LatestLeading NewsMain PostNational

ಭಾರತವನ್ನು ಹಿಂದೂ ರಾಷ್ಟ್ರ ಮಾಡುತ್ತೇವೆ: ಹರಿಯಾಣ ಶಾಸಕ ಅಸೀಮ್‌ ಪ್ರತಿಜ್ಞೆ

ಚಂಡೀಗಢ: ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಯಾವ ತ್ಯಾಗಕ್ಕೂ ಸಿದ್ಧರಿದ್ದೇವೆ ಎಂದು ಹರಿಯಾಣದ ಹಂಬಾಲ ನಗರ ಕ್ಷೇತ್ರದ ಬಿಜೆಪಿ ಶಾಸಕ ಅಸೀಮ್‌ ಗೋಯೆಲ್‌ ಪ್ರತಿಜ್ಞೆ ಮಾಡಿದ್ದಾರೆ.

ಹಲವರೊಂದಿಗೆ ಗೋಯೆಲ್‌ ಪ್ರತಿಜ್ಞೆ ಮಾಡುತ್ತಿರುವ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಇದನ್ನೂ ಓದಿ: ಬಾಬರಿ ಧ್ವಂಸ ವೇಳೆ ಶಿವಸೇನೆ ಎಲ್ಲಿತ್ತು ಎಂದು ನಿಮ್ಮ ನಾಯಕರನ್ನು ಕೇಳಿ: ಬಿಜೆಪಿಗೆ ರಾವತ್ ತಿರುಗೇಟು

ಹಿಂದೂಸ್ತಾನವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಪ್ರತಿಜ್ಞೆ ಮಾಡುತ್ತಿದ್ದೇವೆ. ನಮ್ಮ ಪ್ರತಿಜ್ಞೆಗೆ ನಾವು ಬದ್ಧರಾಗಿದ್ದೇವೆ ಎಂದು ಶಾಸಕ ಇತರರೊಂದಿಗೆ ಪ್ರತಿಜ್ಞೆ ಮಾಡುತ್ತಿರುವ ದೃಶ್ಯ ವೀಡಿಯೋದಲ್ಲಿ ಇದೆ.

ಯಾವುದೇ ಬೆಲೆ ತೆತ್ತಾದರೂ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸಬೇಕಾಗಿದೆ. ನಾವು ಗುರಿ ಸಾಧಿಸಲು ಪೂರ್ವಜರು ಮತ್ತು ಹಿಂದೂ ದೇವತೆಗಳು ನಮಗೆ ಶಕ್ತಿ ದಯಪಾಲಿಸಲಿ ಎಂದು ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಜಹಾಂಗೀರ್‌ಪುರಿ ಹಿಂಸಾಚಾರ – ಆರೋಪಿಗಳನ್ನು ಮುಗ್ದರೆಂದ ಜಮಿಯತ್ ನಿಯೋಗ

ಈ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಗೋಯೆಲ್‌, ನಾನೊಬ್ಬ ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆ ಇದೆ. ನಾನು ಹಿಂದೂ ಆಗಿ ಪ್ರತಿಜ್ಞೆ ಮಾಡುತ್ತಿದ್ದೇನೆಯೇ ಹೊರತು ಬಿಜೆಪಿ ಶಾಸಕನಾಗಿ ಅಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published.

Back to top button