ಚಂಡೀಗಢ: ಜಿಮ್‍ಗೆ ತೆರಳಿದ್ದ ಹರ್ಯಾಣ ಕಾಂಗ್ರೆಸ್ ವಕ್ತಾರ, ನಾಯಕ ವಿಕಾಸ್ ಚೌಧರಿ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಗುರುವಾರ ಬೆಳಿಗ್ಗೆ ಫರಿದಾಬಾದ್‍ನಲ್ಲಿ ನಡೆದಿದೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವಿಕಾಸ್ ಚೌಧರಿ ಅವರ ಮೇಲೆ ದುಷ್ಕರ್ಮಿಗಳ ಗುಂಪು ಏಕಾಏಕಿ ಗುಂಡಿನ ದಾಳಿ ನಡೆಸಿ ಪರಾರಿಯಾಗಿದೆ. ಗುಂಡು ತಗುಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಆಸ್ಪತ್ರೆಗೆ ತರುವ ಮಾರ್ಗ ಮಧ್ಯದಲ್ಲಿಯೇ ವಿಕಾಸ್ ಚೌಧಿರಿ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
Advertisement
Haryana: Congress leader Vikas Chaudhary who was shot at in Faridabad and later succumbed to injuries. pic.twitter.com/k9P1nipmMy
— ANI (@ANI) June 27, 2019
Advertisement
ವಿಕಾಸ್ ಚೌಧರಿ ಅವರು ಎಂದಿನಂತೆ ಇಂದು ಜಿಮ್‍ಗೆ ಹೋಗುತ್ತಿದ್ದರು. ಇದನ್ನು ಅರಿತು ಪ್ಲಾನ್ ರೂಪಿಸಿದ್ದ ದುಷ್ಕರ್ಮಿಗಳು, ಗುರುವಾರ ಬೆಳಿಗ್ಗೆ 9 ಗಂಟೆಗೆ ಕಾರಿನಿಂದ ಇಳಿದ ವಿಕಾಸ್ ಅವರ ಮೇಲೆ ದಾಳಿ ಮಾಡಿದ್ದಾರೆ. ಘಟನೆಯ ದೃಶ್ಯವು ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
Advertisement
ಬಿಳಿ ಬಣ್ಣದ ಮಾರುತಿ ಸುಜುಕಿ ಎಸ್‍ಎಕ್ಸ್4 ಕಾರಿನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು 10ಕ್ಕೂ ಹೆಚ್ಚು ಗುಂಡು ಹಾರಿಸಿದ್ದಾರೆ. ಪರಿಣಾಮವಿಕಾಸ್ ಅವರ ಕುತ್ತಿಗೆ ಹಾಗೂ ಎದೆ ಭಾಗಗಕ್ಕೆ ಗುಂಡು ತಗುಲಿ ಗಂಭೀರವಾಗಿ ಗಾಯಗೊಂಡಿದ್ದರು. ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದ ಸಮೀಪದ ಸರ್ವೋದಯ ಆಸ್ಪತ್ರೆಗೆ ಸಾಗಿಸಲಾಗಿತ್ತು.
Advertisement
Haryana: Congress leader Vikas Chaudhary shot at in Faridabad. More details awaited. pic.twitter.com/m6Zqru6JOy
— ANI (@ANI) June 27, 2019
ಈ ಸಂಬಂಧ ತನಿಖೆ ಆಂಭವಾಗಿದ್ದು, ಆರೋಪಿಗಳಿಗ ಶೋಧ ಕಾರ್ಯ ನಡೆದಿದೆ. ಘಟನಾ ಸ್ಥಳದಲ್ಲಿದ್ದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ. ಇದೊಂದು ಪೂರ್ವಯೋಜಿತ ಹತ್ಯೆ ಎಂದು ಡಿಸಿಪಿ ಜೈವೀರ್ ರಥಿ ಹೇಳಿದ್ದಾರೆ.
ಮುಖಂಡ ವಿಕಾಸ್ ಚೌಧರಿ ಕೊಲೆಯನ್ನು ಖಂಡಿಸಿರುವ ಹರ್ಯಾಣ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ತನ್ವಾರ್ ಅವರು, ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಆರೋಪಿಗಳನ್ನು ಪತ್ತೆ ಹಚ್ಚಿ, ಬಂಧಿಸಬೇಕು. ತನಿಖೆಯನ್ನು ಚುರುಕುಗೊಳಿಸಬೇಕು ಎಂದು ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಒತ್ತಾಯಿಸಿದ್ದಾರೆ.
Haryana Chief Minister Manohar Lal Khattar on Congress leader Vikas Chaudhary shot dead in Faridabad: It is not in my knowledge right now. pic.twitter.com/NaG4nWzUKB
— ANI (@ANI) June 27, 2019