ನವದೆಹಲಿ: ಬಿಜೆಪಿ ಸೇರುವ ವದಂತಿಗಳು ಸುಳ್ಳಾಗಿದ್ದು, ನಾನು ಬಿಜೆಪಿ ಸೇರುವುದಿಲ್ಲ ಎಂದು ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.
ಮುಂಬರುವ ಪಂಜಾಬ್ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ತಮ್ಮ ಬಗ್ಗೆ ಹರಡುತ್ತಿರುವ ಸುದ್ದಿಗೆ ಪ್ರತಿಕ್ರಿಯಿಸಿದ್ದು, ತಾವು ಯಾವುದೇ ರಾಜಕೀಯ ಪಕ್ಷ ಸೇರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೋದಿ ಕನಸಿನ ಯೋಜನೆ ಕಾಶಿ ವಿಶ್ವನಾಥ ಕಾರಿಡಾರ್ ವಿಶೇಷತೆ ಏನು?
Advertisement
Fake news https://t.co/nxy81qURPX
— Harbhajan Turbanator (@harbhajan_singh) December 11, 2021
Advertisement
ತಾವು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳು, ಜನರು ಇಂತಹ ವದಂತಿಗಳನ್ನು ಗಂಭೀರವಾಗಿ ಪರಿಗಣಿಸಬಾರದು ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಪ್ರಧಾನಿ ಮೋದಿಗೆ ದೃಷ್ಟಿ ನಿವಾರಿಸಿದ ಅರ್ಚಕ
Advertisement
Advertisement
ಭಜ್ಜಿ ಜೊತೆಗೆ ಟೀಂ ಇಂಡಿಯಾ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ಬಗ್ಗೆ ಕೂಡ ಇದೇ ರೀತಿಯ ಪ್ರಚಾರ ನಡೆಯುತ್ತಿದೆ. ಈ ವಿಷಯದ ಬಗ್ಗೆ ಯುವಿ ಈವರೆಗೆ ಯಾವುದೇ ಹೇಳಿಕೆ ನೀಡಿಲ್ಲ. ಈ ನಡುವೆ 2017ರ ವಿಧಾನಸಭೆ ಚುನಾವಣೆ ವೇಳೆಯೂ ಹರ್ಭಜನ್ ಸಿಂಗ್ ಬಗ್ಗೆ ಇದೇ ರೀತಿಯ ಪ್ರಚಾರ ನಡೆದಿತ್ತು. ಆಗ ಭಜ್ಜಿ ಕಾಂಗ್ರೆಸ್ ಪಕ್ಷ ಸೇರುವ ಸುದ್ದಿ ಬಂದಿತ್ತು. ಮತ್ತೊಂದೆಡೆ, ಹರ್ಭಜನ್ ಐಪಿಎಲ್ ತಂಡವೊಂದರ ಕೋಚ್ ಹುದ್ದೆ ವಹಿಸಿಕೊಳ್ಳಲಿದ್ದಾರೆ ಎಂಬ ವದಂತಿಗಳಿವೆ.