕೊಡಲಿಯಿಂದ ಕಡಿದು ಕೊಲೆ ಮಾಡಿದ್ದಾನೆ.
33 ವರ್ಷದ ಹಾಲೇಶ್ ತಾಳೇದಹಳ್ಳಿ ಕೊಲೆಯಾದ ಅಣ್ಣ. 31 ವರ್ಷದ ಹೊನ್ನಪ್ಪ ತಾಳೇದಹಳ್ಳಿ ಅಣ್ಣನನ್ನು ಕೊಲೆಗೈದ ಆರೋಪಿ. ಆಸ್ತಿ ವಿಚಾರದಲ್ಲಿ ಸೋದರರಿಬ್ಬರ ನಡುವೆ ಕಲಹವಿತ್ತು. ಶುಕ್ರವಾರ ರಾತ್ರಿ ಸಹ ಆಸ್ತಿಯ ವಿಚಾರವಾಗಿ ಹಾಲೇಶ್ ಮತ್ತು ಹೊನ್ನಪ್ಪನ ನಡುವೆ ಗಲಾಟೆ ನಡೆದಿದೆ. ರಾತ್ರಿ ಸುಮಾರು 2 ಗಂಟೆಗೆ ಮಲಗಿದ್ದ ಹಾಲೇಶ್ ನನ್ನು ಕೊಡಲಿಯಿಂದ ಕಡಿದು ಬರ್ಬರವಾಗಿ ಕೊಲೆಗೈದು ಹೊನ್ನಪ್ಪ ಪರಾರಿಯಾಗಿದ್ದಾನೆ.
Advertisement
Advertisement
ಘಟನಾ ಸ್ಥಳಕ್ಕೆ ಹರಪನಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಕೊಲೆಗೆ ಸಂಬಂಧ ಕುಟುಂಬಸ್ಥರು ಮತ್ತು ಗ್ರಾಮಸ್ಥರಿಂದ ಹೆಚ್ಚಿನ ಮಾಹಿತಿ ಕಲೆ ಹಾಕುತ್ತಿದ್ದು, ಆರೋಪಿ ಬಂಧನಕ್ಕಾಗಿ ಬಲೆ ಬೀಸಿದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.