ಮುಂಬೈ: ಬಿಸಿಸಿಐ (BCCI) ನ್ಯೂಜಿಲೆಂಡ್ ವಿರುದ್ಧದ ಸೀಮಿತ ಓವರ್‌ಗಳ ಪಂದ್ಯ ಮತ್ತು ಆಸ್ಟ್ರೇಲಿಯಾ ವಿರುದ್ಧದ ಎರಡು ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾವನ್ನು (Team India) ಆಯ್ಕೆ ಮಾಡಿದೆ.
Advertisement
ನ್ಯೂಜಿಲೆಂಡ್ ವಿರುದ್ಧದ ಟಿ20 (T20I) ಸರಣಿಗೆ ಹಾರ್ದಿಕ್ ಪಾಂಡ್ಯ (Hardik Pandya) ನಾಯಕರಾಗಿ ಮುಂದುವರಿದಿದ್ದು, ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾರನ್ನು ಕೈಬಿಡಲಾಗಿದೆ. 18 ತಿಂಗಳುಗಳ ಬಳಿಕ ಪೃಥ್ವಿ ಶಾಗೆ (Prithvi Shaw) ಮರಳಿ ರಾಷ್ಟ್ರೀಯ ತಂಡದ ಪರ ಆಡಲು ಕರೆ ನೀಡಲಾಗಿದೆ. ಟಿ20 ತಂಡದಲ್ಲಿ ಜಿತೇಶ್ ಶರ್ಮಾ ಹೊರತು ಪಡಿಸಿ ಬಹುತೇಕ ಈ ಹಿಂದೆ ಶ್ರೀಲಂಕಾ ಸರಣಿಯಲ್ಲಿ ಆಡಿದ ಆಟಗಾರರು ಆಯ್ಕೆ ಆಗಿದ್ದಾರೆ.
Advertisement
Advertisement
ಏಕದಿನ ಸರಣಿಗೆ ರೋಹಿತ್ ಶರ್ಮಾ ಮತ್ತು ಕೊಹ್ಲಿ ಮರಳಿದ್ದು, ರೋಹಿತ್ ನಾಯಕರಾಗಿ ತಂಡವನ್ನು ಮುನ್ನಡೆಸಲಿದ್ದಾರೆ. ಇಶಾನ್ ಕಿಶನ್ ಜೊತೆ ವಿಕೆಟ್ ಕೀಪರ್ ಆಗಿ ಕೆ.ಎಸ್ ಭರತ್‍ಗೆ ಮಣೆ ಹಾಕಲಾಗಿದೆ. ಕೆ.ಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್‍ಗೆ ನ್ಯೂಜಿಲೆಂಡ್ ಸರಣಿಯಿಂದ ವೈಯಕ್ತಿಕ ಕಾರಣಕ್ಕಾಗಿ ವಿಶ್ರಾಂತಿ ನೀಡಲಾಗಿದೆ. ಇದನ್ನೂ ಓದಿ: ಪ್ರತಿಭಾವಂತ ಕ್ರಿಕೆಟರ್ ಸಿದ್ಧಾರ್ಥ್ ಶರ್ಮಾ ನಿಧನ
Advertisement
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ಗಾಯಾಳುವಾಗಿ ತಂಡದಿಂದ ಹೊರಗುಳಿದಿದ್ದ ರವೀಂದ್ರ ಜಡೇಜಾ ವಾಪಾಸಾಗಿದ್ದಾರೆ. ಅಚ್ಚರಿ ಎಂಬಂತೆ ಸೂರ್ಯಕುಮಾರ್ ಯಾದವ್ ಮತ್ತು ಇಶಾನ್ ಕಿಶನ್‍ಗೆ ಟೆಸ್ಟ್ ಪಂದ್ಯವಾಡಲು ಮೊದಲ ಕರೆ ಬಂದಿದೆ. ರಾಹುಲ್ ಮತ್ತು ಅಕ್ಷರ್ ಪಟೇಲ್ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ನ್ಯೂಜಿಲೆಂಡ್ ಸರಣಿಗೆ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭಮನ್ ಗಿಲ್, ಇಶಾನ್ ಕಿಶನ್ (WK), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (WK), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್ , ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್. ಇದನ್ನೂ ಓದಿ: ವಿಶ್ವಕಪ್ ಹಾಕಿಯಲ್ಲಿ ಭಾರತ ಶುಭಾರಂಭ – ಸ್ಪೇನ್ ವಿರುದ್ಧ ಗೆಲುವು
???? NEWS ????: India’s squads for Mastercard New Zealand tour of India and first two Test matches against Australia announced#TeamIndia | #INDvNZ | #INDvAUS | @mastercardindia
— BCCI (@BCCI) January 13, 2023
ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (WK), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (WK), ವಾಷಿಂಗ್ಟನ್ ಸುಂದರ್, ಕುಲ್‍ದೀಪ್ ಯಾದವ್, ಯಜುವೇಂದ್ರ ಚಹಾಲ್, ಅರ್ಶ್‍ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.
ಆಸ್ಟ್ರೇಲಿಯಾ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಕ್ಕೆ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಸ್ ಭರತ್ (WK), ಇಶಾನ್ ಕಿಶನ್ (WK), ಆರ್.ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕಟ್, ಸೂರ್ಯಕುಮಾರ್ ಯಾದವ್.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k