ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳಿಗೂ ಮತ್ತೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಬಂಧಿತ 10 ಮಂದಿ ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಫೆ.25 ರಿಂದ 11 ದಿನಗಳ ಕಾಲ ಪೊಲೀಸರು ತಮ್ಮ ಕಸ್ಟಡಿಗೆ ಪಡೆದುಕೊಂಡಿದ್ದರು. ವಿಚಾರಣೆ ವೇಳೆ ಘಟನೆಗೆ ಸಂಬಂಧಿಸಿದಂತೆ ಹಲವು ಮಾಹಿತಿಗಳನ್ನು ಆರೋಪಿಗಳು ಪೊಲೀಸರ ಮುಂದೆ ಬಾಯಿಬಿಟ್ಟಿದ್ದರು ಎನ್ನಲಾಗಿದೆ. ಇದನ್ನೂ ಓದಿ: ರೇಣುಕಾಚಾರ್ಯ, ಪ್ರತಾಪಸಿಂಹ ವಿರುದ್ಧದ 4 ಕೇಸ್ ವಾಪಸ್ ಪಡೆದ ಸರ್ಕಾರ- ಹೈಕೋರ್ಟ್ ಗರಂ
Advertisement
Advertisement
ಪೊಲೀಸರ ಕಸ್ಟಡಿ ಅವಧಿ ಸೋಮವಾರ ಮುಗಿದ ಹಿನ್ನೆಲೆ, ಆರೋಪಿಗಳನ್ನು ಮತ್ತೆ ಎರಡನೇ ಜೆಎಂಎಫ್‌ಸಿ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ನ್ಯಾಯಾಧೀಶರು ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದ್ದಾರೆ. ಹೀಗಾಗಿ ಎಲ್ಲಾ 10 ಮಂದಿ ಆರೋಪಿಗಳು ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಆಗಿದ್ದಾರೆ. ಅಲ್ಲದೇ ಪ್ರಕರಣದ ವಿಚಾರಣೆ ವೇಳೆ ಆರೋಪಿಗಳ ವಿರುದ್ದ ಕಾನೂನುಬಾಹಿರ ಚಟುವಟಿಕೆ ನಿರ್ಬಂಧ (ಯುಎಪಿಎ) ಕಾಯ್ದೆಯಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Advertisement
ಫೆ.20 ರಂದು ಭಜರಂಗದಳ ಕಾರ್ಯಕರ್ತ ಹರ್ಷನನ್ನು ಯುವಕರ ಗುಂಪು ಹತ್ಯೆ ಮಾಡಿತ್ತು. ಹರ್ಷನ ಕುಟುಂಬಸ್ಥರಿಗೆ ವಿವಿಧ ಪಕ್ಷಗಳ ನಾಯಕರು ಹಾಗೂ ಸರ್ಕಾರ ಸಾಂತ್ವನ ಹೇಳಿದ್ದು, ಪರಿಹಾರ ನೀಡಿದೆ. ಇದನ್ನೂ ಓದಿ: ನೀರು ಕುಡಿಯೋಕೆ ಹೊರಟ ಅಶೋಕ್ ಕಾಲೆಳೆದ ಸಿದ್ದರಾಮಯ್ಯ, ಯಡಿಯೂರಪ್ಪ..!