ಗಾಂಧೀನಗರ: ಗುಜರಾತ್ ಕಾಂಗ್ರೆಸ್‍ನ ಮಾಜಿ ಕಾರ್ಯಾಧ್ಯಕ್ಷ ಮತ್ತು ಪಾಟಿದಾರ್ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಜೂನ್ 2ರಂದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ) ಸೇರ್ಪಡೆಯಾಲಿದ್ದಾರೆ.
ಪಶ್ಚಿಮ ರಾಜ್ಯದಲ್ಲಿ ಈ ವರ್ಷಾಂತ್ಯಕ್ಕೆ ಚುನಾವಣೆ ನಡೆಯಲಿದೆ. ಈ ನಡುವೆ ಕಾಂಗ್ರೆಸ್ ತೊರೆದ ಕೆಲವೇ ದಿನಗಳಲ್ಲಿ ಬಿಜೆಪಿ ಸೇರುತ್ತಿರುವ ಹಾರ್ದಿಕ್ ಪಟೇಲ್ ಅವರ ನಿರ್ಧಾರವು ಗುಜರಾತ್ ವಿಧಾನಸಭೆ ಚುನಾವಣೆಗೂ ಮುಂಚಿತವಾಗಿಯೇ ಮಹತ್ವ ಪಡೆದುಕೊಂಡಿದೆ.
Advertisement
Hardik Patel to join BJP on 2nd June – he confirms to ANI. He had recently quit Congress. pic.twitter.com/xtgGjQ9hhm
— ANI (@ANI) May 31, 2022
Advertisement
ಕೆಲವು ದಿನಗಳಿಂದ ಹಾರ್ದಿಕ್ ಪಟೇಲ್ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಳ್ಳುತ್ತಾರೆ ಎಂಬ ಊಹಾಪೋಹಗಳು ಹರಿದಾಡುತ್ತಿತ್ತು. ಆದರೆ ಈ ಊಹಾಪೋಹಗಳನ್ನು ನಿರಾಕರಿಸಿ, ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಬಗ್ಗೆ ಆಮ್ ಆದ್ಮಿ ಪಕ್ಷದ ವಿರುದ್ಧ ಕಿಡಿಕಾರಿದ್ದರು. ನಾನು ಬಿಜೆಪಿ ಸೇರುವುದಿಲ್ಲ. ಒಂದು ವೇಳೆ ಸೇರಿದರೆ ನಿಮಗೆ ತಿಳಿಸುತ್ತೇನೆ ಎಂದು ಭಾನುವಾರ ಹೇಳಿದ್ದರು. ಇದನ್ನೂ ಓದಿ: ಪಠ್ಯದಲ್ಲಿ ಬಸವಣ್ಣನ ವಿಚಾರಕ್ಕೆ ಧಕ್ಕೆ – ಪಂಡಿತಾರಾದ್ಯ ಶ್ರೀಗಳಿಂದ ಹೋರಾಟದ ಎಚ್ಚರಿಕೆ
Advertisement
Advertisement
ಇದೀಗ ಸೋನಿಯಾ ಗಾಂಧಿ ಅವರಿಗೆ ರಾಜೀನಾಮೆ ಪತ್ರ ಬರೆದಿರುವ ಹಾರ್ದಿಕ್ ಪಟೇಲ್ ಅವರು, ಕಾಂಗ್ರೆಸ್ ಪಕ್ಷ ಈ ಬಾರಿಯ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ್ದಾರೆ. ಜೊತೆಗೆ ಪಕ್ಷವು ದೇಶದಲ್ಲಿನ ಕೆಲವು ಪ್ರಮುಖ ವಿಷಯಗಳ ಬಗ್ಗೆ ತಡೆಹಿಡಿಯುವ ಪಾತ್ರವನ್ನು ಮಾತ್ರ ವಹಿಸಿದೆ ಮತ್ತು ಎಲ್ಲವನ್ನು ವಿರೋಧಿಸುವ ಮಟ್ಟಕ್ಕೆ ಇಳಿದಿದೆ ಎಂದು ತಿಳಿಸಿದ್ದಾರೆ.