ನವದೆಹಲಿ: ಚುನಾವಣಾ ಫಲಿತಾಂಶದ ನಂತರ ಹರ್ಯಾಣ ರಾಜಕೀಯ ಕ್ಷಣ ಕ್ಷಣಕ್ಕೂ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಎಲ್ಲ ಪಕ್ಷೇತರ 7 ಹಾಗೂ ಹರ್ಯಾಣ ಲೋಕಹಿತ ಪಕ್ಷದ ಒಬ್ಬ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
ಹರ್ಯಾಣದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳು ಶತಾಯಗತಾಯ ಅಧಿಕಾರದ ಚುಕ್ಕಾಣಿ ಹಿಡಿಯಲೇಬೇಕೆಂದು ತಂತ್ರ ಹೆಣೆಯುತ್ತಿವೆ. ಒಂದೆಡೆ ಕಾಂಗ್ರೆಸ್ ಜನನಾಯಕ್ ಜನತಾ ಪಕ್ಷ(ಜೆಜೆಪಿ)ದ ನಾಯಕ ದುಶ್ಯಂತ್ ಚೌಟಾಲಾ ಅವರನ್ನು ಸೆಳೆಯಲು ಯತ್ನಿಸುತ್ತಿದೆ. ಬಿಜೆಪಿಯು ಸಹ ಗುರುವಾರ ಚೌಟಾಲಾ ಅವರನ್ನು ಸಂಪರ್ಕಿಸಲು ಯತ್ನಿಸಿತ್ತು. ಆದರೆ ಚೌಟಾಲಾ ಅವರು ಮುಖ್ಯಮಂತ್ರಿ ಹುದ್ದೆ ನೀಡುವವರಿಗೆ ತಮ್ಮ ಬೆಂಬಲ ಎಂದು ಪಟ್ಟು ಹಿಡಿದ್ದಾರೆ.
Advertisement
#WATCH Haryana Lokhit Party's Gopal Kanda,candidate from Sirsa assembly seat:All independent candidates have extended their unconditional support to BJP. My father was associated with RSS since 1926,fought 1st general elections of the country after independence on Jansangh ticket pic.twitter.com/FeS9c9Valq
— ANI (@ANI) October 25, 2019
Advertisement
ಗುರುವಾರ ಪ್ರಕಟವಾಗಿರುವ ವಿಧಾನಸಭಾ ಚುನಾವಣೆಯ ಫಲಿತಾಂಶ ಅಂತಂತ್ರ ಸ್ಥಿತಿಯನ್ನು ತಂದೊಡ್ಡಿದೆ. ಒಟ್ಟು 90 ಸ್ಥಾನಗಳ ಪೈಕಿ ಬಿಜೆಪಿ 40, ಕಾಂಗ್ರೆಸ್ 31 ಹಾಗೂ ಜನನಾಯಕ್ ಜನತಾ ಪಕ್ಷ 10 ಸೀಟ್‍ಗಳನ್ನು ಗೆದ್ದಿವೆ. ಇನ್ನು ಪಕ್ಷೇತರರು 7 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ. ಇತರೆ ಪಕ್ಷಗಳು ಎರಡು ಸ್ಥಾನಗಳನ್ನು ಪಡೆದಿವೆ. ಬಿಜೆಪಿ ಸರ್ಕಾರ ರಚಿಸಲು ಕೇವಲ 6 ಸ್ಥಾನಗಳ ಕೊರತೆ ಉಂಟಾಗಿದೆ. 31 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್ ಜೆಜೆಪಿ ಹಾಗೂ ಪಕ್ಷೇತರರ ಬೆಂಬಲದಿಂದ ಸರ್ಕಾರ ರಚಿಸಲು ಮುಂದಾಗಿತ್ತು. ಹೀಗಾಗಿ ಎರಡೂ ರಾಷ್ಟ್ರೀಯ ಪಕ್ಷಗಳ ಪೈಪೋಟಿ ನಡೆಸುತಿತ್ತು.
