ನವದೆಹಲಿ: ಪ್ರಸ್ತುತ ನಡೆಯುತ್ತಿರುವ 2023ರ ಏಕದಿನ ವಿಶ್ವಕಪ್ (World Cup 2023) ಟೂರ್ನಿಯಿಂದ ಹಾರ್ದಿಕ್ ಪಾಂಡ್ಯ (Hardik Pandya) ಹೊರಗುಳಿದಿದ್ದು, ಈ ಬೆನ್ನಲ್ಲೇ ಭಾರತೀಯ ಕ್ರಿಕೆಟ್ ನಿಯಂತ್ರಣಾ ಮಂಡಳಿ (BCCI) ಕೆಎಲ್ ರಾಹುಲ್ (KL Rahul) ಅವರನ್ನು ಉಪನಾಯಕನನ್ನಾಗಿ (Vice Captain) ನೇಮಿಸಿದೆ.
ಗಾಯದ ಸಮಸ್ಯೆಯಿಂದಾಗಿ ಹಾರ್ದಿಕ್ ಪಾಂಡ್ಯ ವಿಶ್ವಕಪ್‌ನಿಂದ ಹೊರಗುಳಿದಿರುವುದನ್ನು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ಶನಿವಾರ ಬೆಳಗ್ಗೆ ಖಚಿತಪಡಿಸಿದೆ. ಪಾದದ ಗಾಯದಿಂದಾಗಿ ಪಾಂಡ್ಯ ಇನ್ನು ಮುಂದಿನ ಪಂದ್ಯಗಳಲ್ಲಿ ಭಾಗವಹಿಸುವುದಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ತಿಳಿಸಿದೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ತಂಡದ ಉಳಿದ ಪಂದ್ಯಗಳಿಗೆ ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಐಸಿಸಿ ಹೇಳಿದೆ. ಇದನ್ನೂ ಓದಿ: ಕೊಹ್ಲಿಗೂ ಮುನ್ನವೇ ಸಚಿನ್ ಶತಕ ದಾಖಲೆ ಉಡೀಸ್ ಮಾಡಿದ ರಚಿನ್..!
Advertisement
KL Rahul appointed as Vice Captain of team India in this World Cup.
Recovering from injury to proving his worth and now becoming VC in the World Cup, a comeback to remember by KL…!!! pic.twitter.com/D1cA8IqxXe
— Mufaddal Vohra (@mufaddal_vohra) November 4, 2023
Advertisement
ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಕಾಲು ಉಳುಕಿಸಿಕೊಂಡಿದ್ದ ಹಾರ್ದಿಕ್ ಪಾಂಡ್ಯ, ನೆದರ್ಲೆಂಡ್ಸ್ ಅಥವಾ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯಕ್ಕೆ ಟೀಂ ಇಂಡಿಯಾಕ್ಕೆ ಮರಳುತ್ತಾರೆ ಎಂದು ರೋಹಿತ್ ಶರ್ಮಾ ಹೇಳಿದ್ದರು. ಆದರೀಗ ಪಾಂಡ್ಯ ವಿಶ್ವಕಪ್‌ನಿಂದಲೇ ಹೊರಗುಳಿದಿರುವುದು ಬೇಸರದ ಸಂಗತಿ. ಇದನ್ನೂ ಓದಿ: World Cup 2023: ಶತಕ ಸಿಡಿಸಿ ಮೆರೆದಾಡಿದ ರಚಿನ್ – ಪಾಕಿಸ್ತಾನಕ್ಕೆ 402 ರನ್‌ಗಳ ಗುರಿ
Advertisement
ಆರಂಭದಲ್ಲಿ ಕಾಲು ಉಳುಕು ಹೊರತಾಗಿ ಬೇರೇನೂ ಗಂಭೀರ ಸಮಸ್ಯೆ ಇಲ್ಲ ಎನ್ನಲಾಗಿತ್ತು. ಆ ಬಳಿಕ ಪಾದದ ಅಸ್ಥಿರಜ್ಜು ಸಮಸ್ಯೆ ಎದುರಾದ ಕಾರಣ ಗಾಯವು ಗಂಭೀರ ತಿರುವು ಪಡೆಯಿತು. ಇದು ಗ್ರೇಡ್-1 ಗಾಯವಾಗಿರುವುದರಿಂದ, ಚೇತರಿಕೆಗೆ 10-15 ದಿನಗಳ ಸಮಯ ಬೇಕಾಗುತ್ತದೆ. ಹೀಗಾಗಿ ಅವರಿಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ ಎಂದು ಬಿಸಿಸಿಐ ಹಾಗೂ ಐಸಿಸಿ ಮೂಲಗಳು ತಿಳಿಸಿವೆ. ಇದನ್ನೂ ಓದಿ: ವಿಶ್ವಕಪ್ ಟೂರ್ನಿಯಿಂದಲೇ ಪಾಂಡ್ಯ ಔಟ್ – ಬದಲಿ ಆಟಗಾರನಾಗಿ ಈ ಕನ್ನಡಿಗ ಆಯ್ಕೆ
Advertisement
ಪಾಂಡ್ಯಗೆ ಏನಾಗಿತ್ತು..?
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ 17ನೇ ಪಂದ್ಯದಲ್ಲಿ ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಸೆಣಸಾಟ ನಡೆಸಿದ್ದವು. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 9ನೇ ಓವರ್ ನಲ್ಲಿ ಬೌಲಿಂಗ್ ಮಾಡುತ್ತಿದ್ದ ಪಾಂಡ್ಯ 3ನೇ ಎಸೆತ ಬೌಲಿಂಗ್ ಮಾಡಿದಾಗ ಕ್ರೀಸ್‌ನಲ್ಲಿದ್ದ ಲಿಟ್ಟನ್ ದಾಸ್ ಸ್ರೈಟ್‌ಡ್ರೈವ್ ಮಾಡಿದರು. ಆಗ ಪಾಂಡ್ಯ ಕಾಲಿನಿಂದ ಚೆಂಡನ್ನು ತಡೆಯಲು ಪ್ರಯತ್ನಿಸಿದಾಗ ಬ್ಯಾಲೆನ್ಸ್ ತಪ್ಪಿ ಕಾಲು ಉಳುಕಿಸಿಕೊಂಡರು. ತಕ್ಷಣವೇ ಫಿಸಿಯೋ ಥೆರಪಿಸ್ಟ್ ಬಂದು ಚಿಕಿತ್ಸೆ ನೀಡಿದರೂ ಮತ್ತೆ ಬೌಲಿಂಗ್ ಮಾಡಲು ಸಾಧ್ಯವಾಗಿಲ್ಲ. ಹಾಗಾಗಿ ಆಟದ ಮಧ್ಯದಲ್ಲೇ ಮೈದಾನ ತೊರೆಯಲು ನಿರ್ಧರಿಸಿದರು. ಬಳಿಕ ರೋಹಿತ್ ಶರ್ಮಾ ಜೊತೆ ಮಾತುಕತೆ ನಡೆದ ಕೊಹ್ಲಿ ಉಳಿದಿದ್ದ ಮೂರು ಎಸೆತಗಳನ್ನು ತಾವೇ ಎಸೆಯುವ ಮೂಲಕ ಬೌಲಿಂಗ್ ಪೂರ್ಣಗೊಳಿಸಿದರು. ಇದನ್ನೂ ಓದಿ: ನೆದರ್ಲ್ಯಾಂಡ್ಸ್ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ – ಅಫ್ಘಾನ್ ಸೆಮಿಗೆ ಪ್ರವೇಶಿಸುತ್ತಾ? ಲೆಕ್ಕಾಚಾರ ಏನು?