ಚಂಡೀಗಢ: ಜನಪ್ರಿಯ ಟಿಕ್-ಟಾಕ್ ಸ್ಟಾರ್ ಸೋನಾಲಿ ಪೋಗಟ್ ಅವರಿಗೆ ಬಿಜೆಪಿಯು ಹರ್ಯಾಣ ವಿಧಾನಸಭಾ ಚುನಾವಣೆ ಟಿಕೆಟ್ ನೀಡಿದೆ.
ಈ ಮೂಲಕ ಸೋನಾಲಿ ಪೋಗಟ್ ಕಾಂಗ್ರೆಸ್ ಪ್ರಾಬಲ್ಯದ ಆದಂಪುರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ. ಸೋನಾಲಿ ಬಾಲಿವುಡ್ ಹಾಡುಗಳಿಗೆ ಲಿಪ್ ಸಿಂಕ್ ಮಾಡಿ, ವಿಡಿಯೋವನ್ನು ಟಿಕ್-ಟಾಕ್‍ನಲ್ಲಿ ಪೋಸ್ಟ್ ಮಾಡುತ್ತಾ ಬಂದಿದ್ದಾರೆ. ಈ ಮೂಲಕ 1 ಲಕ್ಷಕ್ಕೂ ಅಧಿಕ ಫಾಲೋವರ್ಸ್ ಹೊಂದಿದ್ದಾರೆ. ಸೋನಾಲಿ ಅವರು ಇತ್ತೀಚೆಗೆ ಪೋಸ್ಟ್ ಮಾಡಿದ್ದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿತ್ತು.
Advertisement
https://twitter.com/jyotiyadaav/status/1179684177609777153
Advertisement
ಕಾಂಗ್ರೆಸ್ ಭದ್ರಕೋಟೆ ಭೇದಿಸಲು ಬಿಜೆಪಿಯು ಸೋನಾಲಿ ಅವರನ್ನು ಚುನಾವಣಾ ಕಣಕ್ಕೆ ಇಳಿಸಿದೆ. ಇದನ್ನು ಎದುರಿಸಲು ‘ಕೈ’ ಪಡೆ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ.
Advertisement
ಆದಂಪುರ ಕ್ಷೇತ್ರದಲ್ಲಿ ಕಾಂಗ್ರೆಸ್ 1969ರಿಂದಲೂ ಪ್ರಾಬಲ್ಯ ಸಾಧಿಸುತ್ತಾ ಬಂದಿದೆ. 1969 ರಿಂದ ಕಾಂಗ್ರೆಸ್ ಮುಖಂಡ ಭಜನ್ ಲಾಲ್ ಎಂಟು ಬಾರಿ ಗೆಲುಸು ಸಾಧಿಸಿದ್ದರು. ನಂತರ ಭಜನ್ ಲಾಲ್ ಪತ್ನಿ ಜಸ್ಮಾ ದೇವಿ ಹಾಗೂ ಪುತ್ರ ಕುಲ್ದೀಪ್ ಬಿಶ್ನೋಯ್ ಕ್ರಮವಾಗಿ 1987 ಹಾಗೂ 1998ರಲ್ಲಿ ಗೆಲುವು ಕಂಡಿದ್ದರು. 2014ರ ವಿಧಾನಸಭಾ ಚುನಾವಣೆಯಲ್ಲಿ ಹರ್ಯಾಣ ಜನಹಿತ ಪಕ್ಷವು (ಎಚ್‍ಜೆಪಿ) ಗೆಲುವು ಸಾಧಿಸಿತ್ತು. ಆದರೆ 2019ರಲ್ಲಿ ಎಚ್‍ಜೆಪಿ ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಂಡಿತು.
Advertisement
ಹರ್ಯಾಣದ 90 ವಿಧಾನಸಭಾ ಕ್ಷೇತ್ರಗಳಲ್ಲಿ ಅಕ್ಟೋಬರ್ 21ರಂದು ಮತದಾನ ನಡೆಯಲಿದೆ. ಅಕ್ಟೋಬರ್ 24ರಂದು ಫಲಿತಾಂಶ ಹೊರ ಬೀಳಲಿದೆ.