ಮಂಗಳೂರು ವಕೀಲರ ಸಂಘದಿಂದ ಪದ್ಮಶ್ರೀ ಹರೇಕಳ ಹಾಜಬ್ಬಗೆ ಗೌರವ ಸನ್ಮಾನ

Public TV
1 Min Read
harekala hajabba 4

ಮಂಗಳೂರು: ಅಕ್ಷರ ಸಂತ ಅಂತಲೇ ಖ್ಯಾತಿ ಪಡೆದ ಹರೇಕಳ ಹಾಜಬ್ಬ ಅವರಿಗೆ ಮಂಗಳೂರಿನ ವಕೀಲರ ಸಂಘದಿಂದ ಸನ್ಮಾನ ಮಾಡಲಾಗಿದೆ.

ವಕೀಲರ ಸಂಘದ ವಾರ್ಷಿಕೋತ್ಸವ ಇತ್ತೀಚೆಗೆ ಮಂಗಳೂರಿನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ನಡೆಯಿತು. ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮುರಳಿಧರ ಪೈಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

harekala hajabba 1 2

ಹಾಜಬ್ಬ ಅವರ ಕನಸಿಗೆ ಸಹಕಾರಿಯಾಗುವಂತೆ ವಕೀಲರು ಸಂಗ್ರಹಿಸಿದ ಸುಮಾರು 2 ಲಕ್ಷ ರೂ.ಗಳನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ರಾಜ್ಯಮಟ್ಟದ ಪ್ರಶಸ್ತಿ ಪಡೆದ ತುಳುನಾಡ ವೈಭವ ಎಂಬುವಂತಹ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನಗೊಂಡಿತು. ಮಂಗಳೂರು ವಕೀಲರ ಸಂಘದ ವಾರ್ಷಿಕೋತ್ಸವದಲ್ಲಿ ನ್ಯಾಯಾಧೀಶರು ಮತ್ತು ವಕೀಲರು ತಮ್ಮ ಕುಟುಂಬ ಸದಸ್ಯರೊಂದಿಗೆ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

harekala hajabba

ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ. ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಇದನ್ನೂ ಓದಿ:  119 ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

Share This Article
Leave a Comment

Leave a Reply

Your email address will not be published. Required fields are marked *