ಹಾಸನ: ರಾಜ್ಯದಲ್ಲಿ ಕುಮಾರಸ್ವಾಮಿಯವರ (H.D.Kumaraswamy) ಸರ್ಕಾರ ಹೋದ ಮೇಲೆ ಹಾಸನದಲ್ಲಿ (Hassan) ಜೆಡಿಎಸ್ (JDS) ಕಾರ್ಯಕರ್ತರ ಮೇಲೆ ಆಗುತ್ತಿರುವ ಕಿರುಕುಳ ನನಗೆ ತಿಳಿದಿದೆ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ (H.D.Revanna) ಬೇಸರ ವ್ಯಕ್ತಪಡಿಸಿದ್ದಾರೆ.
ಹಾಸನದ ಬೈಲಹಳ್ಳಿಯಲ್ಲಿ (Bylahalli) ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾರ್ಯಕರ್ತರ ಮೇಲೆ 107 ಕೇಸ್ ದಾಖಲಿಸಿದ್ದಾರೆ. ಕೆಲವರು ಚುನಾವಣೆ ಸಂದರ್ಭದಲ್ಲಿ ಗಲಾಟೆ ಮಾಡಿ ಕಾರ್ಯಕರ್ತರನ್ನು ಜೈಲಿಗೆ ಕಳಿಸುವ ಅಥವಾ ಗಡಿಪಾರು ಮಾಡುವ ಹುನ್ನಾರ ಮಾಡಿದ್ದಾರೆ ಎಂದು ಅವರು ಆರೋಪಿಸಿದರು. ಇದನ್ನೂ ಓದಿ: ಅರ್ಕಾವತಿ ಪ್ರಕರಣದಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗ್ತಾರೆ: ನಳಿನ್ ಕುಮಾರ್ ಕಟೀಲ್
ಕೆಲವರು ದುಡ್ಡಿನಿಂದ ರೌಡಿಸಂ ಮಾಡಲು ಹೊರಟಿದ್ದಾರೆ. ನಿನ್ನೆ ಉಗನೆ (Ugane) ಗ್ರಾಮಕ್ಕೆ ಹೋಗಿದ್ದೆ. ಅಲ್ಲಿ ಜನ ನನ್ನ ಬಳಿ ರಕ್ಷಣೆ ಬೇಕು ಎಂದು ಹೇಳುತ್ತಾರೆ. ಈ ಕ್ಷೇತ್ರವನ್ನು ನಾನು ಸವಾಲಾಗಿ ಸ್ವೀಕರಿಸಿ ಮುನ್ನಡೆಸುವ ಕುರಿತು ಪಕ್ಷದ ಮುಖಂಡರೊಂದಿಗೆ ಚರ್ಚೆ ಮಾಡಿ ತಿರ್ಮಾನ ಕೈಗೊಳ್ಳುತ್ತೇನೆ ಎಂದರು.
ಇಲ್ಲಿನ ಜನರಿಂದ ದೇವೇಗೌಡರು (H.D.Deve Gowda) ಈ ಮಟ್ಟಕ್ಕೆ ಬೆಳೆದರೂ, ನಾಲ್ಕು ಬಾರಿ ನಮ್ಮ ಪಕ್ಷದ ಅಭ್ಯರ್ಥಿ ಈ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ. ಈ ಚುನಾವಣೆಯು ದೇವೇಗೌಡರು ಹಾಗೂ ನಾನು ಜಿಲ್ಲೆಗೆ ಕೊಟ್ಟ ಕೊಡುಗೆಯ ಪರೀಕ್ಷೆಯಾಗಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಲೇಜು ಪ್ರಿನ್ಸಿಪಾಲ್‍ಗೇ ಬೆಂಕಿ ಇಟ್ಟ ವಿದ್ಯಾರ್ಥಿ – ಚಿಕಿತ್ಸೆ ಫಲಿಸದೇ ಸಾವು