ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ ಕೊಡಗಿನ ಕುವರಿ ಹರ್ಷಿಕಾ ಪೂಣಚ್ಚ ಇದೀಗ `ಕಾಸಿನ ಸರ’ ಚಿತ್ರದ ಮೂಲಕ ಸೌಂಡ್ ಮಾಡ್ತಿದ್ದಾರೆ. ಹರ್ಷಿಕಾಗೆ ವಿಜಯ್ ರಾಘವೇಂದ್ರ ಸಾಥ್ ನೀಡ್ತಿದ್ದಾರೆ.
ಈಗಾಗಲೇ ಸಾಕಷ್ಟು ಚಿತ್ರಗಳ ಮೂಲಕ ಮೋಡಿ ಮಾಡಿರುವ ನಟಿ ಹರ್ಷಿಕಾ ಈಗ `ಕಾಸಿನ ಸರ’ ಚಿತ್ರದಲ್ಲಿ ಸಂಪಿಗೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹರ್ಷಿಕಾ ಕೃಷಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ನಟ ವಿಜಯ್ ರಾಘವೇಂದ್ರ ಕೂಡ ನಟಿಸಲಿದ್ದಾರೆ. ಈ ಚಿತ್ರದ ಮುಹೂರ್ತ ನೆರವೇರಿದ್ದು, ಚಿತ್ರಕ್ಕೆಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಿದ್ದಾರೆ.
Advertisement
ಎಂದೂ ಮಾಡಿರದ ಕೃಷಿಯಲ್ಲಿ ತೊಡಗಿಸಿಕೊಳ್ಳುವ ಯುವತಿಯ ಪಾತ್ರದಲ್ಲಿ ಹರ್ಷಿಕಾ ನಟಿಸಲಿದ್ದಾರೆ. ಇಷ್ಟು ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಇಂಥದ್ದೊಂದು ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿರಿಯ ನಿರ್ದೇಶಕ ನಂಜುಂಡೇಗೌಡ ನಿರ್ದೇಶನದ ಚಿತ್ರದಲ್ಲಿ ನಟ ವಿಜಯ್ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ದೊಡ್ಡ ನಾಗಯ್ಯ `ಕಾಸಿನ ಸರ’ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಗ್ರಾಮೀಣ ಭಾಗದ ಕಥೆಯಾದ್ದರಿಂದ ಚೆನ್ನಪಟ್ಟಣ್ಣ, ಮಳವಳ್ಳಿ ಮುಂತಾದ ಕಡೆ 40 ದಿನಗಳ ಚಿತ್ರೀಕರಣ ನಡೆಯಲಿದೆ. ಇದನ್ನೂ ಓದಿ:ಅಫೇರ್ ಆರೋಪ ಬೆನ್ನಲ್ಲೇ ಧಿಡೀರ್ ಸಂಭಾವನೆ ಹೆಚ್ಚಿಸಿಕೊಂಡ ಪವಿತ್ರಾ ಲೋಕೇಶ್
Advertisement
ಈ ಚಿತ್ರದ ಮುಹೂರ್ತದ ಸಂದರ್ಭದಲ್ಲಿ ಛಾಯಗ್ರಾಹಕ ವೇಣುಗೋಪಾಲ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮಾ.ಹರೀಶ್, ಹಿರಿಯ ನಿರ್ಮಾಪಕರಾದ ಚಿನ್ನೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು