ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಮಿಥಾಲಿ ರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್ನಲ್ಲೇ ಮುಂದೆ ಶ್ರೀಲಂಕಾದೊಂದಿಗೆ ನಡೆಯಲಿರುವ ಏಕದಿನ ಹಾಗೂ ಟಿ20 ಪಂದ್ಯಗಳಿಗೆ ಹರ್ಮನ್ ಪ್ರೀತ್ ಕೌರ್ ಅವರನ್ನು ನಾಯಕಿಯಾಗಿ ಬಿಸಿಸಿಐ ಘೋಷಿಸಿದೆ.
Advertisement
ಮುಂದೆ ಶ್ರೀಲಂಕಾದೊಂದಿಗೆ ನಡೆಯಲಿರುವ ಟಿ20 ಹಾಗೂ ಏಕದಿನ ಪಂದ್ಯಗಳಲ್ಲಿ ತಂಡದ ನಾಯಕಿಯಾಗಿ ಹರ್ಮನ್ ಪ್ರೀತ್ ತಂಡವನ್ನು ಮುನ್ನಡೆಸಲಿದ್ದಾರೆ. ಸ್ಮೃತಿ ಮಂದಾನ ಉಪನಾಯಕಿಯಾಗಿದ್ದಾರೆ. ಇದನ್ನೂ ಓದಿ: ನಿವೃತ್ತಿ ಘೋಷಿಸಿದ ಭಾರತ ಕ್ರಿಕೆಟ್ ತಂಡದ ನಾಯಕಿಗೆ ನೆಟ್ಟಿಗರ ಪ್ರತಿಕ್ರಿಯೆ
Advertisement
ಭಾರತದ ಕೈಗೊಂಡಿರುವ ಶ್ರೀಲಂಕಾ ಪ್ರವಾಸಕ್ಕಾಗಿ ತಂಡವನ್ನು ಆಯ್ಕೆ ಮಾಡಲು ಅಖಿಲ ಭಾರತ ಮಹಿಳಾ ಆಯ್ಕೆ ಸಮಿತಿಯು ಇಂದು ಸಭೆ ನಡೆಸಿತು. ಮುಂದಿನ ಪ್ರವಾಸದಲ್ಲಿ ಶ್ರೀಲಂಕಾದ ದಂಬುಲಾ ಹಾಗೂ ಕ್ಯಾಂಡಿಯಲ್ಲಿ 3 ಟಿ20 ಹಾಗೂ ಏಕದಿನ ಪಂದ್ಯಗಳು ನಡೆಯಲಿವೆ ಎಂದು ಸಮಿತಿ ತಿಳಿಸಿದೆ.
Advertisement
Advertisement
ಟಿ20 ಟೀಂ: ಶ್ರೀಲಂಕಾದೊಂದಿಗೆ ನಡೆಯಲಿರುವ ಟಿ20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ (ವಿಕೆಟ್ ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರನ್ ಬಹದ್ದೂರ್, ರಿಚಾ ಗೋಶ್(ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್, ರಾಧಾ ಯಾದವ್ ಹಾಗೂ ಜೆಮಿಮಾ ರಾಡ್ರಿಗಸ್.
Your contribution to Indian Cricket has been phenomenal. Congratulations @M_Raj03 on an amazing career. You leave behind a rich legacy.
We wish you all the very best for your second innings 🙌🙌 pic.twitter.com/0R66EcM0gT
— BCCI (@BCCI) June 8, 2022
ಏಕದಿನ ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್(ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ರಿಚಾ ಗೋಶ್ ಮತ್ತು ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ಎಸ್.ಮೇಘನಾ, ದೀಪ್ತಿ ಶರ್ಮಾ, ಪೂನಂ ಯಾದವ್, ರಾಜೇಶ್ವರಿ ಗಾಯಕ್ವಾಡ್, ಸಿಮ್ರನ್ ಬಹದ್ದೂರ್, ಪೂಜಾ ವಸ್ತ್ರಾಕರ್, ಮೇಘನಾ ಸಿಂಗ್, ರೇಣುಕಾ ಸಿಂಗ್ ಹಾಗೂ ಹರ್ಲೀನ್ ಡಿಯೋಲ್ ಏಕದಿನ ಪಂದ್ಯದಲ್ಲಿ ಶ್ರೀಲಂಕಾದೊಂದಿಗೆ ಸೆಣಸಲಿದ್ದಾರೆ.