ಚಂಡೀಗಢ: ಅಕ್ಟೋಬರ್ 5 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ (Haryana Assembly Elections) ಕೆಲವೇ ದಿನಗಳು ಬಾಕಿಯಿರುವ ಹೊತ್ತಿನಲ್ಲೇ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ ಕಂಡುಬಂದಿದೆ. ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಲು ನಿರ್ಧರಿಸಿದ ನಂತರ ಹರಿಯಾಣದ ಮಾಜಿ ಸಚಿವ ರಂಜಿತ್ ಸಿಂಗ್ ಚೌಟಾಲಾ ಸೇರಿ 8 ಮಂಡಿಯನ್ನು ಬಿಜೆಪಿ ಪಕ್ಷದಿಂದಲೇ ಉಚ್ಛಾಟಿಸಿದೆ.
ಈ 8 ಮಂದಿ ನಾಯಕರು ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ (Nayab Singh Saini) ಸೇರಿದಂತೆ ಬಿಜೆಪಿಯ ನಾಯಕರ ವಿರುದ್ಧ ಸ್ಪರ್ಧಿಸಿ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದರು. ಇದರಿಂದಾಗಿ ತಕ್ಷಣವೇ ಜಾರಿಗೆ ಬರುವಂತೆ 6 ವರ್ಷಗಳ ಕಾಲ ನಾಯಕರನ್ನು ಉಚ್ಚಾಟಿಸಿರುವುದಾಗಿ ಹರಿಯಾಣ ಬಿಜೆಪಿಯ ಮುಖ್ಯಸ್ಥ ಮೋಹನ್ ಲಾಲ್ (Mohan Lal) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಎಡಿಜಿಪಿ ಕುಮಾರಸ್ವಾಮಿಯನ್ನ ಹಂದಿ ಎಂದಿದ್ದಾರಾ? – ಸಿದ್ದರಾಮಯ್ಯ ಪ್ರಶ್ನೆ
Advertisement
Advertisement
ಅಸ್ಸಾಂದ್ ಕ್ಷೇತ್ರದಿಂದ ಸ್ಪರ್ಧಿಸಿರುವ ಜಿಲೆ ರಾಮ್ ಶರ್ಮಾ, ಸಫಿಡೊದಿಂದ ಮಾಜಿ ಸಚಿವ ಬಚನ್ ಸಿಂಗ್ ಆರ್ಯ, ಮೆಹಮ್‌ನಿಂದ ರಾಧಾ ಅಹ್ಲಾವತ್, ಗುರ್ಗಾಂವ್‌ನಿಂದ ನವೀನ್ ಗೋಯಲ್ ಮತ್ತು ಹಥಿನ್‌ನಿಂದ ಕೆಹರ್ ಸಿಂಗ್ ರಾವತ್ ಮತ್ತು ಮಾಜಿ ಶಾಸಕ ದೇವೇಂದ್ರ ಕಡ್ಯಾನ್ ಉಚ್ಛಾಟಿತ ಆರು ನಾಯಕರು. ಇದನ್ನೂ ಓದಿ: ಮೊದಲ ಬಾರಿಗೆ ಜಮೈಕಾ ಪ್ರಧಾನಿ ಭಾರತ ಪ್ರವಾಸ – ಸೋಮವಾರದಿಂದ 4 ದಿನಗಳ ಭೇಟಿ
Advertisement
ಚೌಟಾಲಾ ಪಕ್ಷೇತರ ಶಾಸಕರಾಗಿದ್ದಾಗ ವಿಧಾನಸಭೆ ಪ್ರತಿನಿಧಿಸುತ್ತಿದ್ದ ರಾನಿಯಾ ಕ್ಷೇತ್ರದಿಂದ ಟಿಕೆಟ್ ನಿರಾಕರಿಸಿದ ನಂತರ ಬಿಜೆಪಿ ತೊರೆಯಲು ನಿರ್ಧರಿಸಿದರು. ಈ ವರ್ಷದ ಆರಂಭದಲ್ಲಿ ನಡೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸೇರುವ ಮುನ್ನ ಚೌಟಾಲಾ ವಿಧಾನಸಭೆಯ ಸದಸ್ಯತ್ವ ತೊರೆದಿದ್ದರು. ಅವರು ಹಿಸಾರ್‌ನಿಂದ ಸಂಸತ್ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು.
Advertisement
ಕಾಂಗ್ರೆಸ್‌ನಲ್ಲೂ ಬಂಡಾಯ ಭೀತಿ:
ಸದ್ಯ ಹರಿಯಾಣದಲ್ಲಿ ಕಾಂಗ್ರೆಸ್ ಕೂಡ ಬಂಡಾಯ ಭೀತಿ ಎದುರಿಸುತ್ತಿದೆ. ಇತ್ತೀಚೆಗಷ್ಟೇ ಬಿಜೆಪಿಯ ಮಾಜಿ ಸಚಿವ ಅನಿಲ್ ವಿಜ್ ವಿರುದ್ಧ ಅಂಬಾಲಾ ಕಂಟೋನ್ಮೆಂಟ್‌ನಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಂಡಾಯ ಅಭ್ಯರ್ಥಿ ಚಿತ್ರಾ ಸರ್ವರಾ ಅವರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ಅಲ್ಲದೇ ಕಳೆದ ಶುಕ್ರವಾರವೂ ಪಕ್ಷ ವಿರೋಧಿ ಚಟುವಟಿಕೆಗಾಗಿ 13 ನಾಯಕರನ್ನು ಕಾಂಗ್ರೆಸ್ ಉಚ್ಛಾಟಿಸಿತ್ತು.
90 ಸದಸ್ಯ ಬಲದ ಹರಿಯಾಣ ವಿಧಾನಸಭೆಗೆ ಅಕ್ಟೋಬರ್ 5 ರಂದು ಚುನಾವಣೆ ನಡೆಯಲಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ. ಇದನ್ನೂ ಓದಿ: ಹಳಿ ಮಧ್ಯೆ ಅಗ್ನಿಶಾಮಕ ಸಿಲಿಂಡರ್ ಪತ್ತೆ – ರೈಲು ದುಷ್ಕೃತ್ಯಕ್ಕೆ ಸಂಚು; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ದುರಂತ