ಗಾಂಧಿನಗರ: ಇತ್ತೀಚೆಗೆ ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿದ್ದ ಗುಜರಾತ್ ಯುವರಾಜಕಾರಣಿ ಹಾರ್ದಿಕ್ ಪಟೇಲ್ ಬಿಜೆಪಿ ಪಕ್ಷವನ್ನು ಸೇರಿದ್ದಾರೆ.
ಗುಜರಾತ್ ರಾಜ್ಯಾಧ್ಯಕ್ಷ ಸಿ.ಆರ್.ಪಾಟೀಲ್ ಮತ್ತು ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಹಾರ್ದಿಕ್ ಪಟೇಲ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಗಾಂಧಿನಗರದಲ್ಲಿರುವ ಬಿಜೆಪಿ ಪಕ್ಷದ ಕಚೇರಿಯ ಹೊರಗೆ ಹಾರ್ದಿಕ್ ಪಟೇಲ್ ಅವರನ್ನು ಬಿಜೆಪಿ ಸ್ವಾಗತಿಸುವ ಪೋಸ್ಟರ್ ಹಾಕಲಾಗಿತ್ತು. ಈ ಪೋಸ್ಟ್‌ನಲ್ಲಿ, ಸುಸ್ವಾಗತ ಹಾರ್ದಿಕ್ ಪಟೇಲ್ ಎಂದು ಬರೆಯಲಾಗಿತ್ತು. ಇದನ್ನೂ ಓದಿ: ಯೋಧರು ಪ್ರಯಾಣಿಸುತ್ತಿದ್ದ ವಾಹನ ಸ್ಫೋಟ: 3 ಸೈನಿಕರ ಸ್ಥಿತಿ ಗಂಭೀರ
Advertisement
LIVE: પ્રદેશ અધ્યક્ષ શ્રી @CRPaatil ની અધ્યક્ષતામાં કોંગ્રેસના નેતા શ્રી હાર્દિકભાઈ પટેલનું ભારતીય જનતા પાર્ટીમાં સ્વાગત | સ્થળ: પ્રદેશ કાર્યાલય 'શ્રી કમલમ્' https://t.co/Iu7o03oxgv
— BJP Gujarat (@BJP4Gujarat) June 2, 2022
Advertisement
ಹಾರ್ದಿಕ್ ಅವರು ಕಾರ್ಯಕ್ರಮದ ಹಿನ್ನೆಲೆ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು. ಈ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಹಾರ್ದಿಕ್ ಅವರು ಪೂಜೆ ಮುಗಿಸಿ ಮನೆಯಿಂದ ತನ್ನ ಬೆಂಬಲಿಗರೊಂದಿಗೆ ಬಿಜೆಪಿ ಕಚೇರಿ ತೆರಳಲಿದ್ದರು.
Advertisement
राष्ट्रहित, प्रदेशहित, जनहित एवं समाज हित की भावनाओं के साथ आज से नए अध्याय का प्रारंभ करने जा रहा हूँ। भारत के यशस्वी प्रधानमंत्री श्री नरेन्द्र भाई मोदी जी के नेतृत्व में चल रहे राष्ट्र सेवा के भगीरथ कार्य में छोटा सा सिपाही बनकर काम करूँगा।
— Hardik Patel (@HardikPatel_) June 2, 2022
Advertisement
ಬಿಜೆಪಿ ಸೇರುತ್ತಿರುವ ಕುರಿತು ಇಂದು ಬೆಳಗ್ಗೆ ಟ್ವೀಟ್ ಮಾಡಿದ್ದ ಪಟೇಲ್, ರಾಷ್ಟ್ರೀಯ, ರಾಜ್ಯ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಮತ್ತು ಸಾಮಾಜಿಕ ಹಿತಾಸಕ್ತಿ ಜೊತೆಗೆ ಹೊಸ ಅಧ್ಯಾಯ ಪ್ರಾರಂಭಿಸಲಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಷ್ಟ್ರ ಸೇವೆಯಲ್ಲಿನ ಬೃಹತ್ ಕಾರ್ಯದಲ್ಲಿ ನಾನು ಸಣ್ಣ ಸೈನಿಕನಾಗಿ ಕೆಲಸ ಮಾಡುತ್ತೇನೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಕಂದಮ್ಮನ ಎದುರೇ ಆತ್ಯಹತ್ಯೆ ಮಾಡಿಕೊಂಡ ತಾಯಿ – ಎರಡೂವರೆ ಗಂಟೆ ಅಮ್ಮ…ಎಂದು ಕಣ್ಣೀರಿಟ್ಟ ಮಗು
ಮೇ 18ರಂದು ಹಾರ್ದಿಕ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದರು.