– ಕುಟುಂಬಸ್ಥರ ಜೊತೆ ವೀಡಿಯೋ ಕಾಲ್, ವಾಟ್ಸಾಪ್ ಕಾಲ್
– ಪರಪ್ಪನ ಅಗ್ರಹಾರದಲ್ಲಿರುವ 10 ಮಂದಿ ಹಂತಕರು
– ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆತಿದ್ದಕ್ಕೆ ಹರ್ಷ ಕುಟುಂಬಸ್ಥರ ಆಕ್ರೋಶ
– ಪರಪ್ಪನ ಅಗ್ರಹಾರದಲ್ಲಿರುವ 10 ಮಂದಿ ಹಂತಕರು
– ಹಂತಕರಿಗೆ ಜೈಲಿನಲ್ಲಿ ರಾಜಾತಿಥ್ಯ ದೊರೆತಿದ್ದಕ್ಕೆ ಹರ್ಷ ಕುಟುಂಬಸ್ಥರ ಆಕ್ರೋಶ
ಶಿವಮೊಗ್ಗ: ಸೀಗೆಹಟ್ಟಿ ಬಡಾವಣೆಯಲ್ಲಿ ಕಳೆದ ಫೆ.20 ರಂದು ಬಜರಂಗದಳ ಕಾರ್ಯಕರ್ತ ಹರ್ಷನ ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಎನ್‍ಐಎ ತನಿಖೆಗೆ ವಹಿಸಿತ್ತು. ಆದರೆ ಪರಪ್ಪನ ಅಗ್ರಹಾರ ಜೈಲಿನಿಂದ ಮೊಬೈಲ್ ಫೋನ್ ಬಳಕೆ ಮಾಡುವ ಮೂಲಕ ಆರೋಪಿಗಳು ಸುದ್ದಿಯಲ್ಲಿದ್ದಾರೆ. ಆರೋಪಿಗಳಿಗೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಕಾರಣ ನಮ್ಮ ಮಗನ ಸಾವಿಗೆ ನ್ಯಾಯ ಸಿಗುವುದಿಲ್ಲ ಎಂಬ ಅನುಮಾನ ಹರ್ಷ ಕುಟುಂಬಸ್ಥರಿಗೆ ಬಂಧಿದೆ.
ಹರ್ಷನ ಹತ್ಯೆ ನಂತರ ಇಡೀ ಶಿವಮೊಗ್ಗದಲ್ಲಿ ಪ್ರಕ್ಷುಬ್ದ ವಾತಾವರಣ ನಿರ್ಮಾಣವಾಗಿತ್ತು. ಅಲ್ಲದೇ ಹರ್ಷನ ಕೊಲೆ ಪ್ರಕರಣ ರಾಷ್ಟ್ರಮಟ್ಟದಲ್ಲಿ ಗಮನ ಸಹ ಸೆಳೆದಿತ್ತು. ನಂತರ ಫೀಲ್ಡ್‌ಗೆ ಇಳಿದ ಪೊಲೀಸರ ತಂಡ ಘಟನೆ ನಡೆದ 24 ಗಂಟೆಯೊಳಗೆ ಪ್ರಕರಣದಲ್ಲಿ ಭಾಗಿಯಾಗಿದ್ದ, 10 ಮಂದಿ ಆರೋಪಿಗಳಿಗೆ ಎಡೆಮುರಿ ಕಟ್ಟಿತ್ತು. ಇದನ್ನೂ ಓದಿ: ಹರ್ಷ ಕೊಲೆ ಪ್ರಕರಣ – ಶಿವಮೊಗ್ಗದಲ್ಲಿ ಬೆಳ್ಳಂಬೆಳಗ್ಗೆ 13 ಕಡೆ ಎನ್‌ಐಎ ಅಧಿಕಾರಿಗಳ ದಾಳಿ
Advertisement
Advertisement
ಹರ್ಷ ಹತ್ಯೆ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸಿದ ಸರ್ಕಾರ ಈ ಪ್ರಕರಣದ ತನಿಖೆಯನ್ನು ಎನ್ ಐಎಗೆ ವಹಿಸಿತ್ತು. ಎನ್ ಐಎ ತಂಡ ಸಹ ಇದೀಗ ತನಿಖೆ ಕೈಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 450 ಮಂದಿಯನ್ನು ವಿಚಾರಣೆಗೆ ಒಳಪಡಿಸಿದೆ. ಎನ್‍ಐಎ ತಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗಕ್ಕೆ ಹಲವು ಬಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈಗ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದೆ.
