ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಮತ್ತು ಭುವನ್ ಒಟ್ಟಾಗಿ ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿಲೆಬ್ರಿಟಿಗಳ ಮನೆಗೆ ಹೋಗಿ ನೀಡುತ್ತಿದ್ದಾರೆ. ಈ ಜೋಡಿಗೆ ಮದುವೆ ಆಮಂತ್ರಣ ಪತ್ರಿಕೆ ಹಂಚುವಾಗಲೇ ವಿಶೇಷ ಉಡುಗೊರೆಯೊಂದು ದೊರೆತಿದೆ. ಹಿರಿಯ ನಟಿ ಜಯಮಾಲ (Jayamala) ಅವರು ಹರ್ಷಿಕಾಗೆ ಚಿನ್ನದ ಓಲೆ ಗಿಫ್ಟ್ (Gift) ನೀಡಿದ್ದಾರೆ. ಭುವನ್–ಹರ್ಷಿಕಾಗೆ ವಿವಾಹಕ್ಕೂ ಮುನ್ನ ಚಿನ್ನದ ಉಡುಗೊರೆ ಕೊಟ್ಟು ಸರ್ ಪ್ರೈಸ್ ನೀಡಿದ್ದಾರೆ ಜಯಮಾಲ. ಜೊತೆಗೆ ತಾವೇ ಕೈಯಾರೆ ಕಿವಿಯೋಲೆ ಹಾಕಿ ಸಂಭ್ರಮಿಸಿದ್ದಾರೆ.
ಹಲವು ವರ್ಷಗಳಿಂದ ಸ್ನೇಹಿತರಾಗಿದ್ದ ನಟ ಭುವನ್ (Bhuvan) ಹಾಗೂ ನಟಿ ಹರ್ಷಿಕಾ ಪೂಣಚ್ಚ (Harshika Poonacha) ಸದ್ಯದಲ್ಲೇ ಹಸೆಮಣೆ ಏರಲಿದ್ದಾರೆ. ಸಹವಾಜವಾಗಿಯೇ ಅಭಿಮಾನಿಗಳಿಗೆ ಸಂಭ್ರಮ ತಂದಿದೆ. ಈಗಾಗಲೇ ಬ್ಯಾಚುಲರ್ ಪಾರ್ಟಿ ಮುಗಿಸಿಕೊಂಡು ಬಂದಿರುವ ಈ ಜೋಡಿ, ಇದೀಗ ತಮ್ಮ ಮದುವೆಗೆ ಗಣ್ಯರನ್ನು ಆಹ್ವಾನಿಸುತ್ತಿದೆ.
ಆಗಸ್ಟ್ 24ರಂದು ವಿರಾಜಪೇಟೆಯಲ್ಲಿ (Virajpet) ಅದ್ದೂರಿಯಾಗಿ ವಿವಾಹ ಮಹೋತ್ಸವ ನಡೆಯಲಿದ್ದು, ಸಾಕಷ್ಟು ಸಿದ್ದತೆಗಳನ್ನು ಮಾಡಲಾಗುತ್ತಿದೆ. ಕೊಡವ (Kodava) ಶೈಲಿಯಲ್ಲಿ ಭುವನ್ ಹಾಗೂ ಹರ್ಷಿಕಾ ಮದುವೆಯಾಗುತ್ತಿದ್ದು (Marriage), ಅದಕ್ಕಾಗಿ ವಿರಾಜಪೇಟೆಯ ‘ಅಮ್ಮತಿ ಕೊಡವ ಸಮಾಜ’ ಸಿಂಗಾರಗೊಳ್ಳಲಿದೆ. ಇದನ್ನೂ ಓದಿ:ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್
ಈಗಾಗಲೇ ಸಿನಿಮಾ ಹಾಗೂ ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಜೋಡಿ, ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ರಾಜಕೀಯ ಗಣ್ಯರನ್ನು ಮದುವೆಗೆ ಈ ಜೋಡಿ ಆಹ್ವಾನಿಸಿದೆ.
ಸಿನಿಮಾ ತಾರೆಯರಾದ ಶಿವರಾಜ್ ಕುಮಾರ್, ರವಿಚಂದ್ರನ್, ಗಣೇಶ್ , ದೊಡ್ಡಣ್ಣ, ಶ್ರೀನಾಥ್ ಜಯಮಾಲ, ಸುಧಾರಾಣಿ, ತಾರಾ, ಮಾಲಾಶ್ರೀ, ಅನುಪ್ರಭಾಕರ್, ಅಮೂಲ್ಯ, ದಿಗಂತ್, ಅಶ್ವಿನಿ ಪುನೀತ್ ರಾಜ್ ಕುಮಾರ್ , ರಾಘವೇಂದ್ರ ರಾಜ್ ಕುಮಾರ್, ಉಪೇಂದ್ರ ಹಾಗೂ ಪ್ರಿಯಾಂಕಾ ಉಪೇಂದ್ರ, ದುನಿಯಾ ವಿಜಯ್ ಸೇರಿದಂತೆ ಅನೇಕ ಗಣ್ಯರಿಗೆ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನಿಸಿದ್ದಾರೆ ಭುವನ್ ಮತ್ತು ಹರ್ಷಿಕಾ.
Web Stories