ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯವನ್ನು ತ್ಯಜಿಸುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆ. ಬಿಜೆಪಿ ಬೆಂಬಲಿಗರ ಹೊರತಾಗಿಯೂ, ನಮ್ಮ ಪಕ್ಷದ ನಾಯಕರೊಬ್ಬರಿಗೆ ಸಂಬಂಧಿಸಿದ ಕೆಲವರು ನನ್ನ ವಿರುದ್ಧ ಆರೋಪ ಹೊರೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಸ್ಲಿಂ ವಿಶ್ವವಿದ್ಯಾನಿಲಯ ಸ್ಥಾಪನೆಯ ಹೇಳಿಕೆಯನ್ನು ನಾನೇ ಮಾಡಿದ್ದೇನೆ ಎಂಬುದು ಸಾಬೀತಾದ ದಿನ, ನಾನು ಮಹಾತ್ಮ ಗಾಂಧಿಯವರ ಪ್ರತಿಮೆಯ ಕೆಳಗೆ ಕುಳಿತು ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಅವರು, ಸಾಮಾಜಿಕ ಜಾಲತಾಣಗಳ ಮೂಲಕ ತನ್ನ ಬಗ್ಗೆ ಈ ಸುಳ್ಳನ್ನು ಹರಡಲು ಕಾರಣರಾದವರನ್ನು ಬಯಲಿಗೆಳೆಯಲು ಬಯಸುತ್ತೇನೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸ್ಮಾರ್ಟ್‍ಸಿಟಿ ಕಾಮಗಾರಿಯಿಂದ ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಕಂಟಕ
ಉತ್ತರಾಖಂಡ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪ್ರಚಾರದ ಮುಖ್ಯಸ್ಥರಾಗಿದ್ದ ರಾವತ್ ಅವರ ಹೇಳಿಕೆಯನ್ನು ಬಿಜೆಪಿಯು ಚುನಾವಣಾ ಪೂರ್ವದಲ್ಲಿ ಪ್ರಮುಖ ವಿಷಯವನ್ನಾಗಿ ಮಾಡಿತ್ತು. ಫೆಬ್ರವರಿ 14ರಂದು ವಿಧಾನಸಭೆ ಚುನಾವಣೆ ನಡೆದಿದ್ದು, 70 ಸ್ಥಾನಗಳಲ್ಲಿ ಬಿಜೆಪಿ 47 ಸ್ಥಾನಗಳನ್ನು ಗೆಲ್ಲುವ ಮೂಲಕ ಸತತ ಎರಡನೇ ಅವಧಿಗೆ ಸರ್ಕಾರವನ್ನು ರಚಿಸಿದೆ. ಇದನ್ನೂ ಓದಿ: ವಿಧಾನಸಭೆಯಲ್ಲಿ ಶಾಸಕರ ನಡುವೆ ಉತ್ತರ ದಕ್ಷಿಣ ವಾಕ್ಸಮರ