ನವದೆಹಲಿ: ತಮ್ಮ ವೃತ್ತಿ ಜೀವನದ ಆರಂಭಿಕ ದಿನಗಳನ್ನು ಹರ್ಭಜನ್ ಸಿಂಗ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಫೋಟೋ ಭಾರೀ ವೈರಲ್ ಆಗುತ್ತಿದೆ.
ಫೋಟೋದಲ್ಲಿ ಏನಿದೆ?: ಹರ್ಭಜನ್ ಸಿಂಗ್ ಅವರು ಅಂಡರ್-19 ದಿನಗಳ ಚಿತ್ರವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ನಡೆದ 1998/99 ಅಂಡರ್-19 ವಿಶ್ವಕಪ್‌ನಲ್ಲಿ ಈ ಚಿತ್ರವನ್ನು ತೆಗೆಯಲಾಗಿದೆ. ಚಿತ್ರದಲ್ಲಿ, ಹರ್ಭಜನ್, ಪಾಕಿಸ್ತಾನದ ಮಾಜಿ ಬ್ಯಾಟ್ಸ್ಮನ್ ಹಸನ್ ರಜಾ ಮತ್ತು ಇಮ್ರಾನ್ ತಾಹಿರ್ ಅವರೊಂದಿಗೆ ಪೋಸ್ ನೀಡಿದ್ದಾರೆ. ಭಾರತ ತಂಡದ ಸ್ಪಿನ್ನರ್ ತಮ್ಮ ಜೊತೆಗಿರುವ ಇಬ್ಬರು ವ್ಯಕ್ತಿಗಳನ್ನು ಊಹಿಸಿ ಎಂದು ಶೀರ್ಷಿಕೆಯನ್ನು ನೀಡಿದ್ದಾರೆ.
Advertisement
Pehchano to maaane.. U-19 World Cup days 1998/99 pic.twitter.com/2iawM1dSUK
— Harbhajan Turbanator (@harbhajan_singh) December 10, 2021
Advertisement
ಈ ಚಿತ್ರದಲ್ಲಿ ಶರ್ಟ್ ಧರಿಸದ ವ್ಯಕ್ತಿ ಇಮ್ರಾನ್ ತಾಹಿರ್ ಆಗಿದ್ದಾರೆ. ಹರ್ಭಜನ್ ಸಿಂಗ್ ಮಧ್ಯದಲ್ಲಿದ್ದರೆ, ಹರ್ಭಜನ್ ಅವರ ಎಡ ಭಾಗದಲ್ಲಿ ಹಸನ್ ರಾಜ್ ಇದ್ದಾರೆ. ಈ ಮೂವರು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯದಲ್ಲಿ ಆಡಿದ್ದಾರೆ.
Advertisement
ತಾಹಿರ್ ಅವರು ಮೊದಲು ಕಿರಿಯ ವಿಭಾಗದಲ್ಲಿ ಪಾಕಿಸ್ತಾನವನ್ನು ಪ್ರತಿನಿಧಿಸಿದ್ದರು. ನಂತರದಲ್ಲಿ ದಕ್ಷಿಣ ಆಫ್ರಿಕಾದ ರಾಷ್ಟ್ರೀಯ ತಂಡದಲ್ಲಿ ಸ್ಥಾನವನ್ನು ಪಡೆದರು. ಅವರು ದಕ್ಷಿಣ ಆಫ್ರಿಕಾದ ಪರ 20 ಟೆಸ್ಟ್, 107 ಏಕದಿನ, 38 ಟಿ20 ಪಂದ್ಯಗಳನ್ನು ಆಡಿದ್ದಾರೆ.
Advertisement
ಚಿತ್ರದಲ್ಲಿರುವ ಹಸನ್ ರಾಜ್ ಅವರು 1996 ರಿಂದ 2005ರವರೆಗೆ ಪಾಕಿಸ್ತಾನ ತಂಡವನ್ನು ಪ್ರತಿನಿಧಿಸಿದ್ದರು. 7 ಟೆಸ್ಟ್ ಪಂದ್ಯ ಹಾಗೂ 16 ಏಕದಿನ ಪಂದ್ಯಗಳನ್ನು ಆಡಿದ್ದರು.
ಹರ್ಭಜನ್ ಸಿಂಗ್ ಅವರು ಕೊನೆಯಾದಾಗಿ 2006ರಲ್ಲಿ ಭಾರತದ ಪರ ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದರು. 103 ಟೆಸ್ಟ್, 236 ಏಕದಿನ ಪಂದ್ಯ ಹಾಗೂ 28 ಟಿ20 ಪಂದ್ಯಗಳನ್ನು ಆಡಿದ್ದಾರೆ. 2007ರಲ್ಲಿ ಟಿ20 ವಿಶ್ವಕಪ್, 2011ರಲ್ಲಿ ಏಕದಿನ ಪಂದ್ಯವನ್ನು ಭಾರತ ತನ್ನದಾಗಿಸಿಕೊಂಡಿತ್ತು. ಆ ಸಮಯದಲ್ಲಿ ಭಾರತದ ಪರ ಉತ್ತಮ ಪ್ರದರ್ಶನ ನೀಡಿದ್ದರು. ಇದನ್ನೂ ಓದಿ: ಓಮಿಕ್ರಾನ್ ಸೋಂಕಿತನ ಪತ್ನಿ, ಬಾಮೈದುನನಿಗೂ ಸೋಂಕು- ಗುಜರಾತ್‌ನಲ್ಲಿ 3ಕ್ಕೇರಿದ ಸಂಖ್ಯೆ
ಹರ್ಭಜನ್ (417) ಟೆಸ್ಟ್ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಭಾರತದ ನಾಲ್ಕನೇ ಬೌಲರ್ ಆಗಿದ್ದಾರೆ. ಇತ್ತೀಚೆಗಷ್ಟೇ ಅವರನ್ನು ರವಿಚಂದ್ರನ್ ಅಶ್ವಿನ್ (427) ಗಣ್ಯರ ಪಟ್ಟಿಯಲ್ಲಿ ಹಿಂದಿಕ್ಕಿದ್ದಾರೆ. ಇದನ್ನೂ ಓದಿ: ರೋಹಿತ್ ಟೀಂ ಇಂಡಿಯಾದ ನಾಯಕರಾದ ಬಳಿಕ ಸಿಗುತ್ತಿರುವ ವೇತನ ಎಷ್ಟು ಗೊತ್ತಾ?
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2021ರ ಸಂದರ್ಭದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಗಾಗಿ ಕೊನೆಯ ಬಾರಿಗೆ ಕಾಣಿಸಿಕೊಂಡಿದ್ದರು.