ಗಾಂಧಿನಗರ: ಗುಜರಾತ್ ಚುನಾವಣೆಗೆ ಕೆಲವೇ ತಿಂಗಳು ಬಾಕಿಯಿರುವ ಹೊತ್ತಿನಲ್ಲೇ ಗುಜರಾತ್‌ನ ಕಾಂಗ್ರೆಸ್ ಯುವ ಮುಖಂಡ ಹಾರ್ದಿಕ್ ಪಟೇಲ್ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮೇ 15 ರಂದು ಉದಯಪುರದಲ್ಲಿ ನಡೆದ ಕಾಂಗ್ರೆಸ್ ವರಿಷ್ಠರ ಮೂರು ದಿನಗಳ ಚಿಂತನ-ಮಂಥನ ಸಭೆಗೆ ಹಾರ್ದಿಕ್ ಪಟೇಲ್ ಗೈರಾಗಿದ್ದರು. ಈ ಘಟನೆಯ ಬೆನ್ನಲ್ಲೇ ಪಟೇಲ್ ಕಾಂಗ್ರೆಸ್ ತೊರೆದಿದ್ದಾರೆ. ಪಾಟಿದಾರ್ ಸಮುದಾಯದ ಪ್ರಭಾವಿ ನಾಯಕ ನರೇಶ್ ಪಟೇಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಹಾರ್ದಿಕ್ ಪಟೇಲ್ ರಾಜೀನಾಮೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಹೊಸ ಮದರಸಾಗಳಿಗೆ ಯಾವುದೇ ಅನುದಾನವಿಲ್ಲ
ಈ ಕುರಿತು ಟ್ವೀಟ್ ಮಾಡಿರುವ ಹಾರ್ದಿಕ್ ಪಟೇಲ್, ನಾನು ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಸಹೋದ್ಯೋಗಿಗಳು ಮತ್ತು ಗುಜರಾತ್ ಜನ ಸ್ವಾಗತಿಸುತ್ತಾರೆ ಎಂದು ನಾನು ಭಾವಿಸುತ್ತೇನೆ. ಈ ಹೆಜ್ಜೆಯಿಂದ ಭವಿಷ್ಯದಲ್ಲಿ ನಾನು ಗುಜರಾತ್‌ಗೆ ನಿಜವಾಗಿಯೂ ಉತ್ತಮ ಕೆಲಸಗಳನ್ನು ಮಾಡಲು ಸಾಧ್ಯವಾಗಲಿದೆ ಎಂದು ನಂಬುತ್ತೇನೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಶ್ರೀಕೃಷ್ಣನ ಜನ್ಮಸ್ಥಳದಲ್ಲಿರೋ ಮಸೀದಿಯಲ್ಲಿ ಮುಸ್ಲಿಮರ ಪ್ರಾರ್ಥನೆಗೆ ನಿರ್ಬಂಧ ವಿಧಿಸಿ: ಕೋರ್ಟ್‌ಗೆ ಮನವಿ
आज मैं हिम्मत करके कांग्रेस पार्टी के पद और पार्टी की प्राथमिक सदस्यता से इस्तीफा देता हूँ। मुझे विश्वास है कि मेरे इस निर्णय का स्वागत मेरा हर साथी और गुजरात की जनता करेगी। मैं मानता हूं कि मेरे इस कदम के बाद मैं भविष्य में गुजरात के लिए सच में सकारात्मक रूप से कार्य कर पाऊँगा। pic.twitter.com/MG32gjrMiY
— Hardik Patel (@HardikPatel_) May 18, 2022
ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ. ಗುಜರಾತ್‌ನ ಪಾಟಿದಾರ್ ಸಮುದಾಯದ ಯುವ ಮುಖಂಡ ಹಾರ್ದಿಕ್ ಪಟೇಲ್ 2019 ರಲ್ಲಿ ಲೋಕಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ಸೇರಿದ್ದರು.
ಅವರು ಕಳೆದ ಕೆಲವು ವಾರಗಳಿಂದ ಗುಜರಾತ್ ಕಾಂಗ್ರೆಸ್ ಘಟಕದಲ್ಲಿ ಆಂತರಿಕ ಕಲಹದ ಬಗ್ಗೆ ದೂರು ನೀಡುತ್ತಿದ್ದರು.