ಚಂಡೀಗಢ: ಆಮ್ ಆದ್ಮಿ ಪಕ್ಷದ (ಎಎಪಿ) ಭಗವಂತ ಮಾನ್ (Bhagwant Mann) ಅವರಿಗೆ ಭಾರತದ ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ (Harbhajan Singh) ವಿಶೇಷವಾಗಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.
ಹೃದಯಸ್ಪರ್ಶಿ ಫೋಟೊವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಹರ್ಭಜನ್, ನಮ್ಮ ರಾಜ್ಯದ ನೂತನ ಮುಖ್ಯಮಂತ್ರಿಯಾಗುತ್ತಿರುವ ಎಎಪಿ ಪಕ್ಷದ ನನ್ನ ಸ್ನೇಹಿತ ಭಗವಂತ ಮಾನ್ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಂಡಿದ್ದಾರೆ.
ಟ್ವೀಟ್ನಲ್ಲಿ ಏನಿದೆ?: ಭಗತ್ ಅವರು ಗ್ರಾಮ ಖಟ್ಕಡ್ಕಲಾಂನಲ್ಲಿ ಮಾನ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ತುಂಬ ಸಂತೋಷವಾಗುತ್ತಿದೆ. ಎಂಥ ಅದ್ಭುತ ಚಿತ್ರ ಇದು. ಮಾತಾ ಜೀಗೆ ಹೆಮ್ಮೆಯ ಕ್ಷಣವಾಗಿದೆ ಎಂದು ಬರೆದುಕೊಂಡಿದ್ದಾರೆ. ಮಾನ್ ಅವರು ತನ್ನ ತಾಯಿಯನ್ನು ತಬ್ಬಿಕೊಂಡಿರುವ ಹೃದಯಸ್ಪರ್ಶಿ ಫೋಟೋವನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡು ಶುಭಕೋರಿದ್ದಾರೆ. ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧ – ಇನ್ಸ್ಟಾಗ್ರಾಮ್ ನಿರ್ಬಂಧಿಸಲು ಮುಂದಾದ ರಷ್ಯಾ
Congratulations to @AamAadmiParty and My friend #BhagwantMann on Becoming our New Chief minister .. great to hear that he will be taking oath as the new CM in Bhagat Singh’s village Khatkarkalan, ???? what a picture…this is a proud moment for Mata ji ???????? pic.twitter.com/k46DNr6Pjz
— Harbhajan Turbanator (@harbhajan_singh) March 10, 2022
ಭಗವಂತ ಮಾನ್ ಅವರು ಪಂಜಾಬ್ ಮುಖ್ಯಮಂತ್ರಿಯಾಗಿ ಮಾರ್ಚ್ 16ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. 117 ಸದಸ್ಯ ಬಲದ ಪಂಜಾಬ್ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಎಎಪಿಯ 92 ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದನ್ನೂ ಓದಿ: ಡೇ – ನೈಟ್ ಪಿಂಕ್ ಬಾಲ್ ಟೆಸ್ಟ್ಗೆ ಬೆಂಗಳೂರು ಸಜ್ಜು – 2 ವರ್ಷಗಳ ಬಳಿಕ ಚಿನ್ನಸ್ವಾಮಿಯಲ್ಲಿ ಟೀಂ ಇಂಡಿಯಾ ಕಾದಾಟ