ಉತ್ತರಾಖಂಡದಲ್ಲಿ ಅಂಚೆ ಮತಪತ್ರ ತಿದ್ದುತ್ತಿರುವ ವೀಡಿಯೋ ವೈರಲ್

Public TV
2 Min Read
harish rawat

ಡೆಹ್ರಾಡೂನ್: ಉತ್ತರಾಖಂಡದಲ್ಲಿ ವ್ಯಕ್ತಿಯೊಬ್ಬರು ಅಂಚೆ ಮತ ಪತ್ರಗಳನ್ನು ತಿದ್ದುತ್ತಿರುವ ವೀಡಿಯೋವನ್ನು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇದೀಗ ವೀಡಿಯೋ ವೈರಲ್ ಆಗುತ್ತಿದೆ.

ಟ್ವೀಟ್‍ನಲ್ಲಿ ಏನಿದೆ?: ಎಲ್ಲರ ಮಾಹಿತಿಗಾಗಿ ಈ ವೀಡಿಯೋವನ್ನು ಹಂಚಿಕೊಳ್ಳುತ್ತಿದ್ದೇನೆ. ಸೇನಾ ಕೇಂದ್ರದಲ್ಲಿ ಒಬ್ಬ ವ್ಯಕ್ತಿ ಹೇಗೆ ಹಲವಾರು ಮತಪತ್ರಗಳಿಗೆ ಟಿಕ್ ಹಾಗೂ ಸಹಿ ಹಾಕುತ್ತಿದ್ದಾನೆ ಎನ್ನುವುದರ ಕುರಿತು ಈ ವೀಡಿಯೋದಲ್ಲಿ ಮಾಹಿತಿಯಿದೆ. ಚುನಾವಣಾ ಆಯೋಗ ಇದನ್ನು ಗಮನಿಸುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ರಾವತ್ ಅವರ ವಕ್ತಾರ ಸುರೇಂದ್ರ ಕುಮಾರ್ ಮಾತನಾಡಿ, ಈ ಬಗ್ಗೆ ಚುನಾವಣಾ ಆಯೋಗಕ್ಕೆ ದೂರು ನೀಡಿಲ್ಲ. ಆದರೆ ಅವರೇ ಸ್ವಯಂಪ್ರೇರಿತವಾಗಿ ದೂರು ದಾಖಲಿಸಬಹುದು. ಈ ವೀಡಿಯೋ ಉತ್ತರಾಖಂಡದಿಂದಲೇ ಬಂದಿದೆ ಎಂದ ಅವರು, ಈ ವೀಡಿಯೋದ ಮೂಲವನ್ನು ಬಹಿರಂಗ ಪಡಿಸಲು ನಿರಾಕರಿಸಿದರು.

web bjp logo 1538503012658

ಈ ವೀಡಿಯೋಕ್ಕೆ ಉತ್ತರಾಖಂಡ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಪ್ರೀತಮ್ ಸಿಂಗ್ ಪ್ರತಿಕ್ರಿಯಿಸಿದ್ದು, ಈ ವೀಡಿಯೋ ಪ್ರಜಾಪ್ರಭುತ್ವವನ್ನು ಅಪಹಾಸ್ಯ ಮಾಡುತ್ತಿದೆ. ಚುನಾವಣಾ ಆಯೋಗವು ಇದನ್ನು ಗಂಭೀರವಾಗಿ ಪರಿಗಣಿಸಿ, ತಪ್ಪಿತಸ್ಥರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೃತೀಯಲಿಂಗಿ

Congress

ಟ್ವೀಟ್‍ಗೆ ಪ್ರತಿಕ್ರಿಯಿಸಿದ ಬಿಜೆಪಿ, ಇದು ಕಾಂಗ್ರೆಸ್‍ನ ಹತಾಶೆಯಾಗಿದೆ. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನುಭವಿಸಿತ್ತು. ಇದರಿಂದ ಈ ರೀತಿ ಮಾಡುತ್ತಿದೆ ಎಂದು ವ್ಯಂಗ್ಯವಾಡಿದೆ. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ

Share This Article
Leave a Comment

Leave a Reply

Your email address will not be published. Required fields are marked *