ಬೆಂಗಳೂರು: ಕೆಲ ತಿಂಗಳ ಹಿಂದೆ ಶಿವಮೊಗ್ಗದಲ್ಲಿ ನಡೆದ ಹಿಂದೂ ಕಾರ್ಯಕರ್ತ ಹರ್ಷ ಕೊಲೆ ರಾಜ್ಯವನ್ನು ದಂಗಾಗಿಸಿತ್ತು. ಇದೀಗ ಈ ಪ್ರಕರಣಕ್ಕೆ ದೊಡ್ಡ ತಿರುವು ಸಿಕ್ಕಿದೆ.
ಹರ್ಷನ ಕೊಲೆ ಕೇವಲ ರಸ್ತೆ ಜಗಳ, ವೈಯಕ್ತಿಕ ದ್ವೇಷದಿಂದಾಗಿ ಆಗಿದ್ದಲ್ಲ. ಬದಲಿಗೆ ಉಗ್ರ ಸಂಘಟನೆಯೊಂದರ ಕೈವಾಡ ಇರುವುದಾಗಿ (ರಾಷ್ಟ್ರೀಯ ತನಿಖಾ ದಳ) ಎನ್‍ಐಎ ತನಿಖೆ ವೇಳೆ ತಿಳಿದುಬಂದಿದೆ. ಹರ್ಷ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್‍ಐಎ ಆರೋಪಿಗಳ ಮನೆ ಮೇಲೆ ದಾಳಿ ನಡೆಸಿದಾಗ ಕೆಲವೊಂದು ಎಲೆಕ್ಟ್ರಾನಿಕ್ ವಸ್ತುಗಳಿಂದ ತಾಂತ್ರಿಕ ಸಾಕ್ಷ್ಯ ಲಭ್ಯವಾಗಿದೆ. ಆರೋಪಿಗಳ ಹೇಳಿಕೆ ಮತ್ತು ತಾಂತ್ರಿಕ ಸಾಕ್ಷ್ಯಗಳ ಜೊತೆಗೆ ಶೀಘ್ರದಲ್ಲೇ ಕೋರ್ಟ್‍ಗೆ ಚಾರ್ಜ್‍ಶೀಟ್ ಸಲ್ಲಿಕೆ ಮಾಡಲು ಎನ್‍ಇಎ ಸಿದ್ಧತೆ ನಡೆಸಿದೆ. ದೋಷಾರೋಪ ಪಟ್ಟಿಯಲ್ಲಿ ಹರ್ಷನ ಹತ್ಯೆಗೆ ಪ್ರಚೋದನೆ ನೀಡಿದ ಉಗ್ರ ಸಂಘಟನೆಯ ಹೆಸರನ್ನೂ ಉಲ್ಲೇಖಿಸಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ – ಶಾಲಾ, ಕಾಲೇಜುಗಳಿಗೆ ರಜೆ
ಹರ್ಷ ಕೊಲೆ:
ಫೆಬ್ರವರಿ 20ರಂದು ರಾತ್ರಿ ಕ್ಯಾಂಟೀನ್ ಬಳಿ ಟೀ ಕುಡಿಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಯುವಕರ ಗುಂಪು ಏಕಾಏಕಿ ಹರ್ಷನ ಮೇಲೆ ದಾಳಿ ನಡೆಸಿತ್ತು. ನಂತರ ದಾಳಿ ನಡೆಸಿದ ತಂಡ ಸ್ಥಳದಿಂದ ಪರಾರಿಯಾಗಿತ್ತು. ಈ ವೇಳೆ ದಾಳಿಗೆ ಒಳಗಾದ ಹರ್ಷ ಸ್ಥಳದಲ್ಲೇ ಕುಸಿದು ಬಿದ್ದಿದ್ದ. ಕೂಡಲೇ ಆತನನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ತೀವ್ರವಾಗಿ ಹಲ್ಲೆಗೊಳಗಾಗಿದ್ದ ಹರ್ಷ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದ. ಬಳಿಕ ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ಆರೋಪಿಗಳು ಜೈಲಿನಲ್ಲಿದ್ದಾರೆ. ಈ ನಡುವೆ ಪ್ರಕರಣವನ್ನು ಸರ್ಕಾರ ಎನ್‍ಐಎಗೆ ತನಿಖೆಗೆ ವರ್ಗಾಹಿಸಿತ್ತು. ಎನ್‍ಐಎ ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದರು. ಈವರೆಗೆ ಒಟ್ಟು 450 ಹೆಚ್ಚು ಮಂದಿಯನ್ನು ಎನ್‍ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಪ್ರವೀಣ್ ಹತ್ಯೆ ಕೇಸ್ – ತಪ್ಪು ಮಾಹಿತಿಯಿಂದ ನಡೀತಾ ಕೊಲೆ?