ಚಂಡೀಗಢ: ಭಾರತದ ಮಾಜಿ ಕ್ರಿಕೆಟ್ ಆಟಗಾರ ಹರ್ಭಜನ್ ಸಿಂಗ್ ಅವರು ಈ ವರ್ಷ ರಾಜ್ಯಸಭಾ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಪಂಜಾಬ್ ಅಭ್ಯರ್ಥಿಯಾಗಿ ಕಾಣಕ್ಕೆ ಇಳಿಯುವ ಸಾಧ್ಯತೆಯಿದೆ.
ಈ ತಿಂಗಳ ಅಂತ್ಯದ ವೇಳೆಗೆ ಆಮ್ ಆದ್ಮಿ ಪಕ್ಷವು ರಾಜ್ಯಸಭೆಯಲ್ಲಿ ಐದು ಸ್ಥಾನಗಳನ್ನು ಪಡೆಯಲಿದೆ. ಈ ವೇಳೆ ಆಪ್ ಹರ್ಭಜನ್ ಸಿಂಗ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಿದೆ ಎಂಬ ಸುದ್ದಿ ಪ್ರಕಟವಾಗಿದೆ. ಈ ವಿಚಾರವಾಗಿ ಹರ್ಭಜನ್ ಇನ್ನೂ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ರಾಜ್ಯ ಸರ್ಕಾರವು ರಾಜ್ಯದ ಉದ್ದೇಶಿತ ಕ್ರೀಡಾ ವಿಶ್ವವಿದ್ಯಾಲಯದ ಮುಖ್ಯಸ್ಥರನ್ನಾಗಿ ಹರ್ಭಜನ್ ಸಿಂಗ್ ಮಾಡುವ ಸಾಧ್ಯತೆಯಿದೆ. ಇದನ್ನೂ ಓದಿ: ಅಬ್ಬಬ್ಬಾ..! 60 ಕೋಟಿ ಬಾಚಿದ ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರ : ಬಾಕ್ಸ್ ಆಫೀಸ್ ಚಿಂದಿ ಚಿತ್ರಾನ್ನ
ಫೆಬ್ರವರಿಯಲ್ಲಿ ನಡೆದ ಪಂಜಾಬ್ ಚುನಾವಣೆಗೂ ಮುನ್ನ ಹರ್ಭಜನ್ ಸಿಂಗ್ ಬಿಜೆಪಿ ಸೇರುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿದ್ದವು. ಬಿಜೆಪಿಯ ಹಿರಿಯ ನಾಯಕರೊಬ್ಬರು ನಾವು ಹರ್ಭಜನ್ ಮತ್ತು ಭಾರತದ ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ಅವರನ್ನು ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಆದರೆ ಈ ಎಲ್ಲಾ ವದಂತಿಗಳಿಗೆ ಹರ್ಭಜನ್ ಸಿಂಗ್ ಅವರು ತೆರೆ ಎಳೆದಿದ್ದರು.
ನಂತರ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರೊಂದಿಗಿರುವ ಫೋಟೋವನ್ನು ಹರ್ಭಜನ್ ಸಿಂಗ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ ಶೇರ್ ಮಾಡಿಕೊಂಡಿದ್ದರು. ಹೀಗಾಗಿ ಮತ್ತೆ ಹರ್ಭಜನ್ ಸಿಂಗ್ ಕಾಂಗ್ರೆಸ್‍ಗೆ ಸೇರ್ಪಡೆಯಾಗುತ್ತಿದ್ದಾರೆ ಎಂಬ ಸುದ್ದಿ ಎಲ್ಲಡೆ ಹರಿದಾಡಲು ಆರಂಭವಾಯಿತು. ಇದನ್ನೂ ಓದಿ: 2023ರಲ್ಲಿ ಬರಲಿದೆ ಭಾರತದ ಮೊದಲ RRTS ರೈಲು