ಮುಂಬೈ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದಲೇ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ (Hardik Pandya) ಹೊರಗುಳಿದಿದ್ದು, ಟೀಂ ಇಂಡಿಯಾಕ್ಕೆ ದೊಡ್ಡ ಆಘಾತವಾಗಿದೆ.
India’s star all-rounder to miss the remainder of #CWC23.
Details ????https://t.co/oE1Fh9e5hG
— ICC (@ICC) November 4, 2023
Advertisement
ಪಾಂಡ್ಯ ಟೂರ್ನಿಯಿಂದ ಹೊರಬಿದ್ದ ಹಿನ್ನೆಲೆ ಅವರ ಸ್ಥಾನಕ್ಕೆ ಕನ್ನಡಿಗ ಪ್ರಸಿದ್ಧ್ ಕೃಷ್ಣ (Prasidh Krishna) ಅವರನ್ನ ಆಯ್ಕೆ ಮಾಡಲಾಗಿದೆ. ಕಳೆದ ಅಕ್ಟೋಬರ್ 19 ರಂದು ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ (Injured Hardik Pandya) ನೆದರ್ಲೆಂಡ್ಸ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದರು. ಆದರೀಗ ವಿಶ್ವಕಪ್‌ನಿಂದಲೇ ಹೊರಗುಳಿದಿದ್ದಾರೆ. 2019ರ ವಿಶ್ವಕಪ್ ಟೂರ್ನಿಯಲ್ಲೂ ಶಿಖರ್ ಧವನ್ ಸಹ ಗಾಯದ ಸಮಸ್ಯೆಗೆ ತುತ್ತಾಗಿ ಅರ್ಧದಲ್ಲೇ ವಿಶ್ವಕಪ್‌ನಿಂದ ಹೊರಗುಳಿದಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಬೌಲರ್‌ಗಳಿಗೆ ಸ್ಪೆಷಲ್ ಬಾಲ್ ಕೊಡ್ತಿದ್ದಾರೆ – ಗೆಲುವಿನ ಬಗ್ಗೆ ಪಾಕ್ ಮಾಜಿ ಕ್ರಿಕೆಟಿಗ ಟೀಕೆ
Advertisement
Advertisement
ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಮತ್ತು ಪುನರ್ವಸತಿಗೆ ಒಳಗಾಗಿರುವ ಹಾರ್ದಿಕ್, ಸೆಮಿಫೈನಲ್ ವೇಳೆಗೆ ಚೇತರಿಕೊಳ್ಳುತ್ತಾರೆ ಎಂಬ ನಿರೀಕ್ಷೆಯಿತ್ತು. ಆದ್ರೆ ಸೂಕ್ತ ಸಮಯಕ್ಕೆ ಪಾಂಡ್ಯ ಚೇತರಿಕೆ ಕಾಣದ ಕಾರಣ, ಅವರನ್ನು ತಂಡದಿಂದ ಕೈಬಿಡಲಾಗಿದೆ. ಇದೇ ವೇಳೆ ತಂಡಕ್ಕೆ ಕನ್ನಡಿಗ ಪ್ರಸಿದ್ಧ್ ಕೃಷ್ಣರನ್ನು ಆಯ್ಕೆ ಮಾಡಲಾಗಿದೆ. ಆರಂಭದಲ್ಲಿ ಕಾಲು ಉಳುಕು ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗಿತ್ತು. ಆ ಬಳಿಕ ಪಾದದ ಅಸ್ಥಿರಜ್ಜು ಸಮಸ್ಯೆ ಎದುರಾದ ಕಾರಣ ಗಾಯವು ಗಂಭೀರ ತಿರುವು ಪಡೆಯಿತು. ಇದು ಗ್ರೇಡ್-1 ಗಾಯವಾಗಿರುವುದರಿಂದ, ಚೇತರಿಕೆಗೆ 10-15 ದಿನಗಳ ಸಮಯ ಬೇಕಾಗುತ್ತದೆ. ಹೀಗಾಗಿ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ಹಾಗೂ ಐಸಿಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: World Cup 2023: ಟೀಂ ಇಂಡಿಯಾಕ್ಕೆ ಮತ್ತೆ ಆಘಾತ – ನ್ಯೂಜಿಲೆಂಡ್ ವಿರುದ್ಧದ ಪಂದ್ಯಕ್ಕೆ ಪಾಂಡ್ಯ ಔಟ್
Advertisement
ಹಾರ್ದಿಕ್ ಅಲಭ್ಯತೆಯಲ್ಲಿ ಸೂರ್ಯಕುಮಾರ್ ಯಾದವ್ ಮತ್ತು ಮೊಹಮ್ಮದ್ ಶಮಿ ಭಾರತ ತಂಡದ ಪ್ಲೇಯಿಂಗ್-11 ನಲ್ಲಿ ಸ್ಥಾನ ಪಡೆಯುತ್ತಿದ್ದಾರೆ. ಅದರಲ್ಲೂ ಶಮಿ ಆಡಿದ 3 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಎರಡು ಪಂದ್ಯಗಳಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ. ಒಟ್ಟು 14 ವಿಕೆಟ್‌ಗಳನ್ನು ಪಡೆಯುವುದರೊಂದಿಗೆ ತಮ್ಮ ಸಾಮರ್ಥ್ಯ ಸಾಬೀತು ಮಾಡಿದ್ದಾರೆ. ಆದ್ರೆ ಪ್ರಸಿದ್ಧ್ ಕೃಷ್ಣ ಅವರನ್ನು ಸೆಮಿಸ್‌ಗೆ ಕಣಕ್ಕಿಳಿಸಲಾಗುತ್ತದೆಯೇ ಅಥವಾ ಈಗಾಗಲೇ ಭಾರತ ಸೆಮಿಸ್‌ಗೆ ಎಂಟ್ರಿ ಕೊಟ್ಟಿರುವುದರಿಂದ ಪ್ರಮುಖ ಬೌಲರ್‌ಗಳಿಗೆ ರೆಸ್ಟ್ ನೀಡಿ ದಕ್ಷಿಣ ಆಫ್ರಿಕಾ ಮತ್ತು ನದೆರ್ಲೆಂಡ್ಸ್ ವಿರುದ್ಧ ಪಂದ್ಯಗಳಿಗೆ ಕಣಕ್ಕಿಳಿಸಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ. ಇದನ್ನೂ ಓದಿ: ಇಂಗ್ಲೆಂಡ್ ಪಂದ್ಯದಿಂದಲೂ ಔಟ್ – ಪಾಂಡ್ಯಗೆ ಗಾಯ ಗಂಭೀರ ಸ್ವರೂಪದ್ದು
ಪಾಂಡ್ಯಗೆ ಏನಾಗಿತ್ತು..?
ಐಸಿಸಿ ಏಕದಿನ ವಿಶ್ವಕಪ್ (ICC World Cup) ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು.
Web Stories