ಮುಂಬೈ: ಐಪಿಎಲ್ 2008ರ ಆವೃತ್ತಿಯ ಪಂದ್ಯವೊಂದರಲ್ಲಿ ಕಪಾಳಮೋಕ್ಷ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಹರ್ಭಜನ್ ಸಿಂಗ್, ಭಾರತ ತಂಡದ ಮಾಜಿ ಬೌಲರ್ ಶ್ರೀಶಾಂತ್‍ಗೆ 14 ವರ್ಷಗಳ ನಂತರ ಕ್ಷಮೆಯಾಚಿಸಿದ್ದಾರೆ.
If I have to correct one mistake, it was how I treated Sree on the field after that IPL match – Bhajji on slapping Sree in 2008 after the Mumbai vs Punjab match at Mohali. #BhajjiBoleSorrySree at @glance Live Fest pic.twitter.com/VMz8Y20ZmV
— Nikhil ???? (@CricCrazyNIKS) June 4, 2022
Advertisement
ಹರ್ಭಜನ್ ಸಿಂಗ್ ಅವರು ಲೈವ್ ವೀಡಿಯೋ ಚಾಟ್‍ನಲ್ಲಿ ಶ್ರೀಶಾಂತ್ ಜೊತೆ ಮಾತನಾಡಿ, 2008ರಲ್ಲಿ ನಡೆದ ಘಟನೆಯ ಬಗ್ಗೆ ಅವರು ಅನುಭವಿಸಿದ ಮುಜುಗರವನ್ನು ಬಹಿರಂಗಪಡಿಸಿದರು. ಅಂದು ನಡೆದದ್ದು ತಪ್ಪು. ನಾನು ತಪ್ಪು ಮಾಡಿದ್ದೆ. ನನ್ನಿಂದಾಗಿ ನನ್ನ ಸಹ ಆಟಗಾರ ಮುಜುಗರ ಎದುರಿಸಬೇಕಾಯಿತು. ನನಗೂ ಮುಜುಗರವಾಯಿತು. ಒಂದು ತಪ್ಪನ್ನು ತಿದ್ದಲೆಂದು ಮೈದಾನದಲ್ಲಿ ಶ್ರೀಶಾಂತ್ ಜೊತೆಗೆ ನಾನು ನಡೆದುಕೊಂಡ ರೀತಿ ಇದೆಯಲ್ಲ ಅದು ಆಗಬಾರದಿತ್ತು. ನಾನು ಅದರ ಬಗ್ಗೆ ಯೋಚಿಸಿದಾಗಲೆಲ್ಲ ಅದು ಆಗಬಾರದಿತ್ತು ಅಂತಾ ಅಂದುಕೊಳ್ಳುತ್ತೇನೆ ಎಂದಿದ್ದಾರೆ. ಇದನ್ನೂ ಓದಿ : ಯಶ್ ಮುಂದಿನ ಸಿನಿಮಾ ನರ್ತನ್ ಜೊತೆ ಫಿಕ್ಸ್ : ಘೋಷಣೆಯೊಂದೇ ಬಾಕಿ
Advertisement
Advertisement
ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ವಿರುದ್ಧದ ಪಂದ್ಯವೊಂದರಲ್ಲಿ ನಾಯಕ ಸಚಿನ್ ತೆಂಡೂಲ್ಕರ್ ಅನುಪಸ್ಥಿತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದ ಹರ್ಭಜನ್ ಸಿಂಗ್ ಅವರು, ಪಂಜಾಬ್ ತಂಡದ ಬೌಲರ್ ಶ್ರೀಶಾಂತ್ ಅವರ ಆಕ್ರಮಣಕಾರಿ ನಡುವಳಿಕೆಯಿಂದ ಆಕ್ರೋಶಗೊಂಡಿದ್ದರು. ಪಂದ್ಯದ ಫಲಿತಾಂಶದ ನಂತರ, ತಮ್ಮ ಬಳಿಗೆ ಬಂದ ಶ್ರೀಶಾಂತ್ ಅವರ ಕೆನ್ನೆಗೆ ಹರ್ಭಜನ್ ಹೊಡೆದಿದ್ದರು. ಮೊಹಾಲಿಯಲ್ಲಿ ನಡೆದ ಆ ಪಂದ್ಯದಲ್ಲಿ ಪಂಜಾಬ್ ತಂಡ ಮುಂಬೈ ವಿರುದ್ಧ 66 ರನ್‍ಗಳ ಗೆಲುವು ದಾಖಲಿಸಿತ್ತು. ಇದನ್ನೂ ಓದಿ: ಅತೀ ಎತ್ತರದಲ್ಲಿ ಯೋಗ ಮಾಡಿ ದಾಖಲೆ ಬರೆದ ಐಟಿಬಿಪಿ ತಂಡ
Advertisement
ಘಟನೆ ನಂತರ ಕಣ್ಣೀರು ಹಾಕಿದ್ದ ಶ್ರೀಶಾಂತ್ ಅವರನ್ನು ನೋಡಿ ಹಲವರು ಮರುಗಿದ್ದರು. ಹರ್ಭಜನ್ ಅವರ ಕ್ರೀಡಾ ಸ್ಫೂರ್ತಿಯ ಬಗ್ಗೆ ಆಗ ಪ್ರಶ್ನೆಗಳು ಎದ್ದಿದ್ದವು. ಆ ಬಳಿಕ ಇವರಿಬ್ಬರ ನಡುವೆ ಮತ್ತೆ ಸ್ನೇಹ ಬೆಳೆದಿತ್ತು. ಟೀಂ ಇಂಡಿಯಾ ಪರ ಒಟ್ಟಾಗಿ ಆಡಿದ್ದರು.