ಗಾಂಧಿನಗರ: ಇದೇ ಮೊದಲ ಬಾರಿಗೆ ಗುಜರಾತ್‌ನ ಗಾಂಧಿನಗರ ಲೋಕಸಭಾ ಕ್ಷೇತ್ರದ ಜನರಿಗಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಹೊನಲು ಬೆಳಕಿನ ಕ್ರಿಕೆಟ್ ಟೂರ್ನಿಯನ್ನ ಆಯೋಜಿಸಿದ್ದು, ಅಧಿಕೃತವಾಗಿ ಚಾಲನೆಗೊಂಡಿದೆ.
ಟೀಂ ಇಂಡಿಯಾ ಆಟಗಾರ ಹಾರ್ದಿಕ್ ಪಾಂಡ್ಯ, ಅಮಿತ್ ಶಾ ಜೊತೆಗೂಡಿ ʻಗಾಂಧಿನಗರ ಲೋಕಸಭಾ ಪ್ರೀಮಿಯರ್ ಲೀಗ್ʼಗೆ (Lok Sabha Premier League) ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರಭಾಯ್ ಪಟೇಲ್ ಸಹ ಸಾಥ್ ನೀಡಿದ್ದಾರೆ. ಇದನ್ನೂ ಓದಿ: ಇಂಗ್ಲೆಂಡ್ ವಿರುದ್ಧ 3ನೇ ಟೆಸ್ಟ್ ಪಂದ್ಯಕ್ಕೆ ಜಡ್ಡು ಇನ್ – ಕೆ.ಎಲ್ ರಾಹುಲ್ ಬದಲಿಗೆ ಮತ್ತೊಬ್ಬ ಕನ್ನಡಿಗನಿಗೆ ಚಾನ್ಸ್
ʻಖೇಲೋ ಇಂಡಿಯಾʼ ಮಾದರಿಯಲ್ಲಿ ಕ್ರೀಡಾ ಉತ್ಸಾಹ ಬೆಳೆಸುವ ನಿಟ್ಟಿನಲ್ಲಿ ʻಖೇಲೋ ಗಾಂಧಿನಗರʼ ಘೋಷವಾಕ್ಯದ ಅಡಿಯಲ್ಲಿ ಟೂರ್ನಿ ಆಯೋಜಿಸಲಾಗಿದೆ. ಇದನ್ನೂ ಓದಿ: 8 ತಿಂಗಳಲ್ಲಿ ಆಸ್ಟ್ರೇಲಿಯಾ ವಿರುದ್ಧವೇ 3 ವಿಶ್ವಕಪ್ ಟ್ರೋಫಿ ಕಳೆದುಕೊಂಡ ಭಾರತ!
ವೆಜಲ್‌ಪುರ, ಘಟ್ಲೋಡಿಯಾ, ನಾರಣಪುರ, ಸಬರಮತಿ, ಗಾಂಧಿನಗರ ಉತ್ತರ, ಮಾನ್ಸಾ ಮತ್ತು ಸನಂದ್ ಸೇರಿ ಏಳು ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಈ ಕ್ರಿಕೆಟ್ ಟೂರ್ನಿಯು 13 ಮೈದಾನಗಳಲ್ಲಿ 21 ದಿನಗಳ ಕಾಲ ನಡೆಯಲಿದೆ. ಒಟ್ಟು 1,078 ತಂಡಗಳ ನಡುವೆ ಲೀಗ್ ಪಂದ್ಯಗಳು ನಡೆಯಲಿದ್ದು, 16,100 ಆಟಗಾರರು ಪಾಲ್ಗೊಳ್ಳಲಿದ್ದಾರೆ. ಪ್ರತಿ ಪಂದ್ಯಕ್ಕೆ 10 ಓವರ್ ಮೀಸಲಾಗಿರುತ್ತದೆ. ಇದನ್ನೂ ಓದಿ: ಪಾಥುಮ್ ನಿಸ್ಸಾಂಕಾ ದ್ವಿಶತಕದ ಅಬ್ಬರ – 24 ವರ್ಷಗಳಿಂದ ಜಯಸೂರ್ಯ ಹೆಸರಲ್ಲಿದ್ದ ದಾಖಲೆ ನುಚ್ಚುನೂರು!