ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ(DC) ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ರಾಷ್ಟ್ರೀಯ ಮಾನವ ಹಕ್ಕು ಆಯೋಗದಿಂದ ಸಮನ್ಸ್ ಜಾರಿ ಮಾಡಲಾಗಿದೆ.
ಹೊನ್ನಾವರದ ಕಾಸರಕೋಡದ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ದೌರ್ಜನ್ಯದ ಕುರಿತು ದಾಖಲಾದ ದೂರಿನನ್ವಯ ಸಮನ್ಸ್ ಜಾರಿ ಮಾಡಿದೆ. ಕಾಸರಕೋಡ ಖಾಸಗಿ ಬಂದರು ಕಾಮಗಾರಿ ಸ್ಥಗಿತಗೊಳಿಸುವಂತೆ ಹಾಗೂ ಬಂದರಿಗೆ ರಸ್ತೆ ಕಾಮಗಾರಿ ಸ್ಥಗಿತ ಗೊಳಿಸುವಂತೆ ಆಗ್ರಹಿಸಿ ಜ.24ರಂದು ಮೀನುಗಾರರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆ ವೇಳೆ ಪ್ರತಿಭಟನಾ ನಿರತ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರನ್ನು ಎಫ್‍ಐಆರ್ ಸಹ ದಾಖಲಿಸದೇ ಬಂಧಿಸಿ ಸಂಜೆ ವೇಳೆ ಬಿಡುಗಡೆಗೊಳಿಸಲಾಗಿತ್ತು. ಇದನ್ನೂ ಓದಿ: ಅಪ್ರಾಪ್ತೆಯನ್ನು ಕಿಡ್ನ್ಯಾಪ್ ಮಾಡಿ, ಅತ್ಯಾಚಾರ
Advertisement
Advertisement
ಈ ವೇಳೆ ಮೀನುಗಾರರು ಹಾಗೂ ಮೀನುಗಾರಿಕಾ ಮಹಿಳೆಯರ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಿ ರಾಷ್ಟ್ರೀಯ ಮಾನವಹಕ್ಕು ಆಯೋಗಕ್ಕೆ ಮೇ 6ರಂದು ದೂರು ದಾಖಲಿಸಿದ್ದರು. ಈ ದೂರಿನನ್ವಯ ಜುಲೈ 19ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪೆನ್ನೇಕರ್ ಅವರಿಗೆ ವರದಿ ಸಲ್ಲಿಸುವಂತೆ ಸೂಚಿಸಲಾಗಿತ್ತು. ಆದರೆ ಪೊಲೀಸ್ ಇಲಾಖೆಯಿಂದ ಯಾವುದೇ ವರದಿ ಸಹ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಇದನ್ನೂ ಓದಿ: ಬಾಬರಿ ಮಸೀದಿ ಕೇಸ್ ಬಳಿಕ ನಾವು ಅದೇ ಹಾದಿಯಲ್ಲಿ ಸಾಗುತ್ತಿದ್ದೇವೆ: ಓವೈಸಿ