ಬೆಂಗಳೂರು: ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ಬಂಧನ ಆಗಿದೆ. ಮೊದಲು ತನಿಖೆ ನಡೆಯಲಿ. ತನಿಖೆಯಲ್ಲಿ ಏನು ಸತ್ಯ ಗೊತ್ತಾಗುತ್ತೆ ಎಂದು ನೋಡಿಕೊಂಡು ಮುಂದಿನ ತೀರ್ಮಾನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಹರ್ಷ ಕೊಲೆ ಪ್ರಕರಣವನ್ನು ಎನ್‍ಐಎಗೆ ಕೊಡಲು ಒತ್ತಾಯದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು ಪೊಲೀಸ್ ತನಿಖೆಯಿಂದ ಬರುವ ಮಾಹಿತಿ ಆಧರಿಸಿ ಮುಂದೆ ಯಾವ ಸಂಸ್ಥೆಯಿಂದ ತನಿಖೆ ಮಾಡಿಸಬೇಕು ಎನ್ನುವ ಬಗ್ಗೆ ತೀರ್ಮಾನ ಮಾಡುತ್ತೇವೆ. ಶಿವಮೊಗ್ಗ ಶಾಂತಿಯುತ ಆಗಿದೆ. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಬೇಕಿದೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ನಡೆದ ಮೆರವಣಿಗೆಯಲ್ಲಿ 144 ಸೆಕ್ಷನ್ ಉಲ್ಲಂಘನೆ ವಿಚಾರವಾಗಿ ಕಾಂಗ್ರೆಸ್ ಸರ್ಕಾರಿ ಪ್ರಾಯೋಜಕತ್ವದ ಮೆರವಣಿಗೆ ಎಂದು ಆರೋಪಿಸಿತ್ತು. ಇದಕ್ಕೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಅವರು ಹಿಂದೆ ಸರ್ಕಾರಿ ಪ್ರಾಯೋಜಕತ್ವದಲ್ಲಿ ಇಂಥವೆಲ್ಲ ಮಾಡಿದ್ದಾರೆ. ಅವರು ಅವರ ಹಿಂದಿನ ಅನುಭವದಿಂದ ಈ ಆರೋಪ ಮಾಡಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಮೆಲಾನಿಯಾ ಟ್ರಂಪ್, ಕೇಜ್ರಿವಾಲ್ ಶಾಲೆಯನ್ನು ಮಾತ್ರ ನೋಡಬೇಕೆಂದಿದ್ದರು: ದೆಹಲಿ ಸಿಎಂ
ಇದೇ ವೇಳೆ ದೆಹಲಿ ಭೇಟಿ ವಿಚಾರ ಅಲ್ಲಗಳೆದ ಅವರು, ಸದ್ಯ ದೆಹಲಿಗೆ ಹೋಗುವ ಯಾವುದೇ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಶಿವಮೊಗ್ಗ ಪ್ರಕರಣ ಎರಡು ಪೊಲೀಸ್ ಠಾಣೆ ಮೇಲೆ ಕ್ರೈಂ ಆಡಿಟ್‌ಗೆ ಆದೇಶ: ಆರಗ ಜ್ಞಾನೇಂದ್ರ