ಚಂಡೀಗಢ: ಇದೇ ಏ.22ರಂದು ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತಪಟ್ಟ ನೌಕಾಪಡೆಯ ಅಧಿಕಾರಿ ಲೆಫ್ಟಿನೆಂಟ್ ವಿನಯ್ ನರ್ವಾಲ್ (Vinay Narwal) ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮತ್ತು ಸರ್ಕಾರಿ ಉದ್ಯೋಗ ನೀಡುವುದಾಗಿ ಹರಿಯಾಣ ಸಿಎಂ ನಯಾಬ್ ಸಿಂಗ್ ಸೈನಿ (Nayab Singh Saini) ಘೋಷಣೆ ಮಾಡಿದ್ದಾರೆ.
ಅಧಿಕೃತ ಹೇಳಿಕೆಯ ಪ್ರಕಾರ, ನರ್ವಾಲ್ ಅವರ ಪೋಷಕರ ಆಶಯದಂತೆ ಕುಟುಂಬದ ಯಾವುದೇ ಸದಸ್ಯರಿಗೆ ಈ ಕೆಲಸವನ್ನು ನೀಡಲಾಗುವುದು ಎಂದು ಸಿಎಂ ಸೈನಿ ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಭಾರತ-ಪಾಕ್ ನಡುವಿನ ಉದ್ವಿಗ್ನತೆಯಿಂದ ಯುದ್ಧದ ಭೀತಿ – ಗಡಿಯಲ್ಲಿ ಬಂಕರ್ ಶುಚಿಗೊಳಿಸುವ ಕಾರ್ಯ ಚುರುಕು
ಹರಿಯಾಣದ ಕರ್ನಾಲ್ ನಿವಾಸಿಯಾಗಿದ್ದ ಲೆಫ್ಟಿನೆಂಟ್ ವಿನಯ್ ನರ್ವಾಲ್ ಅವರ ಅಂತ್ಯಕ್ರಿಯೆಯನ್ನು ಏಪ್ರಿಲ್ 23 ರಂದು ನಡೆಸಲಾಯಿತು. ಹರಿಯಾಣ ಮುಖ್ಯಮಂತ್ರಿ ನಯಾಬ್ ಸೈನಿ ಕೂಡ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಇದನ್ನೂ ಓದಿ: ಕಾಶ್ಮೀರದ ಹಲವೆಡೆ ಭದ್ರತಾ ಸಿಬ್ಬಂದಿ ಭರ್ಜರಿ ಕಾರ್ಯಾಚರಣೆ – ಇದುವರೆಗೆ 175ಕ್ಕೂ ಹೆಚ್ಚು ಮಂದಿ ವಶಕ್ಕೆ