Wednesday, 19th February 2020

Recent News

ದಕ್ಷಿಣ ಆಫ್ರಿಕಾ ಟೂರ್ನಿಗೆ ಹಾರ್ದಿಕ್ ಪಾಂಡ್ಯ ‘ಭಾರೀ’ ತರಬೇತಿ

ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಯಿಂದ ವಿಶ್ರಾಂತಿ ಪಡೆದಿದ್ದ ಟೀಂ ಇಂಡಿಯಾ ಆಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಸಿದ್ಧತೆ ನಡೆಸಿದ್ದು, ಇದೇ 15 ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಾರ್ದಿಕ್ ಪಾಂಡ್ಯ ಆಡಲಿದ್ದಾರೆ.

ನೆಟ್ಸ್ ನಲ್ಲಿ ಬ್ಯಾಟಿಂಗ್ ತರಬೇತಿ ಪಡೆಯುತ್ತಿರುವ ವಿಡಿಯೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿರುವ ಹಾರ್ದಿಕ್ ಪಾಂಡ್ಯ, ಟೀಂ ಇಂಡಿಯಾ ತಂಡದೊಂದಿಗೆ ಕೂಡಿಕೊಳ್ಳಲು ಎದುರು ನೋಡುತ್ತಿದ್ದೇನೆ ಎಂದು ತಮ್ಮ ಕಾತುರತೆಯನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರ ಹೆಲಿಕಾಪ್ಟರ್ ರೀತಿಯ ಶಾಟ್‍ಗಳನ್ನೇ ಹಾರ್ದಿಕ್ ಪಾಂಡ್ಯ ಅಭ್ಯಾಸ ನಡೆಸಿದ್ದು ವಿಶೇಷವಾಗಿದೆ.

ವಿಶ್ವಕಪ್ ಟೂರ್ನಿಯ ಸೆಮಿ ಫೈನಲ್ ಪಂದ್ಯದಲ್ಲಿ ಆಡಿದ್ದ ಪಾಂಡ್ಯ, ವೆಸ್ಟ್ ಇಂಡೀಸ್ ವಿರುದ್ಧದ ಟೂರ್ನಿಯಿಂದ ಹೊರಗುಳಿದಿದ್ದ ಸಂಗತಿ ಎಲ್ಲರಿಗೂ ತಿಳಿದಿದೆ. ಮತ್ತೆ ಕ್ರಿಕೆಟ್ ಕ್ರೀಡಾಂಗಣಕ್ಕೆ ಎಂಟ್ರಿ ಕೊಡಲು ಹಾರ್ದಿಕ್ ತರಬೇತಿಯಲ್ಲಿ ನಿರತರಾಗಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಟೂರ್ನಿ ತವರಿನಲ್ಲೇ ನಡೆಯುತ್ತಿರುವುದರಿಂದ ಕೊಹ್ಲಿ ನಾಯಕತ್ವದ ತಂಡದ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಮನೀಷ್ ಪಾಂಡೆ, ವಾಷಿಂಗ್ಟನ್ ಸುಂದರ್, ರಾಹುಲ್ ಚಹರ್, ದೀಪಕ್ ಚಹರ್, ಖಲೀಲ್ ಅಹ್ಮದ್, ನವದೀಪ್ ಸೈನಿ ರಂತಹ ಯುವ ಆಟಗಾರರು ತಂಡದಲ್ಲಿ ಸ್ಥಾನದಲ್ಲಿ ಸ್ಥಾನ ಪಡೆದಿದ್ದಾರೆ. ಇತ್ತ ಈ ಟೂರ್ನಿಯಿಂದಲೂ ಧೋನಿ ಹೊರಗುಳಿದ ಪರಿಣಾಮ ರಿಷಬ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.

Leave a Reply

Your email address will not be published. Required fields are marked *