Advertisement
ನಿನ್ನೆ ಚೌಟಾಲಾ ಅವರನ್ನು ಎರಡೂ ರಾಜಕೀಯ ಪಕ್ಷಗಳ ನಾಯಕರು ಸಂಪರ್ಕಿಸಿದ್ದಾರೆ. ಮುಖ್ಯಮಂತ್ರಿ ಹುದ್ದೆಗೆ ಚೌಟಾಲಾ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಇಂದು ತಮ್ಮ ನಿರ್ಧಾರ ತಿಳಿಸುವುದಾಗಿ ಗುರುವಾರ ಹೇಳೀದ್ದರು. ಇದೀಗ ಭಾರೀ ಬೆಳವಣಿಗೆ ನಡೆದಿದ್ದು, 8 ಪಕ್ಷೇತರ ಶಾಸಕರು ಬಿಜೆಪಿಗೆ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಬಿಜೆಪಿ ಹರ್ಯಾಣದಲ್ಲಿ ಸರ್ಕಾರ ರಚಿಸುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಹರ್ಯಾಣ ರಾಜಕೀಯ ದಂಗಲ್‍ಗೆ ತೆರೆ ಬಿದ್ದಿದೆ.
Advertisement
Haryana's Independent Winning Candidate Randhir Golan:I was BJP worker for 30 years. I was in BJP, where did I go? BJP is my mother. pic.twitter.com/NssxPVYOeL
— ANI (@ANI) October 25, 2019
ಬಿಜೆಪಿ ಸೋಲಿಗೆ ಕಾರಣಗಳೇನು?
ಬಿಜೆಪಿಯಲ್ಲಿ ಪಕ್ಷ ನಿಷ್ಠರ ಕಡೆಗಣಿಸಿ, ಪಕ್ಷಾಂತರಿಗಳಿಗೆ ಮಣೆ ಹಾಕಲಾಯಿತು. ಇದರಿಂದಾಗಿ ಟಿಕೆಟ್ ಹಂಚಿಕೆಯಲ್ಲಿ ಅಸಮಾಧಾನ ಸ್ಫೋಟಗೊಂಡಿತ್ತು. ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್, ರಾಜ್ಯದಲ್ಲಿ ಮಿತಿಮೀರಿದ ನಿರುದ್ಯೋಗ ಹಾಗೂ ಸ್ಥಳೀಯ ಸಮಸ್ಯೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ್ದರು. ರಾಜ್ಯದಲ್ಲಿ ಜಾಟ್ ಸಮುದಾಯ ಹೆಚ್ಚಿದ್ದರೂ ಬ್ರಾಹ್ಮಣ ಸಮುದಾಯದ ಖಟ್ಟರ್ ಅವರಿಗೆ ಸಿಎಂ ಪಟ್ಟ ನೀಡದ ಪರಿಣಾಮ ಜಾಟ್ ಸಮುದಾಯದವರು ಜೆಜೆಪಿಯನ್ನು ಬೆಂಬಲಿಸಿದ್ದರು. ಬಿಜೆಪಿ ನಾಯಕರು ಪ್ರಚಾರದ ವೇಳೆ ಸಂವಿಧಾನದ 370ನೇ ವಿಧಿ ರದ್ದತಿ, ವೀರ್ ಸಾವರ್ಕರ್ ಅವರಿಗೆ ಭಾರತರತ್ನ ವಿಚಾರ ನೀಡುವ ವಿಚಾರವನ್ನು ಅಸ್ತ್ರವಾಗಿ ಬಳಸಿಕೊಂಡಿತ್ತು. ಅದು ಕೂಡ ಬಿಜೆಪಿಗೆ ಫಲಿಸಲಿಲ್ಲ. ಜೊತೆಗೆ ಅತಿಯಾದ ಆತ್ಮವಿಶ್ವಾಸ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಪ್ರಧಾನಿ ಮೋದಿ ಪ್ರಚಾರ ಫಲಕೊಡಲಿಲ್ಲ.