Advertisement
ಪ್ರಕರಣ ಇಷ್ಟೊಂದು ಗಂಭೀರ ಸ್ವರೂಪ ಇರುವಾಗ ಆರೋಪಿಗಳು ಮಾತ್ರ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಬಿಂದಾಸ್ ಆಗಿ ಜೀವನ ಮಾಡುತ್ತಿದ್ದಾರೆ. ಆರೋಪಿಗಳಿಗೆ ರಾಜಾತಿಥ್ಯ ಸಿಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಆರೋಪಿಗಳಿಗೆ ಜೈಲಿನೊಳಗೆ ಮೊಬೈಲ್ ಫೋನ್ ದೊರೆತಿದ್ದು, ಮೊಬೈಲ್ ಮೂಲಕ ಕುಟುಂಬಸ್ಥರ ಜೊತೆ ವೀಡಿಯೋ ಕಾಲ್, ವಾಟ್ಸಾಪ್ ಕಾಲ್ ಮಾಡುವ ಜೊತೆಗೆ ರೀಲ್ಸ್ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ.
Advertisement
ಪ್ರಕರಣದ ಬಗ್ಗೆ ತಿಳಿದ ಹರ್ಷ ಕುಟುಂಬಸ್ಥರು ಆಕ್ರೋಶಕ್ಕೆ ಕಾರಣವಾಗಿದೆ. ಸರ್ಕಾರ ನಮ್ಮ ಮಗನ ಕೊಲೆ ಪ್ರಕರಣವನ್ನು ಎನ್ ಐಎಗೆ ವಹಿಸಿದೆ. ನಮ್ಮ ಮಗನ ಸಾವಿಗೆ ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಇತ್ತು. ಆದರೆ ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ಸುದ್ದಿ ಕೇಳಿ ನಮ್ಮ ನಂಬಿಕೆ ಕಳೆದು ಹೋಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಫೋನ್ ಬಳಕೆ ಮಾಡಿರುವ ವಿಷಯ ಗಮನಕ್ಕೆ ಬರುತ್ತಿದ್ದಂತೆ ಭಾನುವಾರ ಮುಂಜಾನೆಯೇ ಪೊಲೀಸ್ ಅಧಿಕಾರಿಗಳನ್ನು ಜೈಲಿಗೆ ಕಳುಹಿಸಿ ರೈಡ್ ಮಾಡಿಸಲಾಗಿದೆ. ಈ ವೇಳೆ ಕೆಲವು ಮೊಬೈಲ್ ಸಹ ಪತ್ತೆಯಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕಲುಷಿತ ನೀರು ಕುಡಿದು ಎರಡು ಗ್ರಾಮಗಳ 40 ಜನ ಅಸ್ವಸ್ಥ – ಮಹಿಳೆ ಸಾವು
ಕೆಲವು ಅಧಿಕಾರಿಗಳು ಹಲವು ವರ್ಷಗಳಿಂದ ಅಲ್ಲಿಯೇ ಬೀಡು ಬಿಟ್ಟಿದ್ದಾರೆ. ಹೀಗಾಗಿ ಇಂತಹ ಸಮಸ್ಯೆ ಎದುರಾಗುತ್ತಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಜೊತೆಗೆ ಹಲವು ವರ್ಷಗಳಿಂದ ಇರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಕ್ರಮ ವಹಿಸಲಾಗುವುದು ಎಂದು ಹೇಳಿದರು.
Live Tv
[brid partner=56869869 player=32851 video=960834 autoplay=true]
[brid partner=56869869 player=32851 video=960834 autoplay=